ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಶ್ವಾಸಾರ್ಹವಾಗಿ ಬೆಳೆಯುತ್ತಿರುವ ಸುಕೋ ಬ್ಯಾಂಕ್ 7.87 ಕೋಟಿ ರೂಪಾಯಿ ಲಾಭ

Advertisement
ಬಳ್ಳಾರಿ, ಏ. 02 ಸಹಕಾರಿ ಕ್ಷೇತ್ರದಲ್ಲಿ ವಿಶ್ವಾಸಾರ್ಹವಾಗಿ ಬೆಳೆಯುತ್ತಿರುವ ಸುಕೋ ಬ್ಯಾಂಕ್' 2022-23ರ ಆರ್ಥಿಕ ಸಾಲಿನಲ್ಲಿ ಒಟ್ಟು 1560 ಕೋಟಿ ರೂಪಾಯಿ ವಹಿವಾಟು ನಡೆಸಿ, ಶೇ.23.43% ರಷ್ಟು ಪ್ರಗತಿ ಸಾಧಿಸಿ 7.87 ಕೋಟಿ ರೂಪಾಯಿ ಲಾಭಗಳಿಸಿದ್ದು, ಬ್ಯಾಂಕ್‌ನ ಎನ್‌ಪಿಎ ಶೂನ್ಯವಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಮೋಹಿತ್ ಮಸ್ಕಿ ಅವರು ತಿಳಿಸಿದ್ದಾರೆ.

ಸುಕೋ ಬ್ಯಾಂಕ್ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿ, ಒಟ್ಟು ಲಾಭ 18.65 ಕೋಟಿ ರೂಪಾಯಿ ಆಗಿದ್ದು, ತೆರಿಗೆ ಪಾವತಿಯ ನಂತರ ನಿವ್ವಳ ಲಾಭ 7.87 ಕೋಟಿ ರೂಪಾಯಿ ಆಗಿದೆ. ಬ್ಯಾಂಕ್‌ನ ಎನ್‌ಪಿಎ (ನಿವ್ವಳ ಅನುತ್ಪಾದಕ ಆಸ್ತಿ) ಶೇ. 0% ರಷ್ಟಿದೆ ಎಂದರು.

ಸುಕೋ ಬ್ಯಾಂಕ್ ಕರ್ನಾಟಕದಾದ್ಯಂತ ಕಾರ್ಯಕ್ಷೇತ್ರ ವ್ಯಾಪ್ತಿಯನ್ನು ಹೊಂದಿದ್ದು 29 ಶಾಖೆಗಳಲ್ಲಿ ತನ್ನ ವ್ಯವಹಾರವನ್ನು ನಡೆಸಿದೆ. ಒಟ್ಟು 940 ಕೋಟಿ ರೂಪಾಯಿ ಠೇವಣಿ ಹೊಂದಿ, 620 ಕೋಟಿ ರೂಪಾಯಿ ಸಾಲ ವಿತರಣೆ ಮಾಡಿದೆ. ಒಟ್ಟು ಸಾಲದಲ್ಲಿ 25 ಲಕ್ಷದೊಳಗಿನ ಕಿರು ಸಾಲಗಳು 252 ಕೋಟಿ ಇದ್ದು, ಇದು ಒಟ್ಟು ಸಾಲದ ಶೇ.41 ರಷ್ಟು ಇರುತ್ತದೆ. ಸುಕೋ ಬ್ಯಾಂಕ್ ಎಂ.ಎಸ್.ಎA.ಇ ವಲಯಕ್ಕೆ ನೀಡುತ್ತಿರುವ ಮಹತ್ವವನ್ನು ಇದು ಸಾಬೀತು ಮಾಡುತ್ತದೆ ಎಂದರು.

ಸುಕೋ ಬ್ಯಾಂಕ್ ಕೇಂದ್ರ ಸರ್ಕಾರದ ಯುಪಿಐ ಹಣ ಪಾವತಿ ತಂತ್ರಜ್ಞಾನದ ವ್ಯವಸ್ಥೆಗೆ ಒಳಪಟ್ಟಿದೆ. ಹೊಸ ತಂತ್ರಜ್ಞಾನವನ್ನು ದೈನಂದಿನ ವ್ಯವಹಾರದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅನೇಕ ಪ್ರಥಮಗಳ ಗೌರವಕ್ಕೆ ಪ್ರಾಪ್ತಿಯಾಗಿದೆ ಎಂದರು.



ರೆಪೋ ರಿಲೇಟೆಡ್ ರೇಟ್' ಠೇವಣಿ ಯೋಜನೆ ಅಡಿಯಲ್ಲಿ ನಮ್ಮ ಗ್ರಾಹಕರ ಉಳಿತಾಯಕ್ಕೆ ಹಣದುಬ್ಬರಕ್ಕಿಂತ ಹೆಚ್ಚಿನ ಬಡ್ದಿ ನೀಡಿ ಅವರ ಉಳಿತಾಯಕ್ಕೆ ಗೌರವ ನೀಡುವ ನಿಟ್ಟಿನಲ್ಲಿ ಕಳೆದ ವರ್ಷ ಹೊಸ ಹಾಗೂ ವಿನೂತನ ಠೇವಣಿ ಯೋಜನೆಯನ್ನು ಜಾರಿ ತಂದಿದ್ದೇವೆ. ರೆಪೋ ರೇಟ್‌ಗಿಂತ ಶೇ.2.20% ಹೆಚ್ಚು ಬಡ್ಡಿಯನ್ನು ಈ ಯೋಜನೆಯಲ್ಲಿ ನೀಡುತ್ತಿದ್ದು 3 ವರ್ಷಗಳ ಠೇವಣಿ ಯೋಜನೆ ಇದಾಗಿದೆ. ಪ್ರತೀ ಆರು ತಿಂಗಳಿಗೊಮ್ಮೆ ರಿಜರ್ವ್ ಬ್ಯಾಂಕಿನ ರೆಪೋ ರೇಟ್ ಅನುಸಾರ ಬಡ್ಡಿದರ ಬದಲಾಗುತ್ತದೆ. ಇದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ವಿನೂತನ ಠೇವಣಿ ಯೋಜನೆಯಾಗಿದೆ ಎಂದು ಹೇಳಿದರು.

ನವೆಂಬರ್ ತಿಂಗಳಿನಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದು, ಶೇ. 8.10 ಬಡ್ಡಿ ನೀಡುತ್ತಿದ್ದು ಏಪ್ರೀಲ್ 1 ರ ನಂತರ ಶೇ. 8.70 ಬಡ್ಡಿದರ ನೀಡಲಾಗುತ್ತಿದೆ. ಹಣದುಬ್ಬರ ನಿರ್ವಹಿಸಲು ಇದು ಉತ್ತಮ ಠೇವಣಿ ಯೋಜನೆಯಾಗಿದ್ದು ಗ್ರಾಹಕರು ಈ ಯೋಜನೆಯ ಸದವಕಾಶ ಪಡೆಯಬಹುದಾಗಿದೆ ಎಂದರು.



ನಮ್ಮ ಭಾಗದಲ್ಲಿರುವ ಶೈತ್ಯಾಗಾರ ಗೋದಾಮುಗಳ ಜೊತೆ ಒಪ್ಪಂದ ಮಾಡಿಕೊಂಡು ರೈತರು ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಕಡಿಮೆ ಬಡ್ಡಿ ದರದಲ್ಲಿ ರೂ. 36 ಕೋಟಿ ಸಾಲವನ್ನು ವಿತರಿಸಿ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್. ಗಿರೀಶ್, ಆಡಳಿತ ಮಂಡಳಿಯ ಕಾರ್ಯದರ್ಶಿ ವೆಂಕಟೇಶ್‌ರಾವ್ ಅವರು ಈ ಸಂದರ್ಭದಲ್ಲಿ

ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ