https://www.instagram.com/reel/DUI6Cs1ksLJ/?igsh=MThjaXgwd3FqNXRoOA==
ಆರೋಗ್ಯ ಸೇವೆಗಳಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಕಾಪಾಡುವುದು ಪ್ರತಿಯೊಬ್ಬ ವೈದ್ಯರು ಮತ್ತು ಸಿಬ್ಬಂದಿಯ ಪ್ರಮುಖ ಜವಾಬ್ದಾರಿ ಎಂಬುದನ್ನು ಸರ್ಕಾರ ಉಲ್ಲೇಖಿಸಿದೆ.

ಆಯುಕ್ತರ ಸ್ಪಷ್ಟನೆ,ಆರೋಗ್ಯ ಇಲಾಖೆಯ ಆಯುಕ್ತ ಗುರುದತ್ತ ಹೆಗಡೆ ಮಾತನಾಡಿ, ವೇತನ, ಬಡ್ತಿ ಪರಿಷ್ಕರಣೆ ಸೇರಿದಂತೆ ಸೇವಾ ಸಂಬಂಧಿತ ಬೇಡಿಕೆಗಳ ಕುರಿತು ನೌಕರರು ಕಾನೂನುಬದ್ಧ ಮಾರ್ಗದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಸಾರ್ವಜನಿಕ ಆರೋಗ್ಯ ಸೇವೆಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಯಾವುದೇ ಪ್ರತಿಭಟನೆ ನಡೆಸಬಾರದು ಎಂದು ಅವರು ಎಚ್ಚರಿಸಿದ್ದಾರೆ.
ಸಾಮೂಹಿಕ ಮುಷ್ಕರಕ್ಕೆ ವಿರೋಧ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ರೋಗಿಗಳ ಆರೈಕೆ, ತುರ್ತು ಚಿಕಿತ್ಸೆ ಸೇರಿದಂತೆ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮೂಹಿಕ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಸೂಚಿಸಿದೆ.
ಮುಂದೇನು? ಮಾ.11ರಿಂದ ಮುಷ್ಕರ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸರ್ಕಾರ ಮತ್ತು ನೌಕರ ಸಂಘಟನೆಗಳ ನಡುವೆ ಮಾತುಕತೆ ನಡೆಯುವ ನಿರೀಕ್ಷೆಯಿದ್ದು, ಸಮಸ್ಯೆ ಶೀಘ್ರದಲ್ಲೇ ಬಗೆಹರಿಯುವಂತಾಗುತ್ತದೆಯೇ ಎಂಬುದು ಕಾದು ನೋಡಬೇವೈದ್ಯರ ಪ್ರತಿಭಟನೆಗೆ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆಕಾಗಿದೆ.













