ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಡಗರ ಸಂಭ್ರಮದಿಂದ ಜರುಗಿದ ಉತ್ತರೇಶ್ವರ ರಥೋತ್ಸವ

Advertisement
ಏಪ್ರಿಲ್ 6. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದಲ್ಲಿ ದವನದ ಹುಣ್ಣಿಮೆಯಂದು ಗ್ರಾಮದ ಆರಾಧ್ಯ ದೈವ ಶ್ರೀ ಉತ್ತರೇಶ್ವರ ರಥೋತ್ಸವ ಸಾವಿರಾರು ಭಕ್ತರ ಸಡಗರ ಸಂಭ್ರಮದ ಮಧ್ಯೆ ಅದ್ದೂರಿಯಾಗಿ ಜರುಗಿತು.

ಬೆಳಿಗ್ಗೆ ಸಂಪ್ರದಾಯದಂತೆ ಜಾತ್ರಾ ವಿಶೇಷ ಪೂಜಾ ಕಾರ್ಯಗಳು ನಡೆದವು ಉತ್ಸವ ಮೂರ್ತಿಯನ್ನು ಮತ್ತು ದೇವಸ್ಥಾನವನ್ನು ಅಲಂಕಾರ ಮಾಡಲಾಗಿತ್ತು. ದ್ಯಾವಮ್ಮ ದೇವಿ ದೇವಸ್ಥಾನದಿಂದ ಸಣ್ಣ ತೆರನ್ನು ಡೊಳ್ಳು ಮತ್ತು ಮೇಳ ಸಕಲ ವಾದ್ಯ ವೈಭವಗಳೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತಂದು ಸಣ್ಣ ತೆರನ್ನು ಎಳೆಯಲಾಯಿತು.

ಸಂಜೆ 6 ಗಂಟೆಗೆ ಶ್ರೀ ಉತ್ತರೇಶ್ವರ ಸ್ವಾಮಿಯ ರಥೋತ್ಸವದ ರಥಕ್ಕೆ ವೈವಿದ್ಯಮಯ ಹೂಗಳು ಹಾಗೂ ತಳಿರು ತೋರಣದಿಂದ ಅಲಂಕಾರ ಮಾಡಲಾಗಿತ್ತು. ಶ್ರೀ ಉತ್ತರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕ ರವರು ರಥದಲ್ಲಿ ಅಸೀನರಾಗುತ್ತಿದ್ದಂತೆ ನೆರೆದಿದ್ದ ಭಕ್ತರು ದೇವರ ಜಯ ಘೋಷ ಕೂಗಿ, ರಥ ಎಳೆದು ಹೂ ಹಣ್ಣು ಎಸದು ಭಕ್ತಿ ಭಾವ ಮೆರೆದರು.

ಹಾಗೆ ರಥೋತ್ಸವದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ಟಾಸ್ಕ್ ಫೋರ್ಸ್ ಸಮಿತಿ (ರಕ್ತ ಸುರಕ್ಷತೆ) ಬಳ್ಳಾರಿ, ಸ್ವಾಮಿ ವಿವೇಕಾನಂದ ರಕ್ತ ಕೇಂದ್ರ ಬಳ್ಳಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕರೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.



ಉತ್ತನೂರು ಗ್ರಾಮದ ಅಗಸೆ ಮುಂಭಾಗದ ಅವರಣದಲ್ಲಿ ಊರಿನ ಯುವಕರು,ಹಿರಿಯರು, ಮುಖಂಡರು,ಎಲ್ಲಾ ಸಂಘ ಸಂಸ್ಥೆಗಳು ಹಾಗೂ ಊರಿನ ಜನರಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ವರದಿ. ಕಾಜಮೈನುದ್ದೀನ್ ಸಿರುಗುಪ್ಪ

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ