ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಮತದಾನ ಮಾಡುವುದು ಅತ್ಯಗತ್ಯ: ಸಿಇಒ ಶಶಿಧರ ಕುರೇರ

Advertisement
ರಾಯಚೂರು,ಏ.27(ಕ.ವಾ):- ಮತದಾನವೆಂಬುವುದು ಪ್ರತಿಯೊಬ್ಬರು ಹಕ್ಕು ಹಾಗೂ ಜವಬ್ದಾರಿಯಾಗಿದ್ದು, ಮುಖ್ಯವಾಗಿ ಕಾರ್ಮಿಕರು ಮತ್ತು ರೈತರು ಈ ದೇಶದ ಅತಿ ದೊಡ್ಡ ಶಕ್ತಿಯಾಗಿದ್ದಾರೆ. ಅವರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ರಾಷ್ಟ್ರವನ್ನು ನಿರ್ಮಾಣ ಮಾಡಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂ ಆದ ಶಶಿಧರ ಕುರೇರ ಅವರು ಹೇಳಿದರು.



ಅವರು ಏ.27ರ(ಗುರುವಾರ) ನಗರದ ಹೊರ ವಲಯದ ಶಿಲ್ಪಾ ಮೆಡಿಕೇರ್ ಹಾಗೂ ರಾಯ್‍ಕೇಮ್ ಮೆಡಿಕೇರ್ ಕಂಪನಿಗಳಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಪ್ರತಿಯೊಬ್ಬರು ಸಂವಿಧಾನದ ಆಶಯಗಳನ್ನು ಹಾಗೂ ಅಂಶಗಳನ್ನು ಅರಿತುಕೊಂಡು, ಉತ್ತಮ ಸರ್ಕಾರವನ್ನು ರಚನೆ ಮಾಡಲು ದೇಶದ ಪ್ರತಿಯೊಬ್ಬರ ಪ್ರಜೆಗೂ ನೀಡಲಾದ ಅಧಿಕಾರವನ್ನು ಹಾಗೂ ಜವಾಬ್ದಾರಿಯನ್ನು ನಿಭಾಯಿಸಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.



ಇದೇ ವೇಳೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಎಲ್.ಚಂದ್ರಶೇಖರ ನಾಯಕ ಅವರು ಮತದಾರರ ಪ್ರತಿಜ್ಞಾ ವಿಧಿಯನ್ನು ಭೋಧಿಸಿ ಮಾತನಾಡಿ, ದೇಶದ ಆರ್ಥಿಕತೆ ಮತ್ತು ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವವಾಗಿದ್ದು, ಕಾರ್ಮಿಕರು ಕಡ್ಡಾಯವಾಗಿ ಮತದಾನ ಮಾಡಿದಾಗ ಮಾತ್ರ ದೇಶ ಉತ್ತಮವಾಗಿ ಮುಂದುವರೆಯಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹ್ಮದ್ ಜಿಲಾನಿ ಸೇರಿದಂತೆ ಕಂಪನಿಗಳ ಮುಖ್ಯಸ್ಥರು, ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ