ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

“ಸರಾಯಿ ಬೇಡ, ಶಿಕ್ಷಣ ಬೇಕು… ಬೀರು ಬೇಡ, ನೀರು ಬೇಕು”

Advertisement
ಮಾಡಶಿರವಾರದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ವಿರೋಧ
“ಸರಾಯಿ ಬೇಡ, ಶಿಕ್ಷಣ ಬೇಕು… ಬೀರು ಬೇಡ, ನೀರು ಬೇಕು” ಘೋಷಣೆಗಳೊಂದಿಗೆ ಮಹಿಳೆಯರ ಆಕ್ರೋಶ
ಸಿಂಧನೂರು, ಫೆ.28: BB NEWS KANNADA
ಸಿಂಧನೂರು ತಾಲೂಕಿನ ಮಾಡಶಿರವಾರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಒತ್ತಾಯಿಸಿ ನೂರಾರು ಮಹಿಳೆಯರು, ಯುವಕರು ಹಾಗೂ ಕೆಆರ್‌ಎಸ್ ಪಕ್ಷದ ಮುಖಂಡರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಸರಾಯಿ ವ್ಯಾಪಾರವನ್ನು ಕೂಡಲೇ ನಿಲ್ಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹಿಸಿದರು. ಗ್ರಾಮಸ್ಥರು ಮಾನ್ಯ ತಹಶೀಲ್ದಾರರು, ಅಬಕಾರಿ ನಿರೀಕ್ಷಕರು ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಸಾರ್ವಜನಿಕ ಸ್ಥಳಗಳು ಮತ್ತು ವಸತಿ ಪ್ರದೇಶಗಳ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ದೂರು ನೀಡಿದರು.

https://youtu.be/PasT14RbFL8?si=9_nwlbV7pK51KPES

🗣️ “ಯುವಕರು ಹಾಳಾಗುತ್ತಿದ್ದಾರೆ” – ನಿರುಪಾದಿ ಕೆ. ಗೋಮರ್ಸಿ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ಮುಖಂಡ ನಿರುಪಾದಿ ಕೆ. ಗೋಮರ್ಸಿ, “ಗ್ರಾಮದಲ್ಲಿ ಕೆಲವರು ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಗಳಲ್ಲಿಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಯುವಕರು, ರೈತ ಕೂಲಿಕಾರರು ಹಾಗೂ ಕಾರ್ಮಿಕ ವರ್ಗದವರು ದಿನನಿತ್ಯ ಮದ್ಯಪಾನಕ್ಕೆ ಒಳಗಾಗುತ್ತಿದ್ದಾರೆ. ಕುಟುಂಬ ಕಲಹ, ಸಾರ್ವಜನಿಕ ಅಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿದೆ,” ಎಂದು ಆತಂಕ ವ್ಯಕ್ತಪಡಿಸಿದರು.

👩‍👧 ಮಹಿಳೆಯರ ನೋವು “ಸಾರಾಯಿ ಮುಕ್ತ ಗ್ರಾಮ ಬೇಕು”
ಮಹಿಳೆಯರು “ಸರಾಯಿ ಬೇಡ, ಶಿಕ್ಷಣ ಬೇಕು”, “ಬೀರು ಬೇಡ, ನೀರು ಬೇಕು” ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿದರು. ಮದ್ಯಪಾನದ ದುಷ್ಪರಿಣಾಮದಿಂದ ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗುತ್ತಿದೆ. ಗ್ರಾಮದಲ್ಲಿ ಹಲವಾರು ಅಂಗಡಿಗಳು, ಕಿರಾಣಿ ಮಳಿಗೆಗಳು ಮತ್ತು ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವುದರಿಂದ ಸುಲಭವಾಗಿ ಮದ್ಯ ದೊರೆಯುತ್ತಿದೆ ಎಂದು ಆರೋಪಿಸಿದರು.
ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿ ನಡೆಯುತ್ತಿರುವ ಈ ಅಕ್ರಮ ವ್ಯಾಪಾರವನ್ನು ತಕ್ಷಣ ನಿಲ್ಲಿಸಿ, ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
👥 ಹೋರಾಟಕ್ಕೆ ವ್ಯಾಪಕ ಬೆಂಬಲ
ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರರಾದ ವಿರುಪಮ್ಮ ಉದ್ಭಳ, ಬಸವರಾಜ ಗೋಡಿಹಾಳ, ಮದ್ಯ ನಿಷೇಧ ಆಂದೋಲನದ ಸಂಚಾಲಕರಾದ ಮೋಕ್ಷಮ್ಮ, ಮರಿಯಮ್ಮ, ಇಂದಿರಮ್ಮ, ಶಿವಮ್ಮ, ಈರಮ್ಮ, ವಿಜಯಲಕ್ಷ್ಮಿ, ಯಂಕಮ್ಮ, ಅಂಬಮ್ಮ, ಸಾವಿತ್ರಮ್ಮ, ಯಮನಮ್ಮ ಸೇರಿದಂತೆ ಗ್ರಾಮದ ಮುಖಂಡರಾದ ವೀರೇಶ, ಜಗದೀಶ್, ಶಿವರಾಜ್, ನಾಗರಾಜ್, ಬಾಳಪ್ಪ, ರಾಮಣ್ಣ ಸೇರಿದಂತೆ ಅನೇಕರು ಭಾಗವಹಿಸಿದ್ದರು.
📌 ಗ್ರಾಮಸ್ಥರ ಮುಖ್ಯ ಬೇಡಿಕೆಗಳು
ಅಕ್ರಮ ಮದ್ಯ ಮಾರಾಟಕ್ಕೆ ತಕ್ಷಣ ನಿಷೇಧ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ
ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ “ಸಾರಾಯಿ ಮುಕ್ತ ಮಾಡಶಿರವಾರ” ಗ್ರಾಮ ನಿರ್ಮಾಣ ಗ್ರಾಮದಲ್ಲಿ ಶಾಂತಿ, ಆರೋಗ್ಯ ಹಾಗೂ ಶಿಕ್ಷಣ ವಾತಾವರಣ ನಿರ್ಮಾಣವಾಗಬೇಕು ಎಂಬುದು ಮಹಿಳೆಯರ ಪ್ರಮುಖ ಒತ್ತಾಯವಾಗಿದೆ.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ