
ಏ.12 ರಂದು ಬೆಳಿಗ್ಗೆ 11:00 ಗಂಟೆಗೆ ಲಿಂಗಸೂಗೂರು ತಹಶೀಲ್ದಾರ ಕಚೇರಿ, ಎಲ್ಲಾ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದು ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1& 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08532-226592, 295376 ಗೆ ಸಂಪರ್ಕಿಸಬಹುದೆಂದು ಕರ್ನಾಟಕ ಲೋಕಾಯುಕ್ತ, ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













