ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ಜಿಲ್ಲಾ ಕೇಂದ್ರಕ್ಕಾಗಿ 8 ರಂದು ಶಾಸಕರ ನೇತೃತ್ವದಲ್ಲಿ ಸಭೆ

Advertisement
ಸಿಂಧನೂರು ಜುಲೈ. 07 ಸಿಂಧನೂರನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕುವ ನಿಟ್ಟಿನಲ್ಲಿ ಜುಲೈ 8 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಟೌನ್ ಹಾಲ್‌ನಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ಸಂಘ-ಸಂಸ್ಥೆಗಳ ಮುಖಂಡರ ಸಾರ್ವಜನಿಕರ ಸಭೆ ಕರೆಯಲಾಗಿದೆ.

ಏಷ್ಯಾ ಖಂಡ ದಲ್ಲಿಯೇ ಟ್ರ್ಯಾಕ್ಟರ್ ಮಾರಾಟದಲ್ಲಿಯೇ ಮೊದಲ ಸ್ಥಾನದಲ್ಲಿದೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಿಂಧನೂರು ತಾಲ್ಲೂಕು ಅತೀ ವೇಗವಾಗಿ ಬೆಳೆಯುತ್ತಿದೆ.ತುಂಗಭದ್ರಾ ಹಾಗೂ ಕೃಷ್ಣ ಜಲಾಶಯ ಹೊಂದಿ ಅಧಿಕ ಪ್ರಮಾಣದಲ್ಲಿ ಭತ್ತ ಬೆಳೆಯುವ ಭತ್ತದ ನಾಡಾಗಿದೆ. ಆದರೆ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲಾ ಕೇಂದ್ರಗಳು ತಾಲ್ಲೂಕಿನಿಂದ ಅಂದಾಜು 90 ರಿಂದ 95 ಕಿ.ಮೀ ದೂರದಲ್ಲಿದೆ.ಸಾರ್ವಜನಿಕರ ವಿವಿಧ ಇಲಾಖೆಗಳ ಕೆಲಸಗಳಿಗೆ ರಾಯಚೂರು ಹೋಗಬೇಕು ಎಂದರೆ ತೊಂದರೆಯಾಗುತ್ತದೆ.

ಆದ್ದರಿಂದಲೇ ಸಿಂಧನೂರು ತಾಲ್ಲೂಕನ್ನೇ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬುದು ಸಾರ್ವಜನಕರ ಒತ್ತಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲು, ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಿ ತೀರ್ಮಾನಿಸಲು ಜುಲೈ.8

ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಆದ್ದರಿಂದ ಪಕ್ಷಾತೀತವಾಗಿ ರಾಜಕೀಯ ಮುಖಂಡರು, ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಹಿತಿಗಳು, ಕಲಾವಿದರು, ಉಪನ್ಯಾಸಕರು, ಮಹಿಳಾ ಪರ ಸಂಘಟಕಿಯರು, ವಿದ್ಯಾರ್ಥಿಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಮನವಿ ಮಾಡಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್