ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ರೈಲ್ವೆ ಹಳಿಯಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ

Advertisement
ಸಿಂಧನೂರು . ಫೆಬ್ರುವರಿ 03
ಮಾನವಿ ತಾಲ್ಲೂಕಿನ ಸುಮಂಗಲ ಸಿಕ್ಕಲ್ ತಾಂಡ ನಿವಾಸಿ ವಿದ್ಯಾರ್ಥಿನಿ ಸುಮಂಗಲ (ವಯಸ್ಸು 21 ) ಅವರು ಸಿಂಧನೂರು ಸಮೀಪದ ರೈಲ್ವೆ ಹಳಿಯ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಗಳವಾರ ನಡೆದಿದೆ.

ಸ್ಥಳೀಯರು ಮಧ್ಯಾಹ್ನ ವೇಳೆ ರೈಲ್ವೆ ಹಳಿಯ ಬಳಿ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣ ಸಿಂಧನೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಡಿವೈಎಸ್ಪಿ ಚಂದ್ರಶೇಖರ್, ವಿರಾರೆಡ್ಡಿ ಪಿ ಐ, ಪೊಲೀಸ್ ಸಿಬ್ಬಂದಿಗಳಾದ ದೇವೇಂದ್ರಪ್ಪ,ಶಿವರಾಜ್ ,ಸೋಮನಗೌಡ ಆಗಮಿಸಿ ಪರಿಶೀಲನೆ ನಡೆಸಿದರು. ಸಂಬಂಧಿಕರು ಬಂದು ನಂತರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿದ್ಯಾರ್ಥಿನಿ ಯಾವುದೋ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಈ ಸಂಬಂಧ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ದುರ್ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಆಳವಾದ ದುಃಖ ಆವರಿಸಿದೆ. ಶಿಕ್ಷಣ ಪಡೆಯುತ್ತಿದ್ದ ಯುವ ವಿದ್ಯಾರ್ಥಿನಿಯ ಅಕಾಲಿಕ ಸಾವು ಸಾರ್ವಜನಿಕರಲ್ಲಿ ಕಳವಳ ಮೂಡಿಸಿದೆ.

👉 ಸೂಚನೆ: ಜೀವನದ ಯಾವುದೇ ಹಂತದಲ್ಲಿ ಮಾನಸಿಕ ಒತ್ತಡ ಅಥವಾ ನಿರಾಶೆ ಎದುರಾದಲ್ಲಿ, ಆತ್ಮಹತ್ಯೆ ಪರಿಹಾರವಲ್ಲ. ಸಹಾಯಕ್ಕಾಗಿ ಕುಟುಂಬದವರು, ಸ್ನೇಹಿತರು ಅಥವಾ ಸಮಾಲೋಚಕರನ್ನು ಸಂಪರ್ಕಿಸುವುದು ಅತ್ಯಂತ ಅಗತ್ಯ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ