ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸೂಕ್ತ ಯೋಜನೆ ರೂಪಿಸಿದ ಅಧಿಕಾರಿಗಳಿಂದ ನಗರದಲ್ಲಿ ತಪ್ಪದ ಸಮಸ್ಯೆ

Advertisement
ಸಿರುಗುಪ್ಪ : ನಗರದಲ್ಲಿ ಮಳೆಗಾಲದಲ್ಲಿ ರಸ್ತೆ ಮೇಲೆ ಹರಿಯುವ ನೀರಿನಿಂದ ಅಲ್ಲಿನ ನಿವಾಸಿಗಳು ರಸ್ತೆಯಲ್ಲಿ ಪರದಾಡುತ್ತಿರುವುದು ವರದಿಯಾಗಿದ್ದರಿಂದ ಸದಾಶಿವ ನಗರದಿಂದ ಡ್ರೆವರ್ ಕಾಲೋನಿಗೆ ನಗರೋತ್ಥಾನ ಪೇಸ್-೩ ಸೇವಿಂಗ್ಸ್ ಗ್ರಾಂಟ್‌ನಡಿ ಅಂದಾಜು ಮೊತ್ತ ೭೮.೪೮ ಲಕ್ಷ ವೆಚ್ಚದ ಅನುದಾನದಲ್ಲಿ ಚರಂಡಿ ನಿರ್ಮಾಣ ಮತ್ತು ರಸ್ತೆ ಅಭಿವೃದ್ದಿ ಕಾಮಗಾರಿಗೆ ಅನುಮೋದನೆ ದೊರೆತಿದೆ.

ಅಧಿಕಾರಿಗಳ ದಿವ್ಯ ನಿರ್ಲಕ್ಷತೆಯಿಂದಾಗಿ ಚರಂಡಿ ನಿರ್ಮಿಸದೇ ರಸ್ತೆ ಅಭಿವೃದ್ದಿಗೊಳಿಸಿದ್ದರಿಂದ ದೂರದ ಜಮೀನುಗಳಿಂದ ಹರಿದು ಬರುವ ಮಳೆ ನೀರಿಗೆ ರಸ್ತೆ ಬದಿಯ ಮಣ್ಣು ಕುಸಿಯುತ್ತಿದಲ್ಲದೇ ನೀರಿಗೆ ಕೊಚ್ಚಿ ಹೋಗುತ್ತಿದೆ.

ಗುತ್ತಿಗೆದಾರರು ಅಧಿಕಾರಿಗಳು ಯೋಜನೆ ರೂಪಿಸದ ಕಾರಣ ಹೇಳಿ ನುಣುಚಿಕೊಂಡರೆ ಸಂಬಂದಿಸಿದ ಅಧಿಕಾರಿಗಳು ಚುನಾವಣೆ ನೆಪವನ್ನು ಹೇಳಿಕೊಂಡು ಜಾರಿಕೊಳ್ಳುತ್ತಿದ್ದಾರೆ.

ಚರಂಡಿ ನಿರ್ಮಾಣವಾದ ಮೇಲೆ ರಸ್ತೆ ಅಭಿವೃದ್ದಿ ಮಾಡುವುದು ಸಾಮಾನ್ಯ ಆದರೆ ಇಲ್ಲಿ ಉಲ್ಟಾ ಆಗಿದೆ. ಇನ್ನೂ ಕೆಲ ಖಾಸಗಿ ವ್ಯಕ್ತಿಗಳು ತಮ್ಮ ಖಾಲಿ ನಿವೇಶನ ಇರುವುದೆಂದು ರಸ್ತೆಯನ್ನೇ ಕಿರಿದಾಗಿಸಿದ್ದು ಮುಂದಿನ ದಿನಗಳಲ್ಲಿ ಚರಂಡಿ ನಿರ್ಮಾಣಕ್ಕೆ ಜಾಗ ಬಿಟ್ಟುಕೊಡುವರೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅನೇಕ ವಾರ್ಡ್ಗಳಲ್ಲಿ ನಗರೋತ್ಥಾನ ಯೋಜನೆಯಡಿ ರಸ್ತೆ ಅಭಿವೃದ್ದಿ, ಚರಂಡಿ ನಿರ್ಮಾಣದಂತಹ ಅಭಿವೃದ್ದಿ ಕಾರ್ಯಗಳು ಆಮೆಗತಿಯಲ್ಲಿ ಸಾಗಿದ್ದು, ಚರಂಡಿಯಿಲ್ಲದೇ ಕೇವಲ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ. ಇನ್ನೊಂದೆಡೆ ರಸ್ತೆ ಅಭಿವೃದ್ದಿಗಾಗಿ ಜಲ್ಲಿಕಲ್ಲು ಹಾಕಿ ಹಲವು ತಿಂಗಳುಗಳೇ ಕಳೆದರೂ ಪೂರ್ಣಗೊಳ್ಳದ ಕಾಮಗಾರಿಗಳು ಸಾರ್ವಜನಿಕರಿಗೆ ಸಮಸ್ಯೆಯನ್ನುಂಟು ಮಾಡುತ್ತಿವೆ.

ಮುಂದಿನ ದಿನಗಳಲ್ಲಾದರೂ ಸಂಬಂದಿಸಿದ ಅಧಿಕಾರಿಗಳು ಸೂಕ್ತ ಯೋಜನೆ ರೂಪಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂಬುದು ಸ್ಥಳೀಯರಾದ ರಾಮಪ್ಪ, ಹನುಮಂತ, ನಾಗರಾಜರ ಒತ್ತಾಯವಾಗಿದೆ.

೫-ಸಿರುಗುಪ್ಪ-೧ : ಸಿರುಗುಪ್ಪ ನಗರದ ಡ್ರೆವರ್ ಕಾಲೋನಿಗೆ ಚರಂಡಿಯಿಲ್ಲದೇ ಅಭಿವೃದ್ದಿಗೊಳಿಸಿದ ರಸ್ತೆಯ ಬದಿ ಕುಸಿದಿರುವುದು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ