ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸ.ಪ್ರ.ದ.ಮ.ಕಾಲೇಜಲ್ಲಿ“ಕರ್ನಾಟಕದಲ್ಲಿ ಜೈನ ಧರ್ಮ–ಸಾಹಿತ್ಯ–ಸಂಸ್ಕೃತಿ” ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

Advertisement
ಸಿಂಧನೂರು, ಜನವರಿ 30:
ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸಿಂಧನೂರು ವತಿಯಿಂದ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC) ಅಡಿಯಲ್ಲಿ ಕನ್ನಡ ವಿಭಾಗ ಹಾಗೂ ಇತಿಹಾಸ ವಿಭಾಗಗಳ ಸಹಯೋಗದಲ್ಲಿ “ಕರ್ನಾಟಕದಲ್ಲಿ ಜೈನ ಧರ್ಮ, ಸಾಹಿತ್ಯ ಮತ್ತು ಸಂಸ್ಕೃತಿ” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಜನವರಿ 31, 2026 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಶ್ರೀ ಹಂಪನಗೌಡ ಬಾದರ್ಲಿ, ಮಾನ್ಯ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಉದ್ಘಾಟಿಸಲಿದ್ದು, ಶ್ರೀ ಬಸವನಗೌಡ ಬಾದರ್ಲಿ, ಮಾನ್ಯ ವಿಧಾನ ಪರಿಷತ್ ಸದಸ್ಯರು, ಸಿಂಧನೂರು ಇವರಿಂದ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸಿಂಧನೂರು ಪ್ರಾಂಶುಪಾಲರಾದ ಶ್ರೀ ಮಹಾಂತಪ್ಪ ಕೊಡಗಲಿ ವಹಿಸಲಿದ್ದಾರೆ.


ಈ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ರಾಜ್ಯ ಹಾಗೂ ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ ಆಗಮಿಸುವ ಸಂಶೋಧನಾರ್ಥಿಗಳು, ಪ್ರಾಧ್ಯಾಪಕರು, ಚಿಂತಕರು, ಸಾಹಿತಿಗಳು, ಜೈನ ಧರ್ಮ ಅಧ್ಯಯನಕಾರರು ಸೇರಿದಂತೆ ಹಲವಾರು ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜೈನ ಧರ್ಮದ ತತ್ತ್ವಚಿಂತನೆ, ಕನ್ನಡ ಸಾಹಿತ್ಯಕ್ಕೆ ಅದರ ಕೊಡುಗೆ, ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸಾತ್ಮಕ ಮಹತ್ವದ ಕುರಿತು ವಿಚಾರ ಮಂಡನೆಗಳು ನಡೆಯಲಿವೆ.

ಕಾರ್ಯಕ್ರಮವು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಮಹತ್ವದ ವೇದಿಕೆಯಾಗಲಿದ್ದು, ವಿದ್ಯಾರ್ಥಿನಿಯರಿಗೆ ಹಾಗೂ ಅಧ್ಯಯನಾಸಕ್ತರಿಗೆ ಜ್ಞಾನಾರ್ಜನೆಗೆ ಸಹಕಾರಿಯಾಗಲಿದೆ ಎಂದು ಕಾಲೇಜ ಅಬಿರುದ್ದಿ ಸಮಿತಿ ತಿಳಿಸಿದೆ.

ಈ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಹಾಂತಪ್ಪ ಕೊಡಗಲಿ ಅವರು ದೂರವಾಣಿ ಮೂಲಕ ಮನವಿ ಮಾಡಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ