ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹಿಂದು ಸಂಪ್ರದಾಯದಂತೆ ಲಕ್ಷ್ಮಿ ಅರುಣಾಗೆ ಉಡಿ ತುಂಬಿದ ಮುಸ್ಲಿಂ ಕುಟುಂಬ

Advertisement
ಏಪ್ರಿಲ್ 26. ಮೇ ಹತ್ತರಂದು ರಾಜ್ಯದ್ಯಂತ 2023 ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಳ್ಳಾರಿಗೆ ಮತ ಯಾಚನೆಗೆ ಆಗಮಿಸಿದ ಕೆ.ಆರ್.ಪಿ.ಪಿ ಅಭ್ಯರ್ಥಿ ಜಿ.ಲಕ್ಷ್ಮಿ ಅರುಣ ಅವರಿಗೆ ಸ್ಥಳೀಯ ಮುಸ್ಲಿಂ ಕುಟುಂಬವೊಂದು ಹಿಂದೂ ಸಂಪ್ರದಾಯದ ಆಚರಣೆ ಮಾಡುವ ಮೂಲಕ ಗಮನ ಸೆಳೆದಿದೆ.

ಕೆಆರ್‌ಪಿಪಿ ಬಳ್ಳಾರಿ ನಗರ ಅಭ್ಯರ್ಥಿ ಜಿ ಲಕ್ಷ್ಮಿ ಅರುಣಾ ಅವರು ಬಳ್ಳಾರಿಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಮುಸ್ಲಿಂ ಕುಟುಂಬದಿಂದ ಹಿಂದೂ ಸಂಪ್ರದಾಯದಂತೆ ಆಶೀರ್ವಾದ ಪಡೆದರು.



ರೇಣುಕಾ ನಗರಕ್ಕೆ ಪ್ರಚಾರಕ್ಕೆ ಬಂದಿದ್ದ, ಜಿ.ಲಕ್ಷ್ಮಿ ಅರುಣ ಅವರಿಗೆ ಹರ್ಷಿಯಾ ಬಾನು ಮತ್ತು ದಾದಾಪೀರ್ ಕುಟುಂಬದವರು ಸಾಂಪ್ರದಾಯಿಕವಾಗಿ ಇಂದು ಆಚರಣೆಯಂತೆ ಹೊಸ ಸೀರೆ ಆಹಾರ ಧಾನ್ಯ ಅರಿಶಿಣ ಕುಂಕುಮ ಜೊತೆಗೆ ಉಡಿ ತುಂಬವ ಮೂಲಕ ಆಶೀರ್ವಾದ ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಲಕ್ಷ್ಮಿ ಅರುಣಾ ಅವರು ಸಂತಸ ವ್ಯಕ್ತಪಡಿಸಿದ್ದು, 'ಬಸವಣ್ಣನವರು ಪ್ರತಿಪಾದಿಸಿದ ಕಲ್ಯಾಣ ಲೋಕದ ಪರಿಕಲ್ಪನೆಯನ್ನು ಜಾರಿಗೆ ತರುವ ಮೂಲಕ ನಮ್ಮ ಪಕ್ಷದ ಧ್ಯೇಯವಾಗಿದೆ. ಭಾರತಾಂಬೆಯ ಮಕ್ಕಳಾದ ನಾವೆಲ್ಲರೂ ಒಂದೇ."

ಗಣಿ ನಾಡು ಬಳ್ಳಾರಿ ನಗರ ಕ್ಷೇತ್ರದಿಂದ ಕಣಕ್ಕಿಳಿದಿರುವ ಗಣಿ ಉದ್ಯಮಿ ಗಾಲಿ ಜನಾರ್ದನರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಅವರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯುತ್ತಿದ್ದಾರೆ. ರೆಡ್ಡಿ ಬಳ್ಳಾರಿ ಪ್ರವೇಶಿಸಲು ನ್ಯಾಯಾಲಯ ನಿರ್ಬಂಧ ವಿಧಿಸಿರುವುದರಿಂದ ಅವರು ಏಕಾಂಗಿಯಾಗಿ ಪ್ರಚಾರ ಮಾಡುತ್ತಿರುವುದರಿಂದ ಮತದಾರರ ಅನುಕಂಪದ ಅಲೆಯ ಕೂಡ ಹೆಚ್ಚಾಗಿದೆ ಅಂದರೆ ತಪ್ಪಾಗಲಿಕ್ಕಿಲ್ಲ.

224 ವಿಧಾನಸಭಾ ಕ್ಷೇತ್ರಗಳ ಪೈಕಿ ಬಳ್ಳಾರಿ ನಗರವು ರಾಜ್ಯದ ಹೈವೋಲ್ಟೇಜ್ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿದ್ದು, ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಲಕ್ಷ್ಮಿ ಅರುಣಾ ಪ್ರಬಲ ಪೈಪೋಟಿ ಒಡ್ಡುತ್ತಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ