ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

₹28,000 ಸಂಬಳದ RTO ಕಾನ್‌ಸ್ಟೆಬಲ್‌ಗೆ ₹700 ಕೋಟಿ ಆಸ್ತಿ?

Advertisement
₹28,000 ಸಂಬಳದ RTO ಕಾನ್‌ಸ್ಟೆಬಲ್‌ಗೆ ₹700 ಕೋಟಿ ಆಸ್ತಿ?
ಮಧ್ಯಪ್ರದೇಶದಲ್ಲಿ ಭಾರಿ ಸಂಚಲನ ಮೂಡಿಸಿದ ಸೌರಭ್ ಶರ್ಮಾ ಅಕ್ರಮ ಆಸ್ತಿ ಪ್ರಕರಣ


ಭೋಪಾಲ್:
ಮಧ್ಯಪ್ರದೇಶದ ಸಾರಿಗೆ ಇಲಾಖೆಯ (RTO) ಮಾಜಿ ಕಾನ್‌ಸ್ಟೆಬಲ್ ಸೌರಭ್ ಶರ್ಮಾ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣ ರಾಜ್ಯದ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಭಾರೀ ಸಂಚಲನವನ್ನುಂಟುಮಾಡಿದೆ. ಕೇವಲ ತಿಂಗಳಿಗೆ ₹28,000 ಸಂಬಳ ಪಡೆಯುತ್ತಿದ್ದ ಸೌರಭ್ ಶರ್ಮಾ, ನೂರಾರು ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದ ಆರೋಪ ಎದುರಿಸುತ್ತಿದ್ದು, ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ (ED) ಗಂಭೀರವಾಗಿ ತನಿಖೆ ನಡೆಸುತ್ತಿದೆ.

₹108 ಕೋಟಿಗೂ ಹೆಚ್ಚು ಆಸ್ತಿ
ಜಪ್ತಿ
ಇಡಿ ಅಧಿಕಾರಿಗಳು ಇದುವರೆಗೆ ₹108 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದು, ಈ ಅಕ್ರಮ ಆಸ್ತಿಗಳು ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಮೂಲಕ ಸಂಗ್ರಹವಾಗಿವೆ ಎಂಬ ಆರೋಪ ಕೇಳಿಬಂದಿದೆ. Hindustan Times ವರದಿ ಪ್ರಕಾರ, ಶರ್ಮಾ ತನ್ನ ಸರ್ಕಾರಿ ಸೇವಾ ಅವಧಿಯಲ್ಲಿಯೇ ಅಪಾರ ಪ್ರಮಾಣದ ಹಣ ಸಂಗ್ರಹಿಸಿದ್ದಾನೆ.

ದುಬೈ ಬಂಗಲೆ ಸೇರಿ ವಿದೇಶಿ ಆಸ್ತಿಗಳು
ತನಿಖೆಯ ವೇಳೆ, ಸೌರಭ್ ಶರ್ಮಾ ದುಬೈನಲ್ಲಿ ಐಷಾರಾಮಿ ಬಂಗಲೆ, ಮೀನು ಸಾಕಣೆ (ಫಿಶ್ ಫಾರ್ಮಿಂಗ್) ಕೇಂದ್ರ, ಹಾಗೂ ಹಲವು ವಾಣಿಜ್ಯ ಆಸ್ತಿಗಳನ್ನು ಹೊಂದಿದ್ದಾನೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಆಸ್ತಿಗಳ ಒಟ್ಟು ಮೌಲ್ಯ ₹500 ರಿಂದ ₹700 ಕೋಟಿ ನಡುವೆ ಇರಬಹುದು ಎಂದು ತನಿಖಾ ಮೂಲಗಳು ಅಂದಾಜಿಸಿವೆ.

ಕುಟುಂಬಸ್ಥರ ಹೆಸರಿನಲ್ಲಿ ಕಂಪನಿಗಳು

ಇಡಿ ತನಿಖೆಯಲ್ಲಿ, ಶರ್ಮಾ ತನ್ನ ಪತ್ನಿ ಮತ್ತು ಸಮೀಪ ಸಂಬಂಧಿಕರ ಹೆಸರಿನಲ್ಲಿ ಹಲವಾರು ಶೆಲ್ ಕಂಪನಿಗಳನ್ನು ಸ್ಥಾಪಿಸಿ, ಅವುಗಳ ಮೂಲಕ ಹಣ ಹೂಡಿಕೆ ಮತ್ತು ಆಸ್ತಿ ಖರೀದಿ ಮಾಡಿದ್ದಾನೆ ಎಂಬ ಗಂಭೀರ ಆರೋಪ ಹೊರಬಿದ್ದಿದೆ. ಈ ಕಂಪನಿಗಳ ಮೂಲಕ ಹಣವನ್ನು ದೇಶದಿಂದ ವಿದೇಶಕ್ಕೆ ವರ್ಗಾವಣೆ ಮಾಡಿರುವ ಶಂಕೆಯೂ ವ್ಯಕ್ತವಾಗಿದೆ.
ಹೈಕೋರ್ಟ್‌ನಿಂದ ಜಾಮೀನು ತಿರಸ್ಕಾರಾ.ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಧ್ಯಪ್ರದೇಶ ಹೈಕೋರ್ಟ್, ಸೌರಭ್ ಶರ್ಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಆರೋಪಿಯು ಸಾಕ್ಷ್ಯ ನಾಶಪಡಿಸುವ ಹಾಗೂ ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂಬುದನ್ನು ನ್ಯಾಯಾಲಯ ಗಮನಕ್ಕೆ ತೆಗೆದುಕೊಂಡಿದೆ.

ರಾಜಕೀಯ ವಲಯದಲ್ಲಿ ಭಾರೀ ಚರ್ಚೆ
ಈ ಪ್ರಕರಣ ಮಧ್ಯಪ್ರದೇಶದ ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರವನ್ನು ಮತ್ತೊಮ್ಮೆ ಬಹಿರಂಗಪಡಿಸಿದ್ದು, ರಾಜಕೀಯ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಟೀಕೆ ನಡೆಸಿದ್ದು, “ಇಂತಹ ಭ್ರಷ್ಟ ಅಧಿಕಾರಿಗಳು ರಾಜಕೀಯ ರಕ್ಷಣೆ ಇಲ್ಲದೆ ಬೆಳೆಸಲು ಸಾಧ್ಯವಿಲ್ಲ” ಎಂದು ಆರೋಪಿಸಿವೆ.
ಮುಂದಿನ ತನಿಖೆ ಕಠಿಣ. ಇಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ಇನ್ನಷ್ಟು ಬೃಹತ್ ಹೆಸರುಗಳು ಹೊರಬೀಳುವ ಸಾಧ್ಯತೆ ಇದೆ ಎಂದು ಸೂಚಿಸಿದ್ದು, ಹಣದ ಮೂಲ, ವಿದೇಶಿ ಹೂಡಿಕೆಗಳು ಹಾಗೂ ರಾಜಕೀಯ ಸಂಪರ್ಕಗಳ ಬಗ್ಗೆ ತನಿಖೆ ಮುಂದುವರಿದಿದೆ.
👉 ₹28,000 ಸಂಬಳದ ಸರ್ಕಾರಿ ಉದ್ಯೋಗಿಯಿಂದ ನೂರಾರು ಕೋಟಿ ಆಸ್ತಿ — ಈ ಪ್ರಕರಣವು ದೇಶದ ಭ್ರಷ್ಟಾಚಾರ ವ್ಯವಸ್ಥೆಗೆ ಕನ್ನಡಿ ಹಿಡಿದಂತಾಗಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ