ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಯಚೂರು ಜಿಲ್ಲೆಯಲ್ಲಿ 32 ಸುಮೊಟು ಪ್ರಕರಣ ದಾಖಲು: ಮಾನವ ಹಕ್ಕುಗಳ ಆಯೋಗ

Advertisement

ರಾಯಚೂರು ಜಿಲ್ಲೆಯಲ್ಲಿ 32 ಸುಮೊಟು ಪ್ರಕರಣ ದಾಖಲು: ಮಾನವ ಹಕ್ಕುಗಳ ಆಯೋಗ

Advertisement

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅವರಿಂದ ಪತ್ರಿಕಾಗೋಷ್ಠಿ

ರಾಯಚೂರು, ಮಾರ್ಚ್ 26: ರಾಯಚೂರು ಜಿಲ್ಲೆಯಲ್ಲಿ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಕುಂದುಕೊರತೆಗಳ ವರದಿಗಳನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಒಟ್ಟು 32 ಸುಮೊಟು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್ ಭಟ್ ತಿಳಿಸಿದ್ದಾರೆ.

ಮಾರ್ಚ್ 25ರಿಂದ ರಾಯಚೂರು ಪ್ರವಾಸದಲ್ಲಿರುವ ಅವರು, ಮಾರ್ಚ್ 26ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಾರ್ಚ್ 26ರಂದು ನಡೆದ ವಿಚಾರಣೆಯಲ್ಲಿ 32 ಸುಮೊಟು ಪ್ರಕರಣಗಳ ಜೊತೆಗೆ ಆಯೋಗದಲ್ಲಿ ಈಗಾಗಲೇ ದಾಖಲಾದ 27 ದೂರುಗಳನ್ನು ಸೇರಿಸಿ ಒಟ್ಟು 59 ಪ್ರಕರಣಗಳನ್ನು ಪರಿಶೀಲಿಸಲಾಗಿದೆ. ಕೆಲವು ಪ್ರಕರಣಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ವರದಿ ಕೋರಲಾಗಿದೆ ಎಂದು ತಿಳಿಸಿದರು.

ಮಾರ್ಚ್ 25ರಂದು ರಾಯಚೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಲಾಗಿದೆ. ಅಲ್ಲದೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳನ್ನು ಕೂಡ ಸಂಗ್ರಹಿಸಲಾಗಿದೆ. ಈ ಕುರಿತು ಸಭೆಯಲ್ಲಿ ಅಧಿಕಾರಿಗಳಿಂದ ಸ್ಪಷ್ಟನೆ ಪಡೆಯಲಾಗಿದೆ ಎಂದು ಹೇಳಿದರು.

ಇನ್ನು ರಾಜ್ಯ ಮಟ್ಟದಲ್ಲಿ 2022ರಿಂದ ಸುಮಾರು 8000 ಮಾನವ ಹಕ್ಕುಗಳ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಬಹುತೇಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇನ್ನೂ ಸುಮಾರು 3600 ಪ್ರಕರಣಗಳು ಬಾಕಿ ಇವೆ. ಪ್ರತಿಮಾಸ ಸರಾಸರಿ 600ರಷ್ಟು ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿದ್ದು, ಒಂದು ದೂರು ವಿಲೇವಾರಿಗೆ ಕನಿಷ್ಠ ಐದಾರು ತಿಂಗಳು ಸಮಯ ಬೇಕಾಗುತ್ತದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಆಯೋಗದ ನ್ಯಾಯಿಕ ಸದಸ್ಯರಾದ ಎಸ್. ಕೆ. ವಂಟಿಗೋಡಿ ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ