ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಆರೋಪ: ₹39,600 ಡ್ರಾ ಪ್ರಕರಣಕ್ಕೆ ಹೊಸ ತಿರುವು

ಐದು ತಿಂಗಳಾದರೂ ದೂರು ದಾಖಲಾಗಿಲ್ಲ; ಚೆಕ್ ಲೀಫ್ ಕಳ್ಳತನದ ಬಗ್ಗೆ ಹಲವು ಪ್ರಶ್ನೆಗಳು

Advertisement

ತಿಡಿಗೋಳ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಮಾಡಿ ₹39,600 ಡ್ರಾ ಆರೋಪ: ಐದು ತಿಂಗಳಾದರೂ ದೂರು ದಾಖಲಾಗದಿರುವುದು ಅನುಮಾನಕ್ಕೆ ಕಾರಣ

Advertisement

ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮ ಪಂಚಾಯಿತಿಯಲ್ಲಿ ಚೆಕ್ ಬುಕ್ ಕಳ್ಳತನ ಮಾಡಿ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (PDO) ನಕಲಿ ಸಹಿ ಬಳಸಿ ₹39,600 ಹಣ ಡ್ರಾ ಮಾಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿದ್ಧಪಡಿಸಿರುವ ದೂರು ಪತ್ರದ ಪ್ರಕಾರ, ತಿಡಿಗೋಳ ಗ್ರಾಮ ಪಂಚಾಯಿತಿಯ "ಗ್ರಾಮ ಪಂಚಾಯಿತಿ ನಿಧಿ" ಬ್ಯಾಂಕ್ ಖಾತೆಯಿಂದ ಎರಡು ಚೆಕ್‌ಗಳ ಮೂಲಕ ತಲಾ ₹19,800ರಂತೆ ಒಟ್ಟು ₹39,600 ಹಣ ಡ್ರಾ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

news_1780037113_0_501.webp

ದೂರು ಪತ್ರದಲ್ಲಿ, ಒಂದು ಚೆಕ್ ಖಾಸಗಿ ಸಂಸ್ಥೆಯ ಹೆಸರಿನಲ್ಲಿ ಹಾಗೂ ಮತ್ತೊಂದು ಚೆಕ್ ಖಾಸಗಿ ವ್ಯಕ್ತಿಯ ಹೆಸರಿನಲ್ಲಿ ಹಣ ಡ್ರಾ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದ್ದು, ಈ ಎರಡೂ ಚೆಕ್‌ಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ನೀಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿದ್ದ ಚೆಕ್ ಬುಕ್‌ನ ಚೆಕ್ ಲೀಫ್‌ಗಳನ್ನು ಕಳ್ಳತನ ಮಾಡಿ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಹಿಗಳನ್ನು ನಕಲು ಮಾಡಿ ಹಣ ಡ್ರಾ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ.

ಆದರೆ ಪ್ರಕರಣದಲ್ಲಿ ಮತ್ತೊಂದು ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ. ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದಾಗ, ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದೂರು ಅಧಿಕೃತವಾಗಿ ದಾಖಲಾಗಿಲ್ಲ ಎಂದು ತಿಳಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ಇದರಿಂದ ಹಲವು ಪ್ರಶ್ನೆಗಳು ಉದ್ಭವಿಸಿವೆ. ಘಟನೆ ನಡೆದಿದ್ದು 2025ರ ಡಿಸೆಂಬರ್ ತಿಂಗಳಲ್ಲಿ ಎನ್ನಲಾಗುತ್ತಿದ್ದು, ಸುಮಾರು ಐದು ತಿಂಗಳಿಗೂ ಹೆಚ್ಚು ಸಮಯ ಕಳೆದಿದೆ. ಹಾಗಿದ್ದರೆ ಈ ವಿಚಾರ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ಈಗ ಬಂದಿದೆಯೇ? ಅಥವಾ ಮೊದಲೇ ತಿಳಿದಿದ್ದರೂ ದೂರು ಸಲ್ಲಿಸಲು ವಿಳಂಬವಾಗಿದೆಯೇ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

news_1778142080_0_556.webp

ಇನ್ನೊಂದೆಡೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನೆ ನಡೆದಿರುವುದು ನಿಜವಾಗಿದ್ದು, ದೂರು ದಾಖಲಿಸಲು ಮುಂದಾಗಿದ್ದೇವೆ ಎಂದು ಹೇಳಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹಾಗಾದರೆ ದೂರು ಇನ್ನೂ ಯಾಕೆ ದಾಖಲಾಗಿಲ್ಲ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸಿದೆ. ಇದೇ ವೇಳೆ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿದ್ದ ಚೆಕ್ ಲೀಫ್‌ಗಳು ಹೊರಗಡೆ ಹೇಗೆ ಬಂದವು? ಕಚೇರಿಯ ದಾಖಲೆಗಳ ಮೇಲಿನ ಮೇಲ್ವಿಚಾರಣೆ ಹೇಗಿತ್ತು? ನಕಲಿ ಸಹಿ ಮಾಡಿದವರು ಯಾರು? ಬ್ಯಾಂಕ್ ಮಟ್ಟದಲ್ಲಿ ಪರಿಶೀಲನೆ ನಡೆದಿತ್ತೇ? ಹಣ ಪಡೆದವರು ಯಾರು? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

news_1778905892_0_440.webp

ಪ್ರಕರಣದ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಮೇಲಾಧಿಕಾರಿಗಳ ಗಮನಕ್ಕೆ ವಿಷಯ ಬಂದಿದೆಯೇ ಎಂಬುದೂ ಸ್ಪಷ್ಟವಾಗಿಲ್ಲ. ಸರ್ಕಾರಿ ಕಚೇರಿಯಲ್ಲಿದ್ದ ಚೆಕ್‌ಗಳನ್ನು ದುರುಪಯೋಗಪಡಿಸಿಕೊಂಡು ಹಣ ಡ್ರಾ ಮಾಡಲಾಗಿದೆ ಎಂಬ ಆರೋಪ ಅತ್ಯಂತ ಗಂಭೀರವಾಗಿದ್ದು, ಈ ಪ್ರಕರಣ "ಸರ್ಕಾರಿ ನಿಧಿಗೆ ಸಂಬಂಧಿಸಿದ ಗಂಭೀರ ಆರೋಪವಾಗಿರುವುದರಿಂದ ಪ್ರಕರಣದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕೆಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ."

news_1780027666_0_213.webp

ಸಾರ್ವಜನಿಕರ ತೆರಿಗೆ ಹಣ ಮತ್ತು ಸರ್ಕಾರಿ ನಿಧಿ ಸುರಕ್ಷಿತವಾಗಿರಬೇಕು. ಆದ್ದರಿಂದ ಸಂಬಂಧಪಟ್ಟ ಮೇಲಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ನಕಲಿ ಸಹಿ ಮಾಡಿ ಹಣ ಡ್ರಾ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ, ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧವೂ ಸೂಕ್ತ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಪ್ರಕರಣದ ಕುರಿತು ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಆಡಳಿತ ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್