ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

53-ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೆತ್ರದ ನಾಮಪತ್ರ ಸಲ್ಲಿಕೆ 13ಕ್ಕೆ ಪ್ರಾರಂಭ

Advertisement
ರಾಯಚೂರು,ಏ.12 -ಏ.13 ರಿಂದ ಏ.20 ರವರೆಗೆ ಪ್ರತಿದಿನ ಬೆಳಿಗ್ಗೆ 11-00 ರಿಂದ 03-00 ಗಂಟೆಗೆ (2ನೇ ಶನಿವಾರ ಮತ್ತು 4ನೇ ಶನಿವಾರ ಹಾಗೂ ರಜೆ ದಿನಗಳನ್ನು ಹೊರತುಪಡಿಸಿ) ನಾಮಪತ್ರ ಸಲ್ಲಿಸಲು ಅವಕಾಶ ಇರುತ್ತದೆ.53–ರಾಯಚೂರು ಗ್ರಾಮೀಣ ಮತಕ್ಷೇತ್ರದ ನಾಮಪತ್ರಗಳ ಸ್ವೀಕೃತಿ ಪ್ರಕ್ರಿಯೆಯನ್ನು ತಹಸೀಲ್ ಕಛೇರಿ ರಾಯಚೂರು ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು 53- ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಏ.13ರಿಂದ ಏ.20ರ ವರೆಗೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಏ.21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.24ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಉಳಿದಂತೆ ಮೇ.10ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ.13ಕ್ಕೆ ಎಣಿಕೆ ಪ್ರಕ್ರಿಯೆ ಮತ್ತು ಚುನಾವಣೆಯ ಫಲಿತಾಂಶ ಹೊರಬೀಳಲಿದೆ.



53-ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಒಟ್ಟು 275 ಮತಗಟ್ಟೆ ಕೇಂದ್ರಗಳಿದ್ದು ಅದರಲ್ಲಿ 109775 ಗಂಡು ಮತದಾರರು, 113350 ಹೆಣ್ಣು ಮತದಾರರು, 54 ತೃತೀಯ ಲಿಂಗ ಮತದಾರರಿದ್ದು ಒಟ್ಟು 223179 ಮತದಾರರು ಇರುತ್ತಾರೆ. ಹಾಗೂ 25 ಸೇವಾ ಮತದಾರರು ಇರುತ್ತಾರೆ. ಇದರಲ್ಲಿ 53 ಸೂಕ್ಷ್ಮ ಮತಗಟ್ಟೆ ಕೇಂದ್ರಗಳಿರುತ್ತವೆ ಪ್ರಸಕ್ತ ಚುನಾವಣೆಯಲ್ಲಿ ವಿಶೇಷವಾಗಿ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರಿಗೆ ಹಾಗೂ ಅಂಗವಿಕಲರಿಗೆ, ಕೋವಿಡ್ ದೃಢಪಟ್ಟ ಮತದಾರರು ಮನೆಯಿಂದಲೇ ಮತದಾನ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಅದರಂತೆ 53-ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಂಗವಿಕಲರು 3012 ಮತದಾರರಿದ್ದು ಎಲ್ಲರಿಗೂ 12ಆ ಫಾರ್ಮ್ ವಿತರಿಸಲಾಗಿರುತ್ತದೆ, 80 ವರ್ಷ ಮೇಲ್ಪಟ್ಟ ವಯಸ್ಕರು 3059 ಮತದಾರರಿದ್ದು ಎಲ್ಲರಿಗೂ 12ಆ ಫಾರ್ಮ್ ವಿತರಿಸಲಾಗಿರುತ್ತದೆ ಒಟ್ಟು 6071 ಮತದಾರರು ಇರುತ್ತಾರೆ.

ಚುನಾವಣೆ ಆಯೋಗದಿಂದ ಜನರಲ್ ವೀಕ್ಷಕರು ನೇಮಕಗೊಂಡಿದ್ದು ಅದೇ ರೀತಿಯಲ್ಲಿ ಎಕ್ಸ್‍ಪೆಂಡೇಚರ್ ವೀಕ್ಷಕರು ಕೆ.ಕೆ.ಕೃಷ್ಣಪ್ರಸಾದ್ ಇವರು ನೇಮಕಗೊಂಡಿರುತ್ತಾರೆ. ಹಾಗೂ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಶಾಂತಿಯುತ, ಸುವ್ಯವಸ್ಥಿತ, ಕಾನೂನಿನ ಅಡಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲು ಸಹಕಾರಿಯಾಗುವರು.

ಚುನಾವಣೆ ಕೆಲಸಗಳ ಪೂರ್ವ ತಯಾರಿಯಾಗಿ ವಿವಿಧ ತಂಡಗಳನ್ನು ರಚಿಸಲಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆ ಪ್ರಕ್ರಿಯೆ ನಡೆಸಲು 5-ಎಸ್.ಎಸ್.ಟಿ, 01-ವಿವಿಟಿ, 6 ಎಫ್.ಎಸ್.ಟಿ, 03 ವಿಎಸ್‍ಟಿ, ಅಕೌಂಟಿಂಗ್ ಮತ್ತು ಎಇಒ ತಂಡಗಳಿದ್ದು ಮತ್ತು ಸೆಕ್ಟರ್ ಅಫೀಸರ್‍ರನ್ನಾಗಿ 22 ತಂಡಗಳನ್ನು ರಚಿಸಲಾಗಿರುತ್ತದೆ ಎಂದು 53- ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್