ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

625ಕ್ಕೆ 625: ರಾಯಚೂರು ಸುಖದೇವ್ ಸಾಧನೆ

625ಕ್ಕೆ 625: ಸುಖದೇವ್ ಸಾಧನೆಗೆ ಸಂಸದ ಜಿ.ಕುಮಾರ್ ನಾಯಕರಿಂದ ಕರೆ ಅಭಿನಂದನೆ

Advertisement

ರಾಯಚೂರು,ಏಪ್ರಿಲ್ 23: BB NEWS KANNADA 

Advertisement

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಿ.ವಿ.ಆರ್ (BVR) ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಖದೇವ್ ಅಪೂರ್ವ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಗೌರವವನ್ನು ಹೆಚ್ಚಿಸಿದ್ದಾನೆ.

ಸುಖದೇವ್ 625ಕ್ಕೆ 625 ಅಂಕಗಳನ್ನು ಸಂಪೂರ್ಣವಾಗಿ ಗಳಿಸುವ ಮೂಲಕ ತನ್ನ ಪ್ರತಿಭೆಯನ್ನು ಮೆರೆದಿದ್ದಾನೆ. ಪ್ರಥಮ ಭಾಷೆಯಲ್ಲಿ 125 ಅಂಕಗಳು, ದ್ವಿತೀಯ ಭಾಷೆಯಲ್ಲಿ 100 ಅಂಕಗಳು, ಹಿಂದಿಯಲ್ಲಿ 100, ಗಣಿತದಲ್ಲಿ 100, ವಿಜ್ಞಾನದಲ್ಲಿ 100 ಹಾಗೂ ಸಮಾಜ ವಿಜ್ಞಾನದಲ್ಲಿ 100 ಅಂಕಗಳನ್ನು ಪಡೆದು ಎಲ್ಲ ವಿಷಯಗಳಲ್ಲಿಯೂ ಶೇ.100 ಫಲಿತಾಂಶ ಸಾಧಿಸಿರುವುದು ವಿಶೇಷವಾಗಿದೆ.

ಈ ಅಪೂರ್ವ ಸಾಧನೆಗೆ ಮಾನ್ವಿ ತಾಲೂಕಿನ ತಹಸೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ಕ್ಷೇತ್ರ ಶಿಕ್ಷಣಾಧಿಕಾರಿ (BEO), ಹಾಗೂ ಬಿ.ವಿ.ಆರ್ ಶಾಲೆಯ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವಿದ್ಯಾರ್ಥಿಯನ್ನು ಸನ್ಮಾನಿಸಿ ಅಭಿನಂದಿಸಿದರು. ಅವರ ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಪ್ರಶಂಸಿಸಿದರು.

625ಕ್ಕೆ 625: ಸುಖದೇವ್ ಸಾಧನೆಗೆ ಸಂಸದ ಜಿ.ಕುಮಾರ್ ನಾಯಕರಿಂದ ಕರೆ ಅಭಿನಂದನೆ
625ಕ್ಕೆ 625: ಸುಖದೇವ್ ಸಾಧನೆಗೆ ಸಂಸದ ಜಿ.ಕುಮಾರ್ ನಾಯಕರಿಂದ ಕರೆ ಅಭಿನಂದನೆ

 

ಇದೇ ವೇಳೆ, ರಾಯಚೂರು ಜಿಲ್ಲೆಯ ಸಂಸದರಾದ ಜಿ. ಕುಮಾರ್ ನಾಯಕ ಅವರು ದೂರವಾಣಿ ಮೂಲಕ ಸುಖದೇವ್ ಅವರನ್ನು ಸಂಪರ್ಕಿಸಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿ, ಅವರ ಸಾಧನೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಸುಖದೇವ್ ಅವರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪಾಲಕರ ಸಹಕಾರವೇ ಈ ಯಶಸ್ಸಿನ ಹಿಂದೆ ಇರುವ ಪ್ರಮುಖ ಕಾರಣವೆಂದು ತಿಳಿದುಬಂದಿದೆ.

ಜಿಲ್ಲೆಯ ಮಟ್ಟದಲ್ಲಿ ಇಂತಹ ಸಾಧನೆ ಹೊರತಂದಿರುವುದು ಎಲ್ಲರಲ್ಲೂ ಹರ್ಷವನ್ನುಂಟುಮಾಡಿದ್ದು, ವಿದ್ಯಾರ್ಥಿಗೆ ಭವಿಷ್ಯದಲ್ಲಿ ಇನ್ನಷ್ಟು ಉನ್ನತ ಸಾಧನೆಗಳಾಗಲಿ ಎಂಬ ಆಶಯ ವ್ಯಕ್ತವಾಗಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ