ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?

ವೈದ್ಯರ ಹುಡುಕಾಟವೇ ದೊಡ್ಡ ಚಿಕಿತ್ಸೆ ಸಿಂಧನೂರು ಸಾರ್ವಜನಿಕ ಆಸ್ಪತ್ರೆ ವಿರುದ್ಧ ಜನರ ಆಕ್ರೋಶ

Advertisement

ಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ? – ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳ ಆಕ್ರೋಶ! ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರಿಗಾಗಿ ಕಾದ ರೋಗಿಗಳು – ವಯೋವೃದ್ಧರು, ಗರ್ಭಿಣಿಯರ ಪರದಾಟ; "ಸರ್ಕಾರಿ ಸಂಬಳ ಪಡೆದು ಖಾಸಗಿ ಕ್ಲಿನಿಕ್‌ನಲ್ಲಿ ಸೇವೆ?" ಎಂಬ ಸಾರ್ವಜನಿಕರ ಪ್ರಶ್ನೆ.

Advertisement

news_1783488946_0_647.webp

ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯ ನಿರ್ವಹಣೆ ಕುರಿತು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯೇ ಆಸ್ಪತ್ರೆಗೆ ಬಂದ ರೋಗಿಗಳಿಗೆ ಮೊದಲು ಶುಗರ್ ಹಾಗೂ ಬಿಪಿ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಸೂಚಿಸಲಾಗುತ್ತದೆ. ಪರೀಕ್ಷೆ ಮುಗಿಸಿ ಬಂದರೂ ವೈದ್ಯರು ಕರ್ತವ್ಯ ಸ್ಥಳದಲ್ಲೇ ಇಲ್ಲದೆ, ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ರೋಗಿಗಳು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ವಯೋವೃದ್ಧರು, ಗರ್ಭಿಣಿಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ವೈದ್ಯರಿಗಾಗಿ ಕಾಯುತ್ತಿರುವ ದೃಶ್ಯಗಳು ಕಂಡುಬಂದಿವೆ. ವೈದ್ಯರು ಎಲ್ಲಿಗೆ ಹೋಗಿದ್ದಾರೆ ಎಂಬ ಮಾಹಿತಿ ಸಿಬ್ಬಂದಿಗಳಿಗೂ ಇಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ಸಾರ್ವಜನಿಕರು, "ಸರ್ಕಾರಿ ಆಸ್ಪತ್ರೆಯ ವೈದ್ಯರು ತಮ್ಮ ಖಾಸಗಿ ಕ್ಲಿನಿಕ್‌ಗಳಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ಅದಕ್ಕಾಗಿಯೇ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸಿಗುವುದು ಅಪರೂಪವಾಗಿದೆ" ಎಂದು ಆರೋಪಿಸಿದ್ದಾರೆ.

news_1779340187_0_802.webp

ಮತ್ತೊಬ್ಬರು, "ಸಿಂಧನೂರು ನೀರಾವರಿ ಪ್ರದೇಶವಾಗಿರುವುದರಿಂದ ಹೆಚ್ಚಿನವರು ಖಾಸಗಿ ಆಸ್ಪತ್ರೆಗಳನ್ನೇ ಆಶ್ರಯಿಸುತ್ತಾರೆ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಸೇವೆಗಳ ಬಗ್ಗೆ ಅಧಿಕಾರಿಗಳು ಮತ್ತು ವೈದ್ಯರು ಗಂಭೀರವಾಗಿ ಪರಿಗಣಿಸುತ್ತಿಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, "ವೈದ್ಯರು ಇಲ್ಲದ ವೇಳೆ ಸಿಬ್ಬಂದಿಯೇ ವೈದ್ಯರಂತೆ ಚಿಕಿತ್ಸೆ ನೀಡಲು ಮುಂದಾಗುತ್ತಾರೆ. ಚಿಕಿತ್ಸೆ ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಅದರ ಹೊಣೆ ಯಾರು?" ಎಂದು ಪ್ರಶ್ನಿಸಿದ್ದಾರೆ.

 

"ವೈದ್ಯರನ್ನು ಹುಡುಕುತ್ತ ರೋಗಿಗಳು ಆಸ್ಪತ್ರೆ ಸುತ್ತಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ತವ್ಯದ ವೇಳೆಯಲ್ಲೇ ಕೆಲ ವೈದ್ಯರು ಹಾಗೂ ಸಿಬ್ಬಂದಿ ನಂದಿನಿ ಕ್ಯಾಂಟೀನ್ ಬಳಿ ಟೀ ಕುಡಿಯುವುದು, ಸಿಗರೇಟ್ ಸೇದುತ್ತಿರುವುದರಲ್ಲಿ ನಿರತರಾಗಿರುತ್ತಾರೆ" ಎಂದು ಸಾರ್ವಜನಿಕರು ಆರೋಪಿಸಿದ್ದು, ಇಂತಹ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಆಸ್ಪತ್ರೆಗೆ ಬಂದಿದ್ದ ಹಿರಿಯ ನಾಗರಿಕರೊಬ್ಬರು, "ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ತಿಳಿಸಿದರೂ ಯಾವುದೇ ಬದಲಾವಣೆ ಕಾಣುತ್ತಿಲ್ಲ. ಸರ್ಕಾರಿ ಸಂಬಳ ಪಡೆದು ಖಾಸಗಿ ಕ್ಲಿನಿಕ್ ನಡೆಸುವವರ ವಿರುದ್ಧ ಸಾರ್ವಜನಿಕರೇ ಸಂಘಟಿತರಾಗಿ ಹೋರಾಟ ನಡೆಸುವ ಸಮಯ ಬಂದಿದೆ. ನಾಲ್ಕು ದಿನ ಕಾದು ನೋಡೋಣ, ಬದಲಾವಣೆ ಆಗದಿದ್ದರೆ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸೋಣ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

news_1781164348.webp

ಪ್ರಮುಖ ಪ್ರಶ್ನೆಗಳು:

❓ ಕರ್ತವ್ಯದ ವೇಳೆಯಲ್ಲಿ ವೈದ್ಯರು ಎಲ್ಲಿದ್ದರು?

❓ ರೋಗಿಗಳನ್ನು ಗಂಟೆಗಟ್ಟಲೆ ಕಾಯಿಸುವುದಕ್ಕೆ ಹೊಣೆ ಯಾರು?

❓ ವೈದ್ಯರು ಇಲ್ಲದಾಗ ಸಿಬ್ಬಂದಿ ಚಿಕಿತ್ಸೆ ನೀಡುವುದು ನಿಯಮಬದ್ಧವೇ?

❓ ಆರೋಗ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳು ಈ ಕುರಿತು ಕ್ರಮ ಕೈಗೊಳ್ಳುವರೇ?

❓ ಕರ್ತವ್ಯದ ಸಮಯದಲ್ಲಿ ರೋಗಿಗಳನ್ನು ಬಿಟ್ಟು ಟೀ ಕುಡಿಯುತ್ತ ಸಿಗರೇಟ್ ಹೊಡೆಯುವುದು ಅಧಿಕಾರಿಗಳ ಕಣ್ಣಿಗೆ ಕಾಣುತ್ತಿಲ್ಲವೇ..?

 

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್ಮುಂಗಾರು ಹಂಗಾಮಿನ ಬೆಳೆ ವಿಮೆ ಹಾಗೂ ರಸಗೊಬ್ಬರ ದರಗಳ ಪೋಸ್ಟರ್ ಬಿಡುಗಡೆರಾಯಚೂರಿನಲ್ಲಿ ಜುಲೈ 10ರಂದು ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜುಅಧಿಕಾರಿಗಳ ಮೇಲೆ ಕುಟುಂಬ ರಾಜಕಾರಣ?ಸರ್ಕಾರಿ ಪಿಯುಸಿ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಅಗತ್ಯ – ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನ"ವೈದ್ಯೋ ನಾರಾಯಣೋ ಹರಿಃ" – ದೇವತ್ವದ ಪಂಜರದಲ್ಲಿ ಸಿಲುಕಿದ ಮಾನವೀಯತೆ!ಸಿಂಧನೂರಿನಲ್ಲಿ ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜು ಜುಲೈ 02ಕ್ಕೆತುಂಗಭದ್ರಾ ಕ್ರಸ್ಟ್ ಗೇಟ್ ಉದ್ಘಾಟನೆಗೆ ಚಂದ್ರಬಾಬು ನಾಯ್ಡುಗೆ ಆಹ್ವಾನ