ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವು

ಅಕ್ರಮ ಚಟುವಟಿಕೆಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ; ಸಮಗ್ರ ತನಿಖೆಗೆ ಆಗ್ರಹ

Advertisement

ಸಿಂಧನೂರು, ಜು.15: ತಾಲೂಕಿನ ತುರುವಿಹಾಳ ಹೋಬಳಿಯ ಉಮಲೂಟಿ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಮರಂ (ಮುರಂ) ಕ್ವಾರಿಯಲ್ಲಿ ಈಜಲು ಹೋಗಿದ್ದ ಯುವ ವಕೀಲರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಹನೀಫ್ (32), ತಂದೆ ಬೀರ ಮಲ್ಲಪ್ಪ, ಉಮಲೂಟಿ ನಿವಾಸಿ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವಕೀಲರಾಗಿದ್ದ ಹನೀಫ್ ಅವರಿಗೆ ಬಿಡುವಿನ ವೇಳೆಯಲ್ಲಿ ಕುರಿ ಮೇಯಿಸುವ ಹವ್ಯಾಸವಿದ್ದು, ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆಗೆ ಪ್ರತಿದಿನದಂತೆ ಕುರಿಗಳನ್ನು ಮೇಯಿಸಲು ಗ್ರಾಮದ ಹೊರವಲಯಕ್ಕೆ ತೆರಳಿದ್ದರು.

Advertisement

news_1783488946_0_647.webp

ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಉಮಲೂಟಿ ಹೊಸ ಕೆರೆಯ ಹಿಂಭಾಗದಲ್ಲಿರುವ ಸುಮಾರು 40 ಅಡಿ ಆಳದ ನೀರು ತುಂಬಿದ್ದ ಅಕ್ರಮ ಮರಂ ಕ್ವಾರಿಗೆ ಈಜಲು ಇಳಿದಿದ್ದಾರೆ. ಆದರೆ ನೀರಿನ ಆಳ ಮತ್ತು ಪರಿಸ್ಥಿತಿಯನ್ನು ಅಂದಾಜಿಸಲು ಸಾಧ್ಯವಾಗದೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಶೋಧ ನಡೆಸಿ, ಮೃತದೇಹವನ್ನು ಹೊರತೆಗೆದರು. ಬಳಿಕ ತುರುವಿಹಾಳ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

news_1781778738_0_399.webp

ಅಕ್ರಮ ಕ್ವಾರಿ ವಿರುದ್ಧ ಗಂಭೀರ ಆರೋಪ

ಮೃತರ ಸಂಬಂಧಿಕರು, ಉಮಲೂಟಿ ಹೊಸ ಕೆರೆಯ ಹಿಂಭಾಗದಲ್ಲಿ ಪರಶುರಾಮ್ ಎಂಬುವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಮರಂ ಕ್ವಾರಿ ನಡೆಸಿರುವುದಲ್ಲದೆ, ಪಕ್ಕದ ಜಮೀನಿನಲ್ಲಿಯೂ ಅಕ್ರಮವಾಗಿ ಮರಂ ಕ್ವಾರಿ ಮಾಡಿರುವ ಆರೋಪ ಮಾಡಿದ್ದಾರೆ. ಅಲ್ಲದೆ, ಪರಶುರಾಮ್ ವಿರುದ್ಧ ಈ ಹಿಂದೆಯೂ ಅಕ್ರಮ ಚಟುವಟಿಕೆಗಳು ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಆರೋಪಗಳು ಕೇಳಿಬಂದಿದ್ದರೂ, ಸಂಬಂಧಪಟ್ಟ ಇಲಾಖೆಗಳಿಂದ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

news_1779340187_0_802.webp

ಅಧಿಕಾರಿಗಳ ನಿರ್ಲಕ್ಷ್ಯವೇ ಜೀವ ಬಲಿ?

ಸುಮಾರು 40 ಅಡಿ ಆಳದ ಅಕ್ರಮ ಕ್ವಾರಿಯಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ನೀರು ಸಂಗ್ರಹವಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಇಂತಹ ಅಪಾಯಕಾರಿ ಅಕ್ರಮ ಕ್ವಾರಿಗಳ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸೂಕ್ತ ಕ್ರಮ ಕೈಗೊಂಡಿದ್ದರೆ ಈ ದುರಂತ ತಪ್ಪಿಸಬಹುದಾಗಿತ್ತು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ಮರಂ ಕ್ವಾರಿಗಳನ್ನು ಕೂಡಲೇ ಮುಚ್ಚಿಸಿ, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್ಮುಂಗಾರು ಹಂಗಾಮಿನ ಬೆಳೆ ವಿಮೆ ಹಾಗೂ ರಸಗೊಬ್ಬರ ದರಗಳ ಪೋಸ್ಟರ್ ಬಿಡುಗಡೆರಾಯಚೂರಿನಲ್ಲಿ ಜುಲೈ 10ರಂದು ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜುಅಧಿಕಾರಿಗಳ ಮೇಲೆ ಕುಟುಂಬ ರಾಜಕಾರಣ?ಸರ್ಕಾರಿ ಪಿಯುಸಿ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಅಗತ್ಯ – ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನ"ವೈದ್ಯೋ ನಾರಾಯಣೋ ಹರಿಃ" – ದೇವತ್ವದ ಪಂಜರದಲ್ಲಿ ಸಿಲುಕಿದ ಮಾನವೀಯತೆ!