ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರಿಗೆ ಅಭಿನಯ ಚಕ್ರವರ್ತಿ ಸುದೀಪ್ ಆಗಮನ

ಬಸನಗೌಡ ಫೌಂಡೇಶನ್ ವತಿಯಿಂದ ಭವ್ಯ ಉಚಿತ ಸಾಮೂಹಿಕ ವಿವಾಹ ಹಾಗೂ ಸಾಧನಾ ಸಮಾರಂಭ

Advertisement

ಸಿಂಧನೂರು, ಮೇ 02: BB NEWS KANNADA 
ಬಸನಗೌಡ ಫೌಂಡೇಶನ್ ವತಿಯಿಂದ ಮೇ 03, 2026 ರ ಭಾನುವಾರ ಭವ್ಯ ಹಾಗೂ ಅರ್ಥಪೂರ್ಣ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಾವಿರಾರು ಜನರ ಸಮ್ಮುಖದಲ್ಲಿ ವಿಶೇಷ ಸಮಾರಂಭ ಜರುಗಲಿದೆ ಎಂದು ಫೌಂಡೇಶನ್ ಪ್ರಕಟಣೆ ತಿಳಿಸಿದೆ.

Advertisement

ಕಾರ್ಯಕ್ರಮದಲ್ಲಿ “ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ”, 5001 ಮುತ್ತೈದೆಯರಿಗೆ ಉಡಿ ತುಂಬುವ ಮಹೋತ್ಸವ ಹಾಗೂ ಜನಪ್ರಿಯ ನಾಯಕರು ಮತ್ತು ವಿಧಾನಪರಿಷತ್ ಶಾಸಕರಾದ ಶ್ರೀ ಬಸನಗೌಡ ಬಾದರ್ಲಿ ಅವರು ಶಾಸಕರಾದ ನಂತರ ಒಂದು ವರ್ಷದ ಸಾಧನೆಗಳ ಕುರಿತ “ಸಾಧನಾ ಕೃತಿ ಅನಾವರಣ” ಕಾರ್ಯಕ್ರಮ ನಡೆಯಲಿದೆ.

ಈ ಭವ್ಯ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಕರುನಾಡ ಅಭಿನಯ ಚಕ್ರವರ್ತಿ, ಖ್ಯಾತ ನಟರಾದ Kichcha Sudeep ಅವರು ಮುಖ್ಯ ಆಕರ್ಷಣೆಯಾಗಿ ಆಗಮಿಸಲಿದ್ದು, ಅಭಿಮಾನಿಗಳು ಹಾಗೂ ಸಾರ್ವಜನಿಕರಲ್ಲಿ ಅಪಾರ ಉತ್ಸಾಹ ಮನೆಮಾಡಿದೆ.

ಸಾಮಾಜಿಕ ಬದ್ಧತೆ, ಜನಸೇವೆ ಮತ್ತು ಸಂಸ್ಕೃತಿ ಸಂರಕ್ಷಣೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಸಾಮೂಹಿಕ ವಿವಾಹದ ಮೂಲಕ ಅನೇಕ ಬಡ ಕುಟುಂಬಗಳಿಗೆ ನೆರವಾಗುವ ಕಾರ್ಯವನ್ನು ಫೌಂಡೇಶನ್ ಕೈಗೊಂಡಿದ್ದು, ಮುತ್ತೈದೆಯರಿಗೆ ಉಡಿ ತುಂಬುವ ಮೂಲಕ ಸಂಪ್ರದಾಯ ಮತ್ತು ಮಹಿಳಾ ಗೌರವಕ್ಕೆ ವಿಶೇಷ ಮಹತ್ವ ನೀಡಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಶ್ರೀ ಬಸನಗೌಡ ಬಾದರ್ಲಿ ಅವರ ಒಂದು ವರ್ಷದ ಶಾಸಕೀಯ ಸಾಧನೆಗಳನ್ನು ಒಳಗೊಂಡ ಕೃತಿ ಅನಾವರಣಗೊಳ್ಳಲಿದ್ದು, ವಿವಿಧ ಗಣ್ಯರು, ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಸನಗೌಡ ಫೌಂಡೇಶನ್ ಮನವಿ ಮಾಡಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ