ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಲ್ಲ ಅಧಿಕಾರಿಗಳೂ ಮಾನವ ಹಕ್ಕುಗಳ ಸಂರಕ್ಷಣಾಧಿಕಾರಿಗಳು: ಡಾ. ಟಿ. ಶ್ಯಾಮ್ ಭಟ್

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್ ಭಟ್

Advertisement

ಎಲ್ಲ ಅಧಿಕಾರಿಗಳೂ ಮಾನವ ಹಕ್ಕುಗಳ ಸಂರಕ್ಷಣಾಧಿಕಾರಿಗಳು: ಡಾ. ಟಿ. ಶ್ಯಾಮ್ ಭಟ್

Advertisement

ರಾಯಚೂರು, ಮಾರ್ಚ್ 26: ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮಾನವ ಹಕ್ಕುಗಳ ಸಂರಕ್ಷಣಾಧಿಕಾರಿಗಳಾಗಿದ್ದು, ಕಚೇರಿಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಹಾಗೂ ಮಾನವೀಯತೆಯಿಂದ ವರ್ತಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್ ಭಟ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಕರಣಗಳ ವಿಲೇವಾರಿ, ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ದೂರುಗಳ ವಿಚಾರಣೆಯಲ್ಲಿ ಅಧಿಕಾರಿಗಳು ಜವಾಬ್ದಾರಿತನದಿಂದ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.

ಮಾರ್ಚ್ 25ರಂದು ರಾಯಚೂರು ನಗರದಲ್ಲಿ ವಸತಿ ನಿಲಯಗಳು, ಬಸ್ ನಿಲ್ದಾಣ, ಕಾರಾಗೃಹ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಲಾಗಿದ್ದು, ಅಲ್ಲಿ ಇರುವ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಕೆಲವು ವಸತಿ ನಿಲಯಗಳಲ್ಲಿ ವಿದ್ಯಾರ್ಥಿನಿಯರು ಇಕ್ಕಟ್ಟಾದ ಕೋಣೆಯಲ್ಲಿ ವಾಸಿಸುತ್ತಿರುವುದು ಗಮನಕ್ಕೆ ಬಂದಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಬಸ್ ನಿಲ್ದಾಣದಲ್ಲಿ ಅಶುಚಿತ್ವ ಕಂಡು ಬಂದಿದ್ದು, ಅದನ್ನು ತಕ್ಷಣ ಸರಿಪಡಿಸಬೇಕೆಂದು ಸೂಚಿಸಿದರು. ರಾಯಚೂರು–ಮಾನವಿ ಮತ್ತು ರಾಯಚೂರು–ಲಿಂಗಸೂರು ಮಾರ್ಗಗಳಲ್ಲಿ ಬಸ್ ಸೇವೆಯನ್ನು ಹೆಚ್ಚಿಸಬೇಕೆಂಬ ಸಾರ್ವಜನಿಕರ ಮನವಿಗೆ ಸ್ಪಂದಿಸಲು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದರು. ಬಸ್ ನಿಲ್ದಾಣದ ಅಂಗಡಿಗಳಲ್ಲಿ ಹೆಚ್ಚು ಬೆಲೆ ವಸೂಲಿ ಮಾಡುವುದು ಹಾಗೂ ಅವಧಿ ಮೀರಿದ ಆಹಾರ ವಸ್ತುಗಳ ಮಾರಾಟವನ್ನು ತಡೆಯುವಂತೆ ಕೂಡ ಸೂಚಿಸಿದರು.

news_1774672577_0_539.webp

 

ಈ ಸಂದರ್ಭದಲ್ಲಿ ಆಯೋಗದ ನ್ಯಾಯಿಕ ಸದಸ್ಯರಾದ ಎಸ್. ಕೆ. ವಂಟಿಗೋಡಿ ಮಾತನಾಡಿ, ಮಾನವ ಹಕ್ಕುಗಳು ವ್ಯಕ್ತಿಗೆ ಜನ್ಮತಃ ದೊರೆಯುವ ಮೂಲಭೂತ ಹಕ್ಕುಗಳಾಗಿದ್ದು, ಪ್ರತಿಯೊಬ್ಬರೂ ಸಮಾನ ಅವಕಾಶಗಳೊಂದಿಗೆ ಬದುಕುವ ಹಕ್ಕು ಹೊಂದಿದ್ದಾರೆ ಎಂದು ತಿಳಿಸಿದರು.

ಯಾರೂ ಸಹ ಶೋಷಣೆಗೆ ಒಳಗಾಗಬಾರದು, ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ವಸತಿ, ಆಹಾರ, ಶುದ್ಧ ನೀರು, ಉದ್ಯೋಗ ಹಾಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕುಗಳನ್ನು ಸಂವಿಧಾನ ಒದಗಿಸಿದೆ. ಸಾರ್ವಜನಿಕರ ಮನವಿಗಳಿಗೆ ಸ್ಪಂದನೆ ನೀಡದಿರುವುದು, ಅಥವಾ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾದರೆ ಅದು ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಎಚ್ಚರಿಸಿದರು.

ಯಾವುದೇ ಪ್ರಕರಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಶು ಗಿರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್