ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!

ಸಿಂಧನೂರಿನಲ್ಲಿ ಕಂಟೇನರ್ ಲಾರಿ ತಡೆದು ಗೋವುಗಳ ರಕ್ಷಣೆ; ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರ ಕಾರ್ಯಾಚರಣೆ, ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲು

Advertisement

ಸಿಂಧನೂರು, ಆ.21: ಹುಕ್ಕೇರಿಯಿಂದ ಕೇರಳದತ್ತ 25 ಗೋವುಗಳನ್ನು ಕಂಟೇನರ್ ಲಾರಿಯಲ್ಲಿ ಸಾಗಿಸಲಾಗುತ್ತಿತ್ತು ಎನ್ನಲಾದ ಪ್ರಕರಣವನ್ನು ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಕಾರ್ಯಕರ್ತರು ಪತ್ತೆಹಚ್ಚಿ, ಸಿಂಧನೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಲಾರಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಶುಕ್ರವಾರ ನಡೆದಿದೆ.

Advertisement
ಪಂಚನಾಮ ಮಾಡುತ್ತಿರುವ ಪೊಲೀಸರು
ಪಂಚನಾಮ ಮಾಡುತ್ತಿರುವ ಪೊಲೀಸರು

ಹುಕ್ಕೇರಿಯಿಂದ ಕೇರಳದತ್ತ ತೆರಳುತ್ತಿದ್ದ ಕೆಎ 51 ಎಎಚ್ 4830 ನೋಂದಣಿ ಸಂಖ್ಯೆಯ ಕಂಟೇನರ್ ಲಾರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಕಾರ್ಯಕರ್ತರಿಗೆ ಲಭಿಸಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಕಾರ್ಯಕರ್ತ ಗೋಪಿ ಗೌಡ ಸೇರಿದಂತೆ ಇತರ ಕಾರ್ಯಕರ್ತರು ಲಾರಿಯನ್ನು ಬೆನ್ನತ್ತಿದ್ದಾರೆ.

ಗೋವುಗಳ ಸಾಗಿಸುತ್ತಿದ್ದ ಕಂಟೇನರ್ ಲಾರಿ
ಗೋವುಗಳ ಸಾಗಿಸುತ್ತಿದ್ದ ಕಂಟೇನರ್ ಲಾರಿ

ಕುಷ್ಟಗಿ ವರವಲಯದಿಂದ ಲಾರಿಯನ್ನು ಬೆನ್ನತ್ತಿದ ಕಾರ್ಯಕರ್ತರು ಸಿಂಧನೂರು ನಗರ ಪ್ರವೇಶಿಸಿದ ಬಳಿಕ ಲಾರಿಯನ್ನು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ತಡೆದು ನಿಲ್ಲಿಸಿದ್ದಾರೆ. ಬಳಿಕ ಸಿಂಧನೂರು ಟೌನ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ದೂರು ಸಲ್ಲಿಸಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಸಿಂಧನೂರು ನಗರ ಪೊಲೀಸರು ಲಾರಿಯನ್ನು ಪರಿಶೀಲಿಸಿ, ಪಂಚನಾಮೆ ನಡೆಸಿದ್ದಾರೆ. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪೊಲೀಸರು ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಪ್ರಕರಣ ಕ್ರೈಂ ನಂ. 246/2026 ಆಗಿದ್ದು, 21-08-2026ರಂದು ಸಿಂಧನೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಿಂಧನೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ನಡೆದಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ರಕ್ಷಣೆ ಮಾಡಿರುವ ಗೋವುಗಳು
ರಕ್ಷಣೆ ಮಾಡಿರುವ ಗೋವುಗಳು

ಪ್ರಕರಣದಲ್ಲಿ ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ–2020, ಜಾನುವಾರು ಸಾಗಣೆ ನಿಯಮಗಳು–2021, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ–1960, ಜಾನುವಾರು ಸಾಗಣೆ ಕಾಯ್ದೆ–1978, ಭಾರತೀಯ ನ್ಯಾಯ ಸಂಹಿತೆ ಹಾಗೂ ಮೋಟಾರು ವಾಹನ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಲಾರಿ ಚಾಲಕ ಸೇರಿದಂತೆ ಒಟ್ಟು ಆರು ಮಂದಿಯನ್ನು ಆರೋಪಿಗಳಾಗಿ ದಾಖಲಿಸಲಾಗಿದೆ. ಲಾರಿ ಚಾಲಕನಾಗಿ ನವೀನ್ ಎಂಬುವವರ ಹೆಸರು ಹಾಗೂ ಲಾರಿಯ ಸಹಾಯಕರು ಮತ್ತು ಮಾಲೀಕರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

news_1787303982_3_486.webp

ಗೋಶಾಲೆಗೆ 25 ಗೋವುಗಳ ಸ್ಥಳಾಂತರ

ಪೊಲೀಸರ ವಶಕ್ಕೆ ಪಡೆದ ಬಳಿಕ ಲಾರಿಯಲ್ಲಿದ್ದ 25 ಗೋವುಗಳನ್ನು ಸಿಂಧನೂರು ನಗರದ ರಾಯಚೂರು ಮುಖ್ಯ ರಸ್ತೆಯಲ್ಲಿರುವ ಜೈನ್ ವರ್ಧಮಾನ್ ಗೋಶಾಲೆಗೆ ಸ್ಥಳಾಂತರಿಸಲಾಗಿದೆ. ಸಿಂಧನೂರು ನಗರ ಪೊಲೀಸ್ ಠಾಣೆಯ ಪಿಐ ವೀರಾರೆಡ್ಡಿ ಅವರ ಸಮ್ಮುಖದಲ್ಲಿ ಗೋವುಗಳನ್ನು ಗೋಶಾಲೆಗೆ ಬಿಡಲಾಗಿದೆ ಎಂದು ತಿಳಿದುಬಂದಿದೆ. ಗೋವುಗಳನ್ನು ಯಾವ ಉದ್ದೇಶಕ್ಕಾಗಿ ಹಾಗೂ ಅಗತ್ಯ ದಾಖಲೆಗಳು ಮತ್ತು ನಿಯಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ, ಅದರ ಚಾಲಕ, ಸಹಾಯಕರು ಹಾಗೂ ಮಾಲೀಕರ ವಿರುದ್ಧ ದಾಖಲಾಗಿರುವ ಆರೋಪಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ತನಿಖೆಯ ನಂತರ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

 

— ಬಡವರ ಬಾರಕೋಲು ನ್ಯೂಸ್, ಸಿಂಧನೂರು

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹ