ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳಿಗೆ ಅವಕಾಶ: ಸಮಾಜದಲ್ಲಿ ಹೆಚ್ಚಿದ ಚರ್ಚೆ

Advertisement

news_1778905892_0_440.webp

Advertisement

📍ಸಿಂಧನೂರು | ವಿಶೇಷ ವರದಿ BB NEWS KANNADA 

ರಾಜ್ಯದ ಶಾಲಾ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಸಂಕೇತಗಳ ಧರಿಸುವಿಕೆಗೆ ಅವಕಾಶ ಕಲ್ಪಿಸಿರುವ ಸರ್ಕಾರದ ಇತ್ತೀಚಿನ ತೀರ್ಮಾನವು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಮಾನತೆ, ಜಾತ್ಯತೀತತೆ ಮತ್ತು ವೈಜ್ಞಾನಿಕ ಮನೋಭಾವಕ್ಕೆ ಒತ್ತು ನೀಡಬೇಕಾದ ಸಂದರ್ಭದಲ್ಲಿ ಇಂತಹ ನಿರ್ಧಾರಗಳು ಸಮಾಜದಲ್ಲಿ ಧಾರ್ಮಿಕ ಧ್ರುವೀಕರಣಕ್ಕೆ ದಾರಿ ಮಾಡಿಕೊಡಬಹುದು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

news_1778048979_0_441.webp

ಈ ಕುರಿತು ಪ್ರತಿಕ್ರಿಯಿಸಿರುವ ಮಕ್ಕಳ ತಜ್ಞರಾದ ಡಾಕ್ಟರ್ ಶಿವರಾಜ್ ಪಾಟೀಲ ಅವರು, ಶಿಕ್ಷಣ ಸಂಸ್ಥೆಗಳು ಕೇವಲ ಪಾಠ ಕಲಿಸುವ ಸ್ಥಳಗಳಲ್ಲ; ಅವು ಸಮಾಜದಲ್ಲಿ ಸಮಾನತೆ, ಭ್ರಾತೃತ್ವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಿವೆ ಎಂದು ಹೇಳಿದ್ದಾರೆ.

news_1778142080_0_556.webp

ಅವರ ಪ್ರಕಾರ, ಸಮವಸ್ತ್ರದ ಏಕರೂಪತೆಯನ್ನು ಸಡಿಲಗೊಳಿಸಿ ಹಿಜಾಬ್, ಜನಿವಾರ, ರುದ್ರಾಕ್ಷಿ, ಪೇಟ ಸೇರಿದಂತೆ ವಿವಿಧ ಧಾರ್ಮಿಕ ಗುರುತುಗಳಿಗೆ ಅವಕಾಶ ನೀಡುವುದು ವಿದ್ಯಾರ್ಥಿಗಳ ನಡುವೆ ಧರ್ಮದ ಆಧಾರದ ಮೇಲೆ ವಿಭಜನೆಯ ಮನೋಭಾವ ಹುಟ್ಟಿಸಬಹುದಾದ ಅಪಾಯವಿದೆ. “ಶಾಲಾ ಕೊಠಡಿಗಳಲ್ಲಿ ‘ನಾವೆಲ್ಲರೂ ಒಂದೇ’ ಎಂಬ ಭಾವನೆ ಮೂಡಬೇಕಾದರೆ, ಧಾರ್ಮಿಕ ಗುರುತುಗಳಿಗಿಂತ ಮಾನವೀಯತೆ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

news_1777986246_0_709.webp

ಭಾರತೀಯ ಸಂವಿಧಾನದ ವಿಧಿ 14 ಹಾಗೂ ವಿಧಿ 15 ಸಮಾನತೆ ಮತ್ತು ಧಾರ್ಮಿಕ ತಾರತಮ್ಯ ನಿಷೇಧವನ್ನು ಪ್ರತಿಪಾದಿಸುತ್ತವೆ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತುಗಳಿಗೆ ಅಧಿಕೃತ ಮಾನ್ಯತೆ ನೀಡುವುದು ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಬಹುದು ಎಂದು ಅವರು ಹೇಳಿದ್ದಾರೆ.

news_1777816989.webp

ರಾಷ್ಟ್ರಕವಿ ಕುವೆಂಪು ಅವರ ‘ವಿಶ್ವಮಾನವ’ ಪರಿಕಲ್ಪನೆಯನ್ನು ಉಲ್ಲೇಖಿಸಿದ ಅವರು, “ಪ್ರತಿ ಮಗು ಹುಟ್ಟುವಾಗ ವಿಶ್ವಮಾನವನಾಗಿರುತ್ತಾನೆ. ಆದರೆ ಸಮಾಜವೇ ಅವನನ್ನು ಜಾತಿ-ಧರ್ಮಗಳ ಚೌಕಟ್ಟಿನಲ್ಲಿ ಸೀಮಿತಗೊಳಿಸುತ್ತದೆ” ಎಂಬ ಕುವೆಂಪು ಅವರ ಚಿಂತನೆ ಇಂದಿಗೂ ಪ್ರಸ್ತುತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 

ಇದೇ ವೇಳೆ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರ ವಚನಗಳನ್ನೂ ಸ್ಮರಿಸಿರುವ ಅವರು, ಬಾಹ್ಯ ಆಚರಣೆಗಳಿಗಿಂತ ಅಂತಃಶುದ್ಧಿ ಮತ್ತು ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡುವ ಸಂದೇಶವನ್ನು ಸಮಾಜ ಮರೆತಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

news_1777804083.webp

news_1777804015_0_413.webp

“ವಸುಧೈವ ಕುಟುಂಬಕಂ” ಎಂಬ ಉಪನಿಷತ್ತಿನ ಸಂದೇಶ ಇಡೀ ಜಗತ್ತೇ ಒಂದು ಕುಟುಂಬ ಎಂಬ ಚಿಂತನೆ ಸಾರುತ್ತದೆ. ಆದರೆ ಶಿಕ್ಷಣ ವಾತಾವರಣದಲ್ಲಿ ಧಾರ್ಮಿಕ ಗುರುತುಗಳನ್ನು ಪ್ರತ್ಯೇಕವಾಗಿ ಒತ್ತಿ ಹೇಳುವುದು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

news_1777542755_0_368.webp

ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಹಿತಾಸಕ್ತಿಗಳ ವೇದಿಕೆಯಾಗಿಸಬಾರದು ಎಂದು ಒತ್ತಾಯಿಸಿದ ಅವರು, ಸರ್ಕಾರವು ಈ ನಿರ್ಧಾರವನ್ನು ಮರುಪರಿಶೀಲಿಸಿ ಮಕ್ಕಳ ಭವಿಷ್ಯ, ಸಾಮಾಜಿಕ ಸೌಹಾರ್ದತೆ ಮತ್ತು ಜಾತ್ಯತೀತ ಮೌಲ್ಯಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್