ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮೂವರ ಬಂಧನ

ಬಡ ಮಹಿಳೆಯರ ಮೇಲೆ ಮೋಸದ ಜಾಲ, ಯುವಕರು ಎಚ್ಚೆತ್ತುಕೊಳ್ಳಬೇಕೆಂಬ ಸಂದೇಶ ನೀಡಿದ ಘಟನೆ

Advertisement

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಡಿಲಿನ ದಾಳಿ : ಯುವತಿಯ ರಕ್ಷಣೆ – ಮೂವರು ಆರೋಪಿಗಳು ಕಂಬನಿ ಮಿಡಿದ ಬಂಧನ!

Advertisement

 

ಸಿಂಧನೂರು, ಏ.14:

ತಾಲ್ಲೂಕಿನ ವಿರುಪಾಪೂರು ಸೀಮೆಯ ನ್ಯಾಷನಲ್ ಲೇಔಟ್‌ನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಗ್ರಾಮೀಣ ಪೊಲೀಸರು ಸಿಡಿಲಿನಂತೆ ದಾಳಿ ನಡೆಸಿ, ಒಬ್ಬ ನಿರಪರಾಧ ಯುವತಿಯನ್ನು ರಕ್ಷಿಸಿ, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಾರ್ವಜನಿಕರಲ್ಲಿ ಆತಂಕದ ಜೊತೆಗೆ ಜಾಗೃತಿ ಮೂಡಿಸಿದೆ.

ಖಚಿತ ಮಾಹಿತಿಯ ಆಧಾರದಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ ಅವರ ಮಾರ್ಗದರ್ಶನದಲ್ಲಿ ಗ್ರಾಮೀಣ ಠಾಣೆಯ ಸಿಪಿಐ ವಿನಾಯಕ ಹಾಗೂ ಪಿಎಸ್‌ಐ ಮೌನೇಶ ರಾಠೋಡ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತು. ಈ ವೇಳೆ ಮಾಗಡಿ ತಾಲೂಕಿನ ಯುವತಿಯನ್ನು ರಕ್ಷಣೆ ಮಾಡಲಾಗಿದ್ದು, ಗಂಗಾನಗರದ ವಿಜಯಕುಮಾರ, ಗಂಗಾಧರ್ ಹಾಗೂ ಮಹಿಬೂಬಿಯಾ ಕಾಲೋನಿಯ ಶ್ಯಾಮಣ್ಣ ಎಂಬ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬೆಳಕಿಗೆ ಬಂದಿವೆ. ಆರೋಪಿ ವಿಜಯಕುಮಾರ ಪಂಪಣ್ಣ ಶೆಡ್ ಅನ್ನು ಬಾಡಿಗೆಗೆ ಪಡೆದು, ಬಡತನದಲ್ಲಿರುವ ಮಹಿಳೆಯರಿಗೆ ಉದ್ಯೋಗ ನೀಡುವ ನೆಪದಲ್ಲಿ ಮೋಸ ಮಾಡಿ, ಹಣದ ಆಮಿಷ ತೋರಿಸಿ ಅವರನ್ನು ಈ ಅಕ್ರಮ ದಂಧೆಗೆ ತಳ್ಳುತ್ತಿದ್ದನೆಂಬುದು ತಿಳಿದುಬಂದಿದೆ. ಅಲ್ಲದೆ, ತನ್ನ ಪರಿಚಯದ ಗ್ರಾಹಕರಿಗೆ ಮಹಿಳೆಯರ ಫೋಟೋಗಳನ್ನು ಕಳುಹಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂಬ ಮಾಹಿತಿಯೂ ಲಭ್ಯವಾಗಿದೆ.

ಈ ಘಟನೆ ಸಿಂಧನೂರು ತಾಲೂಕು ಮಾತ್ರವಲ್ಲದೆ ರಾಯಚೂರು ಜಿಲ್ಲೆಯಲ್ಲಿ ಯುವ ಸಮುದಾಯದ ಕಣ್ಣುತೆರೆಸುವಂತಾಗಿದೆ. ಸುಲಭ ಹಣದ ಆಸೆಗೆ ಬಲಿಯಾಗುವುದು ಜೀವನವನ್ನೇ ಹಾಳುಮಾಡುತ್ತದೆ ಎಂಬ ಸಂದೇಶವನ್ನು ಈ ಪ್ರಕರಣ ಮತ್ತೊಮ್ಮೆ ಸಾರಿದೆ.

👉 ಯುವಕರು ಎಚ್ಚೆತ್ತುಕೊಳ್ಳಬೇಕು.

👉 ಇಂತಹ ಅಕ್ರಮ ಚಟುವಟಿಕೆಗಳಿಗೆ ಬಲಿಯಾಗಬಾರದು.

👉 ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು.

ಗ್ರಾಮೀಣ ಪೊಲೀಸರ ಈ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಮಾಜವನ್ನು ಕಾಡುತ್ತಿರುವ ಇಂತಹ ಅಕ್ರಮಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಹೋರಾಟ ಮುಂದುವರಿಸಲಿದೆ ಎಂಬ ವಿಶ್ವಾಸ ಜನರಲ್ಲಿ ಬಲವಾಗುತ್ತಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ