ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು, ಬಿಜೆಪಿಗೆ ಹಿನ್ನಡೆ

Advertisement

ಬಾಗಲಕೋಟೆ, ಮೇ 4: BB NEWS KANNADA 

Advertisement

ಪ್ರತಿಷ್ಠಿತವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ರಾಜಕೀಯ ಜಯ ಲಭಿಸಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡ ಈ ಉಪಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು, ಶಾಸಕರು ಮತ್ತು ಸಂಸದರು ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದರು. ಭರ್ಜರಿ ಕ್ಯಾಂಪೇನ್‌ಗೆ ಸಾರ್ಥಕವಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ.

ಮತ ಎಣಿಕೆ ಪ್ರಕ್ರಿಯೆಯಲ್ಲಿ 20ನೇ ಸುತ್ತಿನ ಅಂತ್ಯದ ವೇಳೆಗೆ ಉಮೇಶ್ ಮೇಟಿ ಅವರು ಸುಮಾರು 16,471 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದರು. ಇನ್ನೂ ಕೇವಲ ಮೂರು ಸುತ್ತುಗಳ ಮತ ಎಣಿಕೆ ಬಾಕಿ ಇದ್ದರೂ, ಉಳಿದ ಮತಗಳಿಗಿಂತ ಮುನ್ನಡೆ ಹೆಚ್ಚಿನದಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಗೆಲುವಿನ ಸಂಭ್ರಮಾಚರಣೆ ಆರಂಭಿಸಿದ್ದಾರೆ.

ಇನ್ನೊಂದೆಡೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸೋಲನುಭವಿಸಿದ್ದಾರೆ. ಈ ಸೋಲು ಬಿಜೆಪಿಗೆ ಹಿನ್ನಡೆಯಾಗಿ ಪರಿಣಮಿಸಿದೆ.

ಚುನಾವಣಾ ಫಲಿತಾಂಶ ಸ್ಪಷ್ಟವಾಗುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು. ಪ್ರತಿಷ್ಠೆಯ ಚುನಾವಣೆ ಆಗಿದ್ದರಿಂದ ಈ ಗೆಲುವು ವಿಶೇಷ ಮಹತ್ವ ಪಡೆದುಕೊಂಡಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಈ ಫಲಿತಾಂಶ ಮುಂದಿನ ರಾಜಕೀಯ ಬೆಳವಣಿಗೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಶುರುವಾಗಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ