ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಸವನಗೌಡ ಬಾದರ್ಲಿಗೆ ಸಚಿವ ಸ್ಥಾನ ಫಿಕ್ಸ್ ಆಗ್ತಿದೆಯಾ..?

“ರಾಜ್ಯಕ್ಕೆ ಒಳ್ಳೆಯ ಟೈಮ್ ಬರುತ್ತೆ” ಎಂದ ಸುದೀಪ್ ಮಾತು ಈಗ ರಾಜಕೀಯದಲ್ಲಿ ಭಾರೀ ವೈರಲ್!

Advertisement

“ಕಿಚ್ಚ ಹೇಳಿದ್ದೇ ಸತ್ಯವಾಗ್ತಿದೆಯಾ..?” – ಡಿಕೆ ಶಿವಕುಮಾರ್ ನಾಳೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ..! ಬಸವನಗೌಡ ಬಾದರ್ಲಿಗೆ ಸಚಿವ ಸ್ಥಾನ ಚರ್ಚೆ ಜೋರಾಗಿದೆ..!“ರಾಜ್ಯಕ್ಕೆ ಒಳ್ಳೆಯ ಟೈಮ್ ಬರುತ್ತೆ” ಎಂದ ಸುದೀಪ್ ಮಾತು ಈಗ ರಾಜಕೀಯದಲ್ಲಿ ಹೊಸ ಸಂಚಲನ!

Advertisement

 

📍ಸಿಂಧನೂರು | ವಿಶೇಷ ವರದಿ

ಕೆಲವು ದಿನಗಳ ಹಿಂದೆ ಸಿಂಧನೂರಿನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದ ಒಂದು ಮಾತು ಇದೀಗ ರಾಜ್ಯ ರಾಜಕೀಯದಲ್ಲಿ ನಿಜವಾಗ್ತಿದೆಯಾ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.“ಸಿಂಧನೂರಿಗೆ ಹಾಗೂ ರಾಜ್ಯಕ್ಕೆ ಒಳ್ಳೆಯ ಟೈಮ್ ಬರ್ತಾ ಇದೆ” ಎಂದು ಸುದೀಪ್ ಹೇಳಿದ್ದ ವೇಳೆ ಅದನ್ನು ಸಾಮಾನ್ಯ ಶುಭಾಶಯದ ಮಾತು ಎಂದು ಹಲವರು ತೆಗೆದುಕೊಂಡಿದ್ದರು. ಆದರೆ ಈಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವೇಗದ ಬೆಳವಣಿಗೆಗಳು ಆ ಮಾತಿನತ್ತ ಮತ್ತೆ ಎಲ್ಲರ ಗಮನ ಸೆಳೆಯುವಂತಾಗಿದೆ.

ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯಪಾಲರಿಗೆ ಸಮಯ ಕೇಳಿದ್ದು, ನಾಳೆ ಅಧಿಕೃತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳು ಬಹುತೇಕ ಖಚಿತವಾಗಿವೆ ಎಂಬ ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಈ ಬೆಳವಣಿಗೆಗಳ ನಡುವೆಯೇ ಸಿಂಧನೂರಿನಲ್ಲಿ ನಡೆದ ಕಾರ್ಯಕ್ರಮ ಹಾಗೂ ಕಿಚ್ಚ ಸುದೀಪ್ ಹೇಳಿದ್ದ ಮಾತುಗಳು ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

news_1777804015_0_413.webp

🟡 “ಡಿಕೆಶಿ ಸಿಎಂ ಆದರೆ ಬಾದರ್ಲಿಗೆ ಸಚಿವ ಸ್ಥಾನ..?”

ವಿಧಾನ ಪರಿಷತ್ ಸದಸ್ಯ ಬಸವನಗೌಡ ಬಾದರ್ಲಿ ಅವರು ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲೇ ಕೇಳಿಬರುತ್ತಿವೆ. ಹೀಗಾಗಿ, “ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಬಸವನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆಯಾ..?” ಎಂಬ ಪ್ರಶ್ನೆ ಇದೀಗ ಸಿಂಧನೂರು ಸೇರಿದಂತೆ ಉತ್ತರ ಕರ್ನಾಟಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು, “ಸುದೀಪ್ ಅಂದೇ ಸುಳಿವು ಕೊಟ್ಟಿದ್ದರು… ಈಗ ಅದು ಸತ್ಯವಾಗ್ತಿದೆ!” ಎಂದು ಪೋಸ್ಟ್ ಮಾಡುತ್ತಿದ್ದಾರೆ.

news_1777986246_0_709.webp

🔥 ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಚರ್ಚೆ

“ಕಿಚ್ಚ ಸುದೀಪ್ ಹೇಳಿದ್ದು ಭವಿಷ್ಯವಾಣಿಯಾ..?” “ಸಿಂಧನೂರಿಗೆ ಒಳ್ಳೆಯ ಟೈಮ್ ಶುರುವಾಗಿದೆಯಾ..?” “ಬಾದರ್ಲಿ ಸಚಿವರಾಗ್ತಾರಾ..?”ಎಂಬ ಪ್ರಶ್ನೆಗಳು ಇದೀಗ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ಗಳಲ್ಲಿ ಟ್ರೆಂಡ್ ಆಗುತ್ತಿವೆ. ಕೆಲವರು, “ಸಿಂಧನೂರಿನಲ್ಲಿ ನಡೆದ ಕಾರ್ಯಕ್ರಮವೇ ಈಗ ರಾಜ್ಯ ರಾಜಕೀಯದ ಟರ್ನಿಂಗ್ ಪಾಯಿಂಟ್ ಆಗಿದೆ” ಎಂದು ಪ್ರತಿಕ್ರಿಯಿಸುತ್ತಿದ್ದಾರೆ.

news_1778142080_0_556.webp

😄 ಸ್ವಪಕ್ಷದಲ್ಲೇ ಕುತೂಹಲ

ಕಾಂಗ್ರೆಸ್ ಕಾರ್ಯಕರ್ತರಲ್ಲೂ ಈ ವಿಚಾರದ ಬಗ್ಗೆ ಭಾರೀ ಕುತೂಹಲ ಹೆಚ್ಚಾಗಿದೆ.“ಡಿಕೆಶಿ ಸಿಎಂ ಆದರೆ ಉತ್ತರ ಕರ್ನಾಟಕದ ಕೆಲ ನಾಯಕರಿಗೆ ದೊಡ್ಡ ಅವಕಾಶ ಸಿಗಬಹುದು. ಅದರಲ್ಲಿ ಬಸವನಗೌಡ ಬಾದರ್ಲಿ ಹೆಸರು ಕೂಡ ಪ್ರಮುಖವಾಗಿ ಕೇಳಿಬರುತ್ತಿದೆ” ಎಂಬ ಮಾತುಗಳು ಪಕ್ಷದ ಒಳವಲಯದಲ್ಲೇ ಹರಿದಾಡುತ್ತಿವೆ ಎನ್ನಲಾಗಿದೆ.

news_1778905892_0_440.webp

⚠️ ಅಧಿಕೃತ ಘೋಷಣೆ ಬಾಕಿ

ಆದರೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ. ಆದರೂ ಸಿಂಧನೂರಿನಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದ “ರಾಜ್ಯಕ್ಕೆ ಒಳ್ಳೆಯ ಟೈಮ್ ಬರುತ್ತೆ” ಎಂಬ ಮಾತು ಈಗ ರಾಜ್ಯ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ, ಹೊಸ ನಿರೀಕ್ಷೆ ಹಾಗೂ ಹೊಸ ಕುತೂಹಲಕ್ಕೆ ಕಾರಣವಾಗಿರುವುದು ಮಾತ್ರ ಸತ್ಯ.

 

🗣️ “ಸಿಂಧನೂರಿಗೆ ಒಳ್ಳೆಯ ಟೈಮ್” – ಇದೀಗ ಅದು ರಾಜಕೀಯ ಸತ್ಯವಾಗ್ತಿದೆಯಾ..?

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್