ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಖಾಲಿ ಪೇಪರ್ ಸಹಿ ವಿವಾದ: ಪಿಎಸ್‌ಐ ವಿರುದ್ಧ ವಕೀಲರ ಆಕ್ರೋಶ

"ಪ್ರಶ್ನೆ ಕೇಳಿದ್ದಕ್ಕೆ ನಿಂದನೆ" – ತುರ್ವಿಹಾಳ ಠಾಣೆ ಪಿಎಸ್‌ಐ ವಿರುದ್ಧ ಆರೋಪ

Advertisement

ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡ ಆರೋಪ: ಪಿಎಸ್‌ಐ ವಿರುದ್ಧ ವಕೀಲರ ಆಕ್ರೋಶ

Advertisement

ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್‌ಐ ಸುಜಾತ ಅವರ ವಿರುದ್ಧ ಖಾಲಿ ಪೇಪರ್ ಮೇಲೆ ದೂರುದಾರರಿಂದ ಸಹಿ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಕೀಲ ಅರಳಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊ ಹಾಗೂ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿರುವ ವಕೀಲ ಅರಳಯ್ಯ, "ದೂರುದಾರರೊಬ್ಬರು ತಮ್ಮನ್ನು ಸಂಪರ್ಕಿಸಿ ಠಾಣೆಯಲ್ಲಿ ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಗೆ ತೆರಳಿ ವಿಚಾರಿಸಿದಾಗ ಪಿಎಸ್‌ಐ ಸುಜಾತ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ" ಎಂದು ಆರೋಪಿಸಿದ್ದಾರೆ.

news_1782112029_0_801.webp

"ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಳ್ಳುವುದು ಕಾನೂನಾತ್ಮಕವಾಗಿ ಸರಿಯೇ ಎಂಬ ಪ್ರಶ್ನೆಯನ್ನು ಕೇಳಿದ್ದಕ್ಕೆ ನನಗೆ ಅವಮಾನ ಮಾಡಿದ್ದಾರೆ. ಈ ಕುರಿತು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಹಾಗೂ ಬಾರ್ ಕೌನ್ಸಿಲ್‌ಗೆ ದೂರು ಸಲ್ಲಿಸಲು ನಿರ್ಧರಿಸಿದ್ದೇನೆ" ಎಂದು ಅವರು ತಿಳಿಸಿದ್ದಾರೆ.

news_1778905892_0_440.webp

ಈ ಅಧಿಕಾರಿ ಸಾರ್ವಜನಿಕರೊಂದಿಗೆ ಇದೇ ರೀತಿಯ ವರ್ತನೆ ನಡೆಸಿರುವ ಬಗ್ಗೆ ಈ ಹಿಂದೆ ಕೂಡ ದೂರುಗಳು ಕೇಳಿಬಂದಿವೆ ಎಂದು ಕೆಲವು ಸ್ಥಳೀಯರು ಆರೋಪಿಸಿದ್ದಾರೆ. ವಕೀಲರೊಂದಿಗೆ ಈ ರೀತಿಯ ವರ್ತನೆ ನಡೆದಿದ್ದರೆ ಸಾಮಾನ್ಯ ಸಾರ್ವಜನಿಕರೊಂದಿಗೆ ಯಾವ ರೀತಿಯಲ್ಲಿ ನಡೆದುಕೊಳ್ಳಬಹುದು ಎಂಬ ಪ್ರಶ್ನೆ ಸ್ಥಳೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆ ಕುರಿತು ಸಂಪೂರ್ಣ ತನಿಖೆ ನಡೆಸಿ, ಸತ್ಯಾಂಶ ಹೊರತಂದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ವಕೀಲ ಸಮುದಾಯ ಆಗ್ರಹಿಸಿದೆ.

news_1780037113_0_501.webp

ಇನ್ನೊಂದೆಡೆ, ಈ ಸಂಬಂಧ ಪಿಎಸ್‌ಐ ಸುಜಾತ ಅವರ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ದೊರೆತಲ್ಲಿ ಪ್ರಕಟಿಸಲಾಗುವುದು. ಒಟ್ಟಾರೆ, ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿರುವ ಆರೋಪ ಹಾಗೂ ವಕೀಲರೊಂದಿಗೆ ನಡೆದಿರುವ ಎನ್ನಲಾದ ವಾಗ್ವಾದ ಪ್ರಕರಣ ಇದೀಗ ಸಿಂಧನೂರು ಪೊಲೀಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮೇಲಾಧಿಕಾರಿಗಳ ತನಿಖೆಯ ನಂತರವೇ ವಾಸ್ತವಾಂಶ ಬಹಿರಂಗವಾಗಬೇಕಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ