ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮರಕ್ಕೆ ಕಾರು ಡಿಕ್ಕಿ: ಸಿಪಿಐ ರಘುನಾಥ್ ಸ್ಥಳದಲ್ಲೇ ದುರ್ಮರಣ

ಮುಸ್ಟೂರು–ಕಡಬನಕಟ್ಟೆ ಮಧ್ಯೆ ನಿಯಂತ್ರಣ ತಪ್ಪಿದ ಕಾರು ಬೇವಿನ ಮರಕ್ಕೆ ಡಿಕ್ಕಿ, ಸ್ಥಳದಲ್ಲೇ ಪ್ರಾಣಾಪಾಯ

Advertisement

BB NEWS KANNADA 

Advertisement

ವಿಜಯನಗರ: ವಿಜಯನಗರ–ದಾವಣಗೆರೆ ಗಡಿ ಭಾಗದ ಮುಸ್ಟೂರು–ಕಡಬನಕಟ್ಟೆ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಸಿಆರ್‌ಇ ಘಟಕದ ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮಾಹಿತಿಯಂತೆ, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಾಶವಾಗಿದ್ದು, ಸಿಪಿಐ ರಘುನಾಥ್ ಅವರಿಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತ ರಘುನಾಥ್ ಅವರು ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ ಘಟಕದಲ್ಲಿ ಸಿಪಿಐಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದ ಅವರು, ತಮ್ಮ ಸ್ವಗ್ರಾಮದಿಂದ ಹೊಸಪೇಟೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸಿಪಿಐ ರಘುನಾಥ್
ಸಿಪಿಐ ರಘುನಾಥ್

 

ಇತ್ತೀಚೆಗೆ ಅವರಿಗೆ ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಯ ಆದೇಶ ಬಂದಿದ್ದರೂ, ಇನ್ನೂ ಹುದ್ದೆಗೆ ವರದಿ ಮಾಡಿಕೊಂಡಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ಸುದ್ದಿ ತಿಳಿದ ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆ ಪೊಲೀಸ್ ವಲಯದಲ್ಲಿ ತೀವ್ರ ಸಂತಾಪಕ್ಕೆ ಕಾರಣವಾಗಿದ್ದು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ದುಃಖ ವ್ಯಕ್ತಪಡಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್