ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ಟೋಬರ್ 4ರಂದು ರಾಯಚೂರಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ಸಾಧ್ಯತೆ!

ಬೆಳೆ ನಷ್ಟ ಪರಿಹಾರ, ಕಾಲುವೆ ನೀರು, ವಿದ್ಯುತ್ ಪೂರೈಕೆ ಕುರಿತು ಜಿಲ್ಲಾಧಿಕಾರಿ ಮಹತ್ವದ ಸೂಚನೆ

Advertisement

ಸುದ್ದಿಯ ಮುಖ್ಯಾಂಶಗಳು

  • ಅಕ್ಟೋಬರ್ 4ರಂದು ಕೇಂದ್ರ ಬರ ಅಧ್ಯಯನ ತಂಡದ ಭೇಟಿ ಸಾಧ್ಯತೆ.

    Advertisement
  • ಜೋಳ ಖರೀದಿ ಬಾಕಿ ಹಣ ಒಂದು ವಾರದಲ್ಲಿ ಪಾವತಿ.

  • ಬೆಳೆ ನಷ್ಟ ಸಮೀಕ್ಷೆ ಹಾಗೂ ಪರಿಹಾರ ವಿತರಣೆಗೆ ಸೂಚನೆ.

  • ಕಾಲುವೆಗಳ ಹೂಳು ತೆರವುಗೊಳಿಸಲು ಕ್ರಮ.

  • ಕುಡಿಯುವ ನೀರು, ಮೇವು ಹಾಗೂ ವಿದ್ಯುತ್ ಪೂರೈಕೆಗೆ ಆದ್ಯತೆ.

 

 

ರಾಯಚೂರು: ಜಿಲ್ಲೆಯ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಅಕ್ಟೋಬರ್ 4ರಂದು ಕೇಂದ್ರ ಬರ ಅಧ್ಯಯನ ತಂಡ ರಾಯಚೂರು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೆಪ್ಟೆಂಬರ್ 28ರಂದು ರೈತ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಬೆಳೆ ನಷ್ಟ ಪರಿಹಾರಕ್ಕೆ ಸೂಚನೆ

ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ತೊಗರಿ, ಹತ್ತಿ, ಸಜ್ಜೆ ಹಾಗೂ ಸೂರ್ಯಕಾಂತಿ ಬೆಳೆಗಳು ಹಾನಿಗೊಳಗಾಗಿವೆ. ನಷ್ಟಕ್ಕೊಳಗಾದ ರೈತರು ಕಡ್ಡಾಯವಾಗಿ ಬೆಳೆ ಸಮೀಕ್ಷೆ ಮಾಡಿಸಿಕೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಬೆಳೆ ನಷ್ಟವನ್ನು ವೈಜ್ಞಾನಿಕವಾಗಿ ಅಂದಾಜಿಸಿ ರೈತರಿಗೆ ಪರಿಹಾರ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

news_1790599956_0_442.webp

 

ಜೋಳ ಖರೀದಿ ಬಾಕಿ ಹಣ ಒಂದು ವಾರದಲ್ಲಿ ಪಾವತಿ

ಜೋಳ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಿದ ರೈತರಿಗೆ ಬಾಕಿ ಉಳಿದಿರುವ ಹಣವನ್ನು ಒಂದು ವಾರದೊಳಗೆ ಪಾವತಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಕಾಲುವೆ ನೀರು ಕೊನೆಯ ಭಾಗದ ರೈತರಿಗೂ ತಲುಪಿಸಲು ಕ್ರಮ

ತುಂಗಭದ್ರಾ ಎಡದಂಡೆ ಕಾಲುವೆಯ ಹೂಳು ತೆಗೆಯಲು ವಿಭಾಗವಾರು ಅಂದಾಜು ಪಟ್ಟಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮೇಲ್ಭಾಗ ಮತ್ತು ಕೆಳಭಾಗದ ರೈತರು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು. ನಾರಾಯಣಪುರ ಬಲದಂಡೆ ಕಾಲುವೆಯ ಸಮಸ್ಯೆಗಳನ್ನು ಸಂಬಂಧಿಸಿದ ಮುಖ್ಯ ಎಂಜಿನಿಯರ್‌ಗಳೊಂದಿಗೆ ಸಭೆ ನಡೆಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

news_1781778738_0_399.webp

 

ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ

ಜಿಲ್ಲೆಯಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು. ಭೂ ದಾಖಲೆ ಹೊಂದಿರುವ ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರೈತರಿಗೆ ವಿದ್ಯುತ್ ಪೂರೈಕೆಗೆ ಸೂಚನೆ

ರಾಯಚೂರು ತಾಲೂಕಿನಲ್ಲಿ ದಿನಕ್ಕೆ 9ರಿಂದ 10 ಗಂಟೆಗಳ ಕಾಲ ಹಾಗೂ ಉಳಿದ ತಾಲೂಕುಗಳಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುವಂತೆ ಕ್ರಮ ವಹಿಸುವಂತೆ ತಿಳಿಸಿದರು.

news_1779340187_0_802.webp

 

ರೈತ ಮುಖಂಡರಿಂದ ವಿವಿಧ ಬೇಡಿಕೆಗಳ ಮನವಿ

ಸಭೆಯಲ್ಲಿ ರೈತ ಮುಖಂಡರು ಬೆಳೆ ನಷ್ಟ ಪರಿಹಾರವನ್ನು ತಕ್ಷಣ ರೈತರ ಖಾತೆಗೆ ಜಮೆ ಮಾಡಬೇಕು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ತುಂಗಭದ್ರಾ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳ ಉಪಕಾಲುವೆಗಳಲ್ಲಿರುವ ಹೂಳು ಮತ್ತು ಕಸ ತೆರವುಗೊಳಿಸಿ ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪಿಸಬೇಕು. ಜೋಳ ಖರೀದಿ ಕೇಂದ್ರಗಳಲ್ಲಿ ಬಾಕಿ ಇರುವ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಅಲ್ಲದೆ, ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಏಳು ದಿನ ಬಂದ್ ಹಾಗೂ 14 ದಿನ ನೀರು ಹರಿಸುವ ವಾರಾಬಂದಿ ಪದ್ಧತಿ ಜಾರಿಗೊಳಿಸುವಂತೆ ರೈತ ಮುಖಂಡರು ಮನವಿ ಮಾಡಿದರು. ಸಭೆಯಲ್ಲಿ ಲಿಂಗಸುಗೂರು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ್, ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಗೌರವಪೂರ್ವಕ ಆಹ್ವಾನಅಕ್ಟೋಬರ್ 4ರಂದು ರಾಯಚೂರಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ಸಾಧ್ಯತೆ!“ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿ!”ಸಿಂಧನೂರಿನಲ್ಲಿ ಸೆ.23ರಿಂದ ಉದ್ಯಮಶೀಲತಾ ತರಬೇತಿಮನೋರೋಗ ತಜ್ಞರು, ಸಾಮಾಜಿಕ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ