ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮನೆಯೊಳಗೇ ಮರಣದ ನರ್ತನ!

ಅಕ್ಕನ ಬಲಿ, ತಂದೆಯ ಸಾವು; ತಾಯಿ ಇನ್ನೂ ಆಸ್ಪತ್ರೆಯಲ್ಲಿ...

Advertisement

ಆನ್‌ಲೈನ್ ಗೇಮ್ ಹುಚ್ಚು..? ಅಕ್ಕನ ಹತ್ಯೆ, ತಂದೆ ಸಾವು; ತಾಯಿಯ ಸ್ಥಿತಿ ಗಂಭೀರ ಗಂಗಾವತಿ ತಾಲೂಕಿನ ಹಳೇ ಅಯೋಧ್ಯೆ ಗ್ರಾಮದಲ್ಲಿ ಬೆಚ್ಚಿಬೀಳಿಸಿದ ದುರಂತ; ಬಳಿಕ ತನಗೆ ತಾನೇ ಚಾಕು ಇರಿದುಕೊಂಡ ವಿದ್ಯಾರ್ಥಿ

Advertisement
ಬಾಲಕನಿಗೆ ಬಲಿಯಾದ ಅಕ್ಕ ತಂದೆ ತಾಯಿ ಆಸ್ಪತ್ರೆಯಲ್ಲಿ
ಬಾಲಕನಿಗೆ ಬಲಿಯಾದ ಅಕ್ಕ ತಂದೆ ತಾಯಿ ಆಸ್ಪತ್ರೆಯಲ್ಲಿ

ಗಂಗಾವತಿ, ಜೂನ್ 7: ಆನ್‌ಲೈನ್ ಗೇಮ್ ವ್ಯಸನದಿಂದ ಪ್ರೇರಿತನಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ಅಕ್ಕನ ಮೇಲೆ ಚಾಕುವಿನಿಂದ ಮಾರಣಾಂತಿಕ ದಾಳಿ ನಡೆಸಿ, ತಡೆಯಲು ಮುಂದಾದ ತಂದೆ-ತಾಯಿ ಮೇಲೆಯೂ ಹಲ್ಲೆ ನಡೆಸಿರುವ ಭೀಕರ ಘಟನೆ ಗಂಗಾವತಿ ತಾಲೂಕಿನ ಹಳೇ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

news_1780027666_0_213.webp

ಘಟನೆಯಲ್ಲಿ ವಿದ್ಯಾರ್ಥಿಯ ಅಕ್ಕ ಪ್ರಗತಿ (19) ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ತಂದೆ ವೆಂಕಟ ನಾಯ್ಡು (45) ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ತಾಯಿ ಸೌಜನ್ಯ (40) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಆರೋಪಿ ಸಾಯಿ ವೆಂಕಟಮಣಿ ದೀಪ್ (18) ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕೃತ್ಯ ಎಸಗಿದ ಬಳಿಕ ತನಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆತನಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬದ ಹಳೆಯ ಫೋಟೋ
ಕುಟುಂಬದ ಹಳೆಯ ಫೋಟೋ

ಏನಿದು ಘಟನೆ?

ಕುಟುಂಬದ ಸದಸ್ಯರು ಮನೆಯಲ್ಲಿ ಇದ್ದ ವೇಳೆ ಏಕಾಏಕಿ ಚಾಕು ಹಿಡಿದು ಬಂದ ವಿದ್ಯಾರ್ಥಿ ಮೊದಲು ತನ್ನ ಅಕ್ಕ ಪ್ರಗತಿ ಮೇಲೆ ದಾಳಿ ನಡೆಸಿದ್ದಾನೆ. ಅಕ್ಕನನ್ನು ರಕ್ಷಿಸಲು ಮುಂದಾದ ತಂದೆ ಹಾಗೂ ತಾಯಿ ಮೇಲೆಯೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪ್ರಗತಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಳಿಕ ತಂದೆ ವೆಂಕಟ ನಾಯ್ಡು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

news_1778142080_0_556.webp

ಆನ್‌ಲೈನ್ ಗೇಮ್ ಪ್ರಭಾವದ ಶಂಕೆ

ಆರೋಪಿ ವಿದ್ಯಾರ್ಥಿ ಇತ್ತೀಚೆಗೆ ಆನ್‌ಲೈನ್ ಗೇಮ್‌ಗಳಿಗೆ ಹೆಚ್ಚು ವ್ಯಸನಿಯಾಗಿದ್ದ ಎನ್ನಲಾಗಿದ್ದು, ಇದೇ ಹಿನ್ನೆಲೆಯಲ್ಲೇ ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

news_1780037113_0_501.webp

ಗ್ರಾಮದಲ್ಲಿ ಆಘಾತ

ಒಂದೇ ಕುಟುಂಬದಲ್ಲಿ ನಡೆದ ಈ ಭೀಕರ ಘಟನೆ ಹಳೇ ಅಯೋಧ್ಯೆ ಗ್ರಾಮದಲ್ಲಿ ಆತಂಕ ಮತ್ತು ಆಘಾತಕ್ಕೆ ಕಾರಣವಾಗಿದೆ. ನೆರೆಹೊರೆಯವರು ಹಾಗೂ ಗ್ರಾಮಸ್ಥರು ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ.

news_1779340187_0_802.webp

ತನಿಖೆ ಆರಂಭ

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿಯ ಮಾನಸಿಕ ಸ್ಥಿತಿ, ಮೊಬೈಲ್ ಬಳಕೆ, ಆನ್‌ಲೈನ್ ಚಟುವಟಿಕೆಗಳು ಸೇರಿದಂತೆ ವಿವಿಧ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ. ಒಂದೇ ಕುಟುಂಬದಲ್ಲಿ ಅಕ್ಕನ ಹತ್ಯೆ, ತಂದೆಯ ಸಾವು ಹಾಗೂ ತಾಯಿಯ ಗಂಭೀರ ಸ್ಥಿತಿ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಿಸಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿ