ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆ

ಮಳೆ ಕೊರತೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಡಳಿತ ಒತ್ತು – ಕುಡಿಯುವ ನೀರು, ರಸಗೊಬ್ಬರ ಹಾಗೂ ಮಳೆಹಾನಿ ನಿರ್ವಹಣೆ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

Advertisement

ರಾಯಚೂರು, ಜೂನ್ 20: ಜಿಲ್ಲೆಯಲ್ಲಿನ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಯಾವ ಯಾವ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂಬುದರ ಕುರಿತು ತಕ್ಷಣ ಮಾಹಿತಿ ಸಂಗ್ರಹಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕುಡಿಯುವ ನೀರಿನ ಸಮಸ್ಯೆ, ರಸಗೊಬ್ಬರ ಲಭ್ಯತೆ, ಮಳೆಹಾನಿ ಹಾಗೂ ಕೃಷಿ ಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

news_1781960037_0_853.webp

ಜಿಲ್ಲೆಯ ವಿವಿಧ ಕೆರೆಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಹಾಗೂ ಅದು ಎಷ್ಟು ದಿನಗಳಿಗೆ ಸಾಕಾಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಒದಗಿಸಬೇಕು. ಕಾಲುವೆಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಜುಲೈ ತಿಂಗಳಲ್ಲಿ ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆಯಾದ ಸಂದರ್ಭದಲ್ಲಿ ನೀರು ಕೊನೆಯ ಭಾಗದ ರೈತರಿಗೆ ಸಮರ್ಪಕವಾಗಿ ತಲುಪುವಂತೆ ಮೈಲ್‌ವಾರು ತಂಡಗಳನ್ನು ರಚಿಸಿ ಕಾರ್ಯನಿರ್ವಹಿಸಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವರ್ಷ ತುಂಗಭದ್ರಾ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಕಡಿಮೆಯಿರುವುದರಿಂದ ನೀರಿನ ನಿರ್ವಹಣೆಯಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ರಸಗೊಬ್ಬರ ಹಾಗೂ ಬೀಜ ಕೊರತೆ ಆಗದಂತೆ ಕ್ರಮ

2026-27ನೇ ಸಾಲಿನ ಕೃಷಿ ಚಟುವಟಿಕೆಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ಕೃಷಿ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ತಾಲ್ಲೂಕು ಮಟ್ಟದ ಕೃಷಿ ಅಧಿಕಾರಿಗಳು ರಸಗೊಬ್ಬರ ಮತ್ತು ಬೀಜ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಲಭ್ಯತೆಯ ಮಾಹಿತಿ ಪರಿಶೀಲಿಸಬೇಕು. ರೈತರಿಗೆ ಬೆಳೆ ವಿಮೆ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ಮುಂದಿನ ದಿನಗಳಲ್ಲಿ ಮಳೆಹಾನಿ ಸಂಭವಿಸಿದರೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

news_1780037113_0_501.webp

ಕುಡಿಯುವ ನೀರಿನ ಬಿಲ್ ಬಾಕಿ ಇರಬಾರದು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಮಾತನಾಡಿ, ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಇನ್ನೂ ಖಾಸಗಿ ಬೋರ್‌ವೆಲ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ಟಾಸ್ಕ್‌ಫೋರ್ಸ್ ಅನುದಾನ ಬಿಡುಗಡೆಯಾಗಿರುವುದರಿಂದ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ಯಾವುದೇ ಬಿಲ್ ಬಾಕಿ ಉಳಿಯದಂತೆ ಕ್ರಮ ವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಟಾಸ್ಕ್‌ಫೋರ್ಸ್ ಸಭೆಗಳನ್ನು ನಡೆಸಬೇಕು ಎಂದು ಸೂಚಿಸಿದರು.

ಹಲವು ಗ್ರಾಮ ಪಂಚಾಯಿತಿಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಮೋಟಾರ್‌ಗಳು ಸುಟ್ಟುಹೋಗಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅವುಗಳ ದುರಸ್ತಿ ಕಾರ್ಯ ವಿಳಂಬವಾಗುತ್ತಿದೆ. ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳು ವಿಶೇಷ ಗಮನಹರಿಸಿ ತ್ವರಿತವಾಗಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ತಿಳಿಸಿದರು.

news_1781960044_0_465.webp

ಸಭೆಯಲ್ಲಿ ರಾಯಚೂರು ವಿಭಾಗದ ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಲಿಂಗಸುಗೂರು ವಿಭಾಗದ ಸಹಾಯಕ ಆಯುಕ್ತ ಬಸವಣ್ಣಪ್ಪ ಕಲಶೆಟ್ಟಿ, ಅರಣ್ಯ ಇಲಾಖೆ ಜಿಲ್ಲಾ ಅಧಿಕಾರಿ ಪ್ರವೀಣ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವಾಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ್ ನಾಯಕ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ, ಮಹಾನಗರ ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"