ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಕ್ಕಳ ಹಕ್ಕುಗಳ ರಕ್ಷಣೆಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

Advertisement

ರಾಯಚೂರು, ನ.21: ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಮಕ್ಕಳ ಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಹತ್ವದ ಕ್ರಮ ಕೈಗೊಂಡಿದೆ.

Advertisement

ಆಯೋಗದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಆಯೋಗದ ಸದಸ್ಯರಿಗೆ ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಆಯೋಗದ ನವೆಂಬರ್ 20, 2026ರ ಪತ್ರದ ಪ್ರಕಾರ, ಸದಸ್ಯರಿಗೆ ಜಿಲ್ಲಾವಾರು ಜವಾಬ್ದಾರಿ ವಹಿಸಲಾಗಿದ್ದು, ಆಯಾ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಪರಿಶೀಲನೆ, ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಮನ್ವಯ ಹಾಗೂ ಅಗತ್ಯ ಕ್ರಮಗಳ ಕುರಿತು ಗಮನಹರಿಸುವಂತೆ ಸೂಚಿಸಲಾಗಿದೆ.

ಶ್ರೀ ಸತ್ಯನಾರಾಯಣ ಶೆಟ್ಟಿ ಅವರಿಗೆ ,ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗದ,ಸದಸ್ಯರು
ಶ್ರೀ ಸತ್ಯನಾರಾಯಣ ಶೆಟ್ಟಿ ಅವರಿಗೆ ,ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗದ,ಸದಸ್ಯರು

ರಾಯಚೂರು ಜಿಲ್ಲೆಗೆ ಸತ್ಯನಾರಾಯಣ ಶೆಟ್ಟಿ ಉಸ್ತುವಾರಿ

ಆಯೋಗದ ಸದಸ್ಯರಾದ ಶ್ರೀ ಸತ್ಯನಾರಾಯಣ ಶೆಟ್ಟಿ ಅವರಿಗೆ ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ. ಇದರಿಂದ ರಾಯಚೂರು ಜಿಲ್ಲೆಯ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಒತ್ತು ದೊರೆಯುವ ನಿರೀಕ್ಷೆಯಿದೆ.

ಮಕ್ಕಳ ಮೇಲಿನ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಶಿಕ್ಷಣ, ಆರೋಗ್ಯ, ಪೋಷಣೆ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯಂತಹ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳುವುದು ಆಯೋಗದ ಪ್ರಮುಖ ಉದ್ದೇಶವಾಗಿದೆ. ಜಿಲ್ಲಾ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಲು ಹಾಗೂ ಮಕ್ಕಳಿಗೆ ನ್ಯಾಯ ಮತ್ತು ರಕ್ಷಣೆ ಒದಗಿಸಲು ಈ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ ಸಹಕಾರಿಯಾಗಲಿದೆ.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
5 ಗ್ರಾಂ ಚಿನ್ನದ ಉಂಗುರದ ವಿಚಾರಕ್ಕೆ ದಂಪತಿ ಸಾವು: ಅನಾಥವಾದ ಇಬ್ಬರು ಪುಟ್ಟ ಮಕ್ಕಳು!ಸಿಂಧನೂರಿನಲ್ಲಿ ಒಡಿಶಾ ಮೂಲದ ವ್ಯಕ್ತಿ ನಾಪತ್ತೆ: ಪತ್ತೆಗೆ ಪೊಲೀಸರ ಮನವಿಕನ್ನಡದಲ್ಲಿಯೇ ವೈದ್ಯಕೀಯ ಶಿಕ್ಷಣ ಸಾಧ್ಯವೇ? ಸಾಧಕ-ಬಾಧಕಗಳ ಕುರಿತು ತಜ್ಞರ ಚರ್ಚೆಮಕ್ಕಳ ಹಕ್ಕುಗಳ ರಕ್ಷಣೆಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆರಾಯಚೂರು ಜಿಲ್ಲೆಗೆ ಎರಡು ಪ್ರಮುಖ ನಿಗಮಗಳ ಅಧ್ಯಕ್ಷ ಸ್ಥಾನ!ಸಿಂಧನೂರು ಜಿಲ್ಲೆಗಾಗಿ ಈಗ ಧ್ವನಿ ಎತ್ತದಿದ್ದರೆ ಮತ್ತೆ ಯಾವಾಗ?ಸಾವಿನಲ್ಲೂ ಒಂದಾದ ತಂದೆ-ಮಗ! ಅಪ್ಪನ ಅಗಲಿಕೆಯ ಬೆನ್ನಲ್ಲೇ ಮಗನೂ ಸಾವು; ತಿಪ್ಪನಹಟ್ಟಿಯಲ್ಲಿ ಕಣ್ಣೀರಿನ ಕೋಡಿನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿ