ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿ

ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಡಿಕೆ ಶಿವಕುಮಾರ್ ಸಂಕಲ್ಪ: ಬಸನಗೌಡ ಬಾದರ್ಲಿ

Advertisement

ರಾಯಚೂರು : ತುಂಗಭದ್ರಾ ಜಲಾಶಯದಲ್ಲಿ ವರ್ಷಗಳಿಂದ ಹೆಚ್ಚುತ್ತಿರುವ ಹೂಳು ಸಂಗ್ರಹದಿಂದಾಗಿ ಅಪಾರ ಪ್ರಮಾಣದ ನೀರು ಬಳಕೆಯಾಗದೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳತ್ತ ಹರಿದು ಹೋಗುತ್ತಿರುವ ಹಿನ್ನೆಲೆಯಲ್ಲಿ, ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೃಢ ಸಂಕಲ್ಪ ಕೈಗೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ  ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ತಿಳಿಸಿದ್ದಾರೆ.

Advertisement

news_1778905892_0_440.webp

ಈ ಕುರಿತು ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿಕೊಂಡಿರುವುದರಿಂದ ಸುಮಾರು 32 ಟಿಎಂಸಿಗೂ ಅಧಿಕ ನೀರು ಸಂಗ್ರಹವಾಗದೆ ಗೇಟ್‌ಗಳ ಮೇಲ್ಭಾಗದಿಂದ ನೆರೆ ರಾಜ್ಯಗಳಿಗೆ ಹರಿದು ಹೋಗುತ್ತಿದೆ. ಈ ಅಮೂಲ್ಯ ನೀರನ್ನು ಸಂರಕ್ಷಿಸಿ ರಾಜ್ಯದ ರೈತರಿಗೆ ಉಪಯೋಗಿಸುವ ಉದ್ದೇಶದಿಂದ ನವಲಿ ಸಮಾನಾಂತರ ಜಲಾಶಯ ನಿರ್ಮಾಣದ ಯೋಜನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.

news_1779340187_0_802.webp

ಈ ಯೋಜನೆ ಜಾರಿಯಾದಲ್ಲಿ ರಾಯಚೂರು, ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಕೃಷಿ ಚಟುವಟಿಕೆಗಳಿಗೆ ಹೊಸ ಜೀವ ಸಿಗಲಿದ್ದು, ಸುಮಾರು 9 ಲಕ್ಷ ಎಕರೆಗೂ ಅಧಿಕ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ತಿಳಿಸಿದರು. ಇದು ಕೇವಲ ಕರ್ನಾಟಕದ ನೀರಾವರಿ ಯೋಜನೆಯಷ್ಟೇ ಅಲ್ಲ, ಅಂತರ್‌ರಾಜ್ಯ ನೀರಿನ ನಿರ್ವಹಣೆಗೆ ಸಂಬಂಧಿಸಿದ ಮಹತ್ವದ ಯೋಜನೆಯಾಗಿದ್ದು, ಇದಕ್ಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದ ಕೆಲವು ಆಕ್ಷೇಪಣೆಗಳು ವ್ಯಕ್ತವಾಗಿದ್ದವು. ಈ ಕಾರಣದಿಂದಾಗಿ ಯೋಜನೆ ಹಲವು ವರ್ಷಗಳಿಂದ ಸ್ಥಗಿತಗೊಂಡಿತ್ತು ಎಂದು ಹೇಳಿದರು.

news_1781805034_0_486.webp

ಆದರೆ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಯೋಜನೆಯ ಅಗತ್ಯತೆ ಹಾಗೂ ರೈತರ ಹಿತದೃಷ್ಟಿಯನ್ನು ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಾದರ್ಲಿ ತಿಳಿಸಿದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಯೋಜನೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಹಿಂತೆಗೆದುಕೊಳ್ಳುವ ಕುರಿತು ಸಕಾರಾತ್ಮಕ ಸ್ಪಂದನೆ ದೊರೆತಿದೆ ಎನ್ನಲಾಗಿದೆ. ಇದೇ ರೀತಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೂ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಯೋಜನೆಗೆ ಇದ್ದ ಅಡೆತಡೆಗಳು ಶೀಘ್ರದಲ್ಲೇ ನಿವಾರಣೆಯಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಬಸನಗೌಡ ಬಾದರ್ಲಿ ವಿಧಾನಪರಿಷತ್ ಸದಸ್ಯರು
ಬಸನಗೌಡ ಬಾದರ್ಲಿ ವಿಧಾನಪರಿಷತ್ ಸದಸ್ಯರು

ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಪ್ರಾರಂಭವಾಗಲಿದೆ ತುಂಗಭದ್ರಾ ನದಿಯಲ್ಲಿ ವ್ಯರ್ಥವಾಗಿ ಹರಿದು ಹೋಗುತ್ತಿರುವ ನೀರನ್ನು ಸಂರಕ್ಷಿಸಿ ರಾಜ್ಯದ ರೈತರ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಸಾಧ್ಯವಾಗಲಿದೆ. ಈ ಯೋಜನೆ ಉತ್ತರ ಕರ್ನಾಟಕ ಭಾಗದ ರೈತರ ಬಹುದಿನಗಳ ಕನಸಾಗಿದ್ದು, ನೀರಾವರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಎರಡು ವರ್ಷದ ಅವಧಿಯೊಳಗೆ ಯೋಜನೆಗೆ ಅಂತಿಮ ರೂಪ ನೀಡಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಬಸನಗೌಡ ಬಾದರ್ಲಿ ತಿಳಿಸಿದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ