ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು

ಲೋಕಾಯುಕ್ತ ದಾಳಿ ವೇಳೆ ಅಕ್ರಮ ಸ್ಕ್ಯಾನಿಂಗ್ ಬಯಲು 

Advertisement

news_1777520334_0_925.webp

Advertisement

ಏಪ್ರಿಲ್ 29: BB NEWS KANNADA 

ಮಂಡ್ಯ.ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತರ ವಿರುದ್ಧ ಒಟ್ಟು 12 ಪ್ರಕರಣಗಳು ದಾಖಲಾಗಿದ್ದು, ಮತ್ತೊಬ್ಬ ಮಹಿಳಾ ವೈದ್ಯೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳ ಸಂಯುಕ್ತ ಕಾರ್ಯಾಚರಣೆಯಲ್ಲಿ ಓರ್ವ ಮಹಿಳಾ ವೈದ್ಯೆ ಸೇರಿದಂತೆ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಬಂಧಿತರನ್ನು ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ. ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ. ವೈ.ಆರ್. ಹರ್ಷಿತ್ ಹಾಗೂ ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ. ಹರೀಶ್ ಎಂದು ಗುರುತಿಸಲಾಗಿದೆ. ಡಾ. ಪ್ರಿಯಾಂಕಾ ಎಂಬ ಮತ್ತೊಬ್ಬ ಮಹಿಳಾ ವೈದ್ಯೆ ನಾಪತ್ತೆಯಾಗಿದ್ದು, ಆಕೆಯಿಗಾಗಿ ಶೋಧ ಮುಂದುವರಿದಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಸೇರಿದ ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಬಳಸಿದ ಆರೋಪವೂ ಇವರ ಮೇಲೆ ಕೇಳಿಬಂದಿದೆ. ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಉಪ ಲೋಕಾಯುಕ್ತ ಬಿ. ವೀರಪ್ಪ ತನಿಖೆಗೆ ಆದೇಶಿಸಿದ್ದು, ಅದರ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಏಪ್ರಿಲ್ 17ರಂದು ಏಕಕಾಲದಲ್ಲಿ ದಾಳಿ ನಡೆಸಿದ್ದರು.

ದಾಳಿ ವೇಳೆ ಕೆ.ಆರ್.ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಕೇಂದ್ರಗಳಲ್ಲಿ ಗಂಭೀರ ಅಕ್ರಮಗಳು ಬೆಳಕಿಗೆ ಬಂದಿವೆ. ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ 7 ಪ್ರಕರಣಗಳಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಸ್ಕ್ಯಾನಿಂಗ್ ಮಾಡಿರುವುದು ಪತ್ತೆಯಾಗಿದೆ. ಇನ್ನೂ 64 ಪ್ರಕರಣಗಳಲ್ಲಿ 18ರಿಂದ 20 ವರ್ಷ ವಯಸ್ಸಿನ ಮಹಿಳೆಯರ ವಯಸ್ಸಿನ ದೃಢೀಕರಣ ದಾಖಲೆ ಪಡೆಯದೇ ಸ್ಕ್ಯಾನಿಂಗ್ ನಡೆಸಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಇದಲ್ಲದೆ, ಸ್ಕ್ಯಾನಿಂಗ್ ನಡೆಸುವ ವೇಳೆ ಮಹಿಳೆಯರ ವಯಸ್ಸಿನ ದಾಖಲಾತಿಗಳನ್ನು ಪರಿಶೀಲಿಸದೇ ನಿರ್ಲಕ್ಷ್ಯ ವಹಿಸಿರುವುದೂ ದೃಢಪಟ್ಟಿದೆ. ಈ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿದ್ದು, ಅದರ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಬಂಧಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 65(1), 64(2)(ಎಂ), 376(2)(ಎನ್) ಹಾಗೂ ಫೋಕ್ಸೋ ಕಾಯ್ದೆ 2017ರ ಕಲಂ 6 ಮತ್ತು 21ರಡಿ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಅಕ್ರಮ ಭ್ರೂಣಲಿಂಗ ಪತ್ತೆ ಮತ್ತು ಕಾನೂನು ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಸಾರ್ವಜನಿಕರ ಆಗ್ರಹ ಮತ್ತಷ್ಟು ಹೆಚ್ಚಾಗಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್