ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತುಂಗಭದ್ರಾ ಕ್ರಸ್ಟ್ ಗೇಟ್ ಉದ್ಘಾಟನೆಗೆ ಚಂದ್ರಬಾಬು ನಾಯ್ಡುಗೆ ಆಹ್ವಾನ

ಜೂನ್ 25ರ ಸಮಾರಂಭಕ್ಕೆ ಆಗಮಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಒಪ್ಪಿಗೆ

Advertisement

ಅಮರಾವತಿ/ಸಿಂಧನೂರು, ಜೂನ್ 22: ಮುನಿರಾಬಾದ್‌ನಲ್ಲಿ ಜೂನ್ 25ರಂದು ನಡೆಯಲಿರುವ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಕರ್ನಾಟಕದ ಶಾಸಕರ ನಿಯೋಗವು ಭೇಟಿ ಮಾಡಿ ಅಧಿಕೃತವಾಗಿ ಆಹ್ವಾನಿಸಿತು.

Advertisement

news_1781965592.webp

ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಶಾಸಕರಾದ ಎನ್.ಎಸ್. ಬೋಸರಾಜು, ಬಸವರಾಜ ರಾಯರೆಡ್ಡಿ ಹಾಗೂ ಬಸನಗೌಡ ಬಾದರ್ಲಿ ಅವರ ನೇತೃತ್ವದ ನಿಯೋಗವು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಆಹ್ವಾನ ಪತ್ರ ನೀಡಿತು.

news_1780037113_0_501.webp

ಈ ಸಂದರ್ಭದಲ್ಲಿ ತುಂಗಭದ್ರಾ ಅಣೆಕಟ್ಟಿನ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅಳವಡಿಸಲಾಗಿರುವ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದ ಮಹತ್ವವನ್ನು ನಿಯೋಗವು ವಿವರಿಸಿತು. ಆಹ್ವಾನ ಸ್ವೀಕರಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜೂನ್ 25ರಂದು ಮುನಿರಾಬಾದ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿ ಒಪ್ಪಿಗೆ ನೀಡಿದರು. ತುಂಗಭದ್ರಾ ಯೋಜನೆಯ ಪ್ರಮುಖ ಫಲಾನುಭವಿಗಳಲ್ಲಿ ಆಂಧ್ರಪ್ರದೇಶವೂ ಒಂದಾಗಿರುವ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರ ಉಪಸ್ಥಿತಿಯು ಸಮಾರಂಭಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ನಿಯೋಗದ ಸದಸ್ಯರು ತಿಳಿಸಿದರು.

news_1781778738_0_399.webp

ಈ ವೇಳೆ ಆಂಧ್ರಪ್ರದೇಶ ಸರ್ಕಾರದ ಸಚಿವರಾದ ರಾಮ್ ಮೋಹನ್ ನಾಯ್ಡು ಹಾಗೂ ಪಿ. ಕೇಶವ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ಜೂನ್ 25ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ವಿವಿಧ ರಾಜ್ಯಗಳ ಗಣ್ಯರು ಭಾಗವಹಿಸುವ ನಿರೀಕ್ಷೆ ಇದ್ದು, ತುಂಗಭದ್ರಾ ಜಲಾಶಯದ ನೂತನ ಗೇಟ್‌ಗಳ ಉದ್ಘಾಟನೆ ಐತಿಹಾಸಿಕ ಕ್ಷಣವಾಗಲಿದೆ ಎಂದು ಮೂಲಗಳು ತಿಳಿಸಿವೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜು ಜುಲೈ 02ಕ್ಕೆತುಂಗಭದ್ರಾ ಕ್ರಸ್ಟ್ ಗೇಟ್ ಉದ್ಘಾಟನೆಗೆ ಚಂದ್ರಬಾಬು ನಾಯ್ಡುಗೆ ಆಹ್ವಾನಮಕ್ಕಳ ಆರೋಗ್ಯ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಖಾಲಿ ಪೇಪರ್ ಸಹಿ ವಿವಾದ: ಪಿಎಸ್‌ಐ ವಿರುದ್ಧ ವಕೀಲರ ಆಕ್ರೋಶಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!