ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಲಂಚ ಪಡೆದ ಪಿ.ಡಿ.ಓಗೆ ಜೈಲು ಶಿಕ್ಷೆ: 7 ವರ್ಷಗಳ ಕಾರಾವಾಸ, ₹75 ಸಾವಿರ ದಂಡ

Advertisement

ಲಿಂಗಸಗೂರು/ರಾಯಚೂರು:

Advertisement

ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ಒಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಲಿಂಗಸಗೂರು ತಾಲೂಕಿನ ಗೊರೇಬಾಳ ತಾಂಡಾದ ಚೇತನ ತಂದೆ ಲೋಕಪ್ಪ ಅವರು ದನದ ಶೆಡ್ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನ ಮಂಜೂರಾಗಿದ್ದರೂ, ಆ ಹಣ ಬಿಡುಗಡೆ ಮಾಡಲು ಗೋರೆಬಾಳ ಗ್ರಾಮ ಪಂಚಾಯತಿಯ ಪಿ.ಡಿ.ಓ ಮಹ್ಮದ ಖಾಜಾ ಅವರು ₹15,000 ಲಂಚ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಸಂಬಂಧ ಚೇತನ ಅವರು ದಿನಾಂಕ 22-11-2017 ರಂದು ಅಂದಿನ ಎ.ಸಿ.ಬಿ. ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರು ಆಧಾರವಾಗಿ ಪೊಲೀಸರು ಪ್ರಕರಣ ದಾಖಲಿಸಿ, ಅದೇ ದಿನ ಟ್ರಾಪ್ ಕಾರ್ಯಾಚರಣೆ ನಡೆಸಿ, ₹15,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದರು.

ನಂತರ ತನಿಖೆ ಪೂರ್ಣಗೊಂಡು, ಪೋಲಿಸ್ ಇನ್ಸಪೆಕ್ಟರ್ ಶ್ರೀಧರ ದೊಡ್ಡಿ ಅವರು ದೋಷಾರೋಪಣೆ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ರಾಯಚೂರು ಜಿಲ್ಲೆಯ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಲಿಂಗಸಗೂರು ಪೀಠದ ಮಾನ್ಯ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ದಿನಾಂಕ 10-04-2026 ರಂದು ತೀರ್ಪು ನೀಡಿದರು.

ತೀರ್ಪಿನಂತೆ, ಆರೋಪಿಗೆ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಕಲಂ 7ರಡಿ 3 ವರ್ಷ ಜೈಲು ಶಿಕ್ಷೆ ಮತ್ತು ₹25,000 ದಂಡ, ಹಾಗೂ ಕಲಂ 13(1)(ಡಿ) ಸಹಿತ 13(2) ಅಡಿಯಲ್ಲಿ 4 ವರ್ಷ ಜೈಲು ಶಿಕ್ಷೆ ಮತ್ತು ₹50,000 ದಂಡ ವಿಧಿಸಲಾಗಿದೆ.

ಇದೇ ವೇಳೆ, ಪ್ರಕರಣದ ಪಿರ್ಯಾದಿದಾರ ಚೇತನ ಅವರು ನ್ಯಾಯಾಲಯದಲ್ಲಿ ಪ್ರತಿಕೂಲ ಸಾಕ್ಷಿ ನೀಡಿರುವುದು ಗಮನಕ್ಕೆ ಬಂದಿದೆ. ಇದರಿಂದ ಸರಕಾರಿ ಅಭಿಯೋಜಕರು ಕ್ರಮ ಕೈಗೊಳ್ಳುವಂತೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಅದನ್ನು ಪರಿಗಣಿಸಿ, ಪಿರ್ಯಾದಿದಾರನ ವಿರುದ್ಧ ಸುಳ್ಳು ಸಾಕ್ಷಿ ನೀಡಿದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.

ಈ ಪ್ರಕರಣದಲ್ಲಿ ಲೋಕಾಯುಕ್ತ ಪರವಾಗಿ ಸರಕಾರಿ ಅಭಿಯೋಜಕರಾದ ಕೆ. ಬಸವರಾಜ ಹೊಸಳ್ಳಿ (ಕೆ) ಅವರು ವಾದ ಮಂಡಿಸಿದ್ದು, ಅಯ್ಯಪ್ಪ ಪೊಲೀಸ್ ಪೇದೆ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಹಕರಿಸಿದರು.

ಈ ಕುರಿತು ಮಾಹಿತಿ ನೀಡಿರುವ ಸರಕಾರಿ ಅಭಿಯೋಜಕರಾದ ಕೆ. ಬಸವರಾಜ ಹೊಸಳ್ಳಿ ಅವರು, ನ್ಯಾಯಾಲಯದ ತೀರ್ಪು ಭ್ರಷ್ಟಾಚಾರ ವಿರುದ್ಧ ಹೋರಾಟಕ್ಕೆ ಮತ್ತಷ್ಟು ಬಲ ನೀಡಲಿದೆ ಎಂದು ತಿಳಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ