ಸಿಂಧನೂರು: ಸಿಂಧನೂರು ಮೂಲದ ಶ್ರೀ ಕಲೀಲ್ ಅವರಿಗೆ ಬಳ್ಳಾರಿ–ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ಕಲೀಲ್ ಅವರು ಬಳ್ಳಾರಿ ಜಿಲ್ಲೆಯ ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಹಾಗೂ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಬಳ್ಳಾರಿ–ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ನಿಕಾಯದ ಪ್ರಾಧ್ಯಾಪಕರಾದ ಸಿಎಮ್ಎ ಡಾ. ಜೀಲಾನ್ ಬಾಷಾ.ವಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.
ಭಾರತದ ಮಾಹಿತಿ ತಂತ್ರಜ್ಞಾನ (ಐಟಿ) ಉದ್ಯಮವನ್ನು ವಿಶೇಷವಾಗಿ ಪರಿಗಣಿಸಿ ಷೇರು ಮಾರುಕಟ್ಟೆಯ ಡೆರಿವೇಟಿವ್ ಉಪಕರಣಗಳ ಕುರಿತು “A Study on Stock Derivative Instruments with Special Reference to IT Industry in India” ಎಂಬ ವಿಷಯದ ಮೇಲೆ ಮಹಾಪ್ರಬಂಧವನ್ನು ಮಂಡಿಸಿದ್ದರು. ಈ ಸಂಶೋಧನಾ ಮಹಾಪ್ರಬಂಧವನ್ನು ಪರಿಗಣಿಸಿದ ವಿಶ್ವವಿದ್ಯಾಲಯವು ಅವರಿಗೆ ಪಿಎಚ್.ಡಿ ಪದವಿಯನ್ನು ಪ್ರಕಟಿಸಿದೆ.


ಶೈಕ್ಷಣಿಕ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಕಲೀಲ್ ಅವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಅವರಿಗೆ ಶಿಕ್ಷಣ ನೀಡಿದ ಗುರುಗಳು, ವಿದ್ಯಾರ್ಥಿಗಳು, ಕುಟುಂಬಸ್ಥರು ಹಾಗೂ ಸ್ನೇಹಿತರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.












