ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿ

Advertisement

ಸಿಂಧನೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC)ದ ಸಹಯೋಗದಲ್ಲಿ ಬಿ.ಎ., ಬಿ.ಕಾಂ. ಹಾಗೂ ಬಿ.ಸಿ.ಎ. ಪ್ರಥಮ ವರ್ಷದ ನವೀನ ವಿದ್ಯಾರ್ಥಿನಿಯರಿಗಾಗಿ ‘ನಾವು ನಿಮ್ಮೊಂದಿಗೆ’ ಎಂಬ ಶೀರ್ಷಿಕೆಯಡಿ ಓರಿಯಂಟೇಷನ್ (ಪರಿಚಯಾತ್ಮಕ) ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥ ಮಹಾಂತಪ್ಪ ಕೊಡಗಲಿ, ವಿದ್ಯಾರ್ಥಿನಿಯರು ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಹೆದರದೆ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಕರೆ ನೀಡಿದರು.

Advertisement

news_1780037113_0_501.webp

“ವಿದ್ಯಾರ್ಥಿಗಳು ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ವೈಯಕ್ತಿಕ ಬೆಳವಣಿಗೆಗೂ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾವಂತರಾಗುವ ಮೊದಲು ನಾವೆಲ್ಲರೂ ಉತ್ತಮ ಮನುಷ್ಯರಾಗುವುದು ಅತ್ಯಗತ್ಯ. ಬದುಕಿನಲ್ಲಿ ಎದುರಾಗುವ ಕಗ್ಗತ್ತಲ ರಾತ್ರಿಯಂತಹ ಸವಾಲುಗಳನ್ನು ಎದುರಿಸುವ ಧೈರ್ಯ ಬೆಳೆಸಿಕೊಳ್ಳಬೇಕು. ಸಮಾಜವನ್ನು ಬೆಸೆಯುವ ಸೇತುವೆಯಾಗಬೇಕೇ ಹೊರತು ಪ್ರತ್ಯೇಕಿಸುವ ಗೋಡೆಯಾಗಬಾರದು. ಬೆಳಕು ನೀಡುವ ದೀಪ ಹಚ್ಚಬೇಕೇ ಹೊರತು ಬೆಂಕಿ ಹಚ್ಚಬಾರದು,” ಎಂದು ಅವರು ಮಾರ್ಮಿಕವಾಗಿ ಹೇಳಿದರು. ವಿದ್ಯಾರ್ಥಿನಿಯರಲ್ಲಿ ಯಾವುದೇ ಕಾರಣಕ್ಕೂ ಕೀಳರಿಮೆ ಇರಬಾರದು. ತಮ್ಮಲ್ಲಿರುವ ಸಣ್ಣಪುಟ್ಟ ಕೊರತೆಗಳಿಗೆ ಮನನೊಂದು ಹಿಂಜರಿಯದೆ, ಆತ್ಮವಿಶ್ವಾಸದಿಂದ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಮಾನವೀಯತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ರೂಢಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

news_1787673464_0_789.webp

ಕಾಲೇಜು ಭವಿಷ್ಯ ರೂಪಿಸುವ ವೇದಿಕೆ

ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರು ಹಾಗೂ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಮುದುಕಪ್ಪ, ಹೊಸದಾಗಿ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಕಾಲೇಜಿನ ನಿಯಮಗಳು, ಸೌಲಭ್ಯಗಳು ಹಾಗೂ ಶೈಕ್ಷಣಿಕ ವಾತಾವರಣಕ್ಕೆ ಸುಲಭವಾಗಿ ಹೊಂದಿಕೊಳ್ಳುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. “ಕಾಲೇಜು ಕೇವಲ ಪದವಿ ಪಡೆಯುವ ಸ್ಥಳವಲ್ಲ; ಅದು ಭವಿಷ್ಯ ಕಟ್ಟಿಕೊಳ್ಳುವ ವೇದಿಕೆ. ವಿದ್ಯಾರ್ಥಿನಿಯರ ಶೈಕ್ಷಣಿಕ ಹಾಗೂ ವೈಯಕ್ತಿಕ ಬೆಳವಣಿಗೆಗೆ ಕಾಲೇಜಿನ ಸಿಬ್ಬಂದಿ ಸದಾ ನಿಮ್ಮೊಂದಿಗಿರುತ್ತಾರೆ,” ಎಂದು ಅವರು ಭರವಸೆ ನೀಡಿದರು. ಅಲ್ಲದೆ, ವಿದ್ಯಾರ್ಥಿನಿಯರು ಪಠ್ಯ ಚಟುವಟಿಕೆಗಳ ಜತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುವಂತೆ ಸಲಹೆ ನೀಡಿದರು.

news_1783488946_0_647.webp

ವಿದ್ಯಾರ್ಥಿನಿಯರಿಗೆ ವಿವಿಧ ವಿಭಾಗಗಳ ಮಾಹಿತಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ಪ, ಕಾಲೇಜಿನ ಶಿಸ್ತು, ಶೈಕ್ಷಣಿಕ ವಾತಾವರಣ ಹಾಗೂ ವಿದ್ಯಾರ್ಥಿನಿಯರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಹೊಸ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿ, ಕಾಲೇಜಿನ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಕರೆ ನೀಡಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ತಮ್ಮ ತಮ್ಮ ವಿಷಯಗಳ ಪಠ್ಯಕ್ರಮ, ಉನ್ನತ ಶಿಕ್ಷಣ ಹಾಗೂ ಭವಿಷ್ಯದ ಉದ್ಯೋಗಾವಕಾಶಗಳು ಮತ್ತು ಕಾಲೇಜಿನ ವಿವಿಧ ಕೋಶಗಳ ಚಟುವಟಿಕೆಗಳ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.

news_1781778738_0_399.webp

ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ವಿಭಾಗದ ಡಾ. ಮುದುಕಪ್ಪ ಕೆ., ಅರ್ಥಶಾಸ್ತ್ರ ವಿಭಾಗದ ಡಾ. ಮದಗಪ್ಪ, ವಾಣಿಜ್ಯಶಾಸ್ತ್ರ ವಿಭಾಗದ ಜಯಪ್ಪ, ಇತಿಹಾಸ ವಿಭಾಗದ ಮಲ್ಲೇಶ, ರಾಜ್ಯಶಾಸ್ತ್ರ ವಿಭಾಗದ ಸಿದ್ಧರಾಮೇಶ್ವರ, ಪ್ರಾಣಿಶಾಸ್ತ್ರ ವಿಭಾಗದ ಬಸವರಾಜ ಕೆ., ರಸಾಯನಶಾಸ್ತ್ರ ವಿಭಾಗದ ಡಾ. ಮಂಜುನಾಥ, ಸಸ್ಯಶಾಸ್ತ್ರ ವಿಭಾಗದ ಡಾ. ರಂಗವಿಠಲ ಪಿ., ಉರ್ದು ವಿಭಾಗದ ಎಂ.ಡಿ. ಲಿಯಾಖಿತ್, ಅತಿಥಿ ಗ್ರಂಥಪಾಲಕರಾದ ಅಶ್ವಿನಿ, ದೈಹಿಕ ಶಿಕ್ಷಣ ನಿರ್ದೇಶಕ ಗೋಪಿ, ಪತ್ರಾಂಕಿತ ವ್ಯವಸ್ಥಾಪಕ ವೀರೇಶಕುಮಾರ ಹಾಗೂ ಪ್ರಥಮ ದರ್ಜೆ ಸಹಾಯಕ ಗುರುರಾಜ ಸೇರಿದಂತೆ ವಿವಿಧ ವಿಭಾಗಗಳ ಸಿಬ್ಬಂದಿ ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಅಗತ್ಯ ಮಾಹಿತಿ ನೀಡಿದರು.

news_1784868680.webp

ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮ

ಕಾರ್ಯಕ್ರಮದ ಆರಂಭದಲ್ಲಿ ಡಾ. ಮದಗಪ್ಪ ಬಂಡಾರಿ ಆತ್ಮೀಯವಾಗಿ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಯರಿಯಪ್ಪ ಬೆಳಗುರ್ಕಿ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಗೋಪಿ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ಕೋಶಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಪ್ರಥಮ ವರ್ಷದ ನೂರಾರು ವಿದ್ಯಾರ್ಥಿನಿಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?