ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ

ರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: ಶಾಲಾ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಪರಿಶೀಲನೆ

Advertisement

ರಾಯಚೂರು: ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (DDPI) ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಡೀರ್ ದಾಳಿ ನಡೆಸಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯೊಂದರ ಆಡಳಿತಾತ್ಮಕ ಕೆಲಸಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆ ಇಟ್ಟಿರುವ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದು, ಸ್ಥಳದಲ್ಲೇ ಪರಿಶೀಲನೆ ಮತ್ತು ತನಿಖೆ ನಡೆಸಿದ್ದಾರೆ ಎನ್ನಲಾಗಿದೆ.

Advertisement

news_1779340187_0_802.webp

ದಾಳಿಯ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಚೇರಿಯ ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿಗಳನ್ನು ಪರಿಶೀಲಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುವ ಕಾರ್ಯ ಮುಂದುವರಿದಿದ್ದು, ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿರುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

news_1780037113_0_501.webp

ಘಟನೆ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ಕೆಲಕಾಲ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು. ಲೋಕಾಯುಕ್ತ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಹಾಗೂ ಇಲಾಖೆಯ ಸಿಬ್ಬಂದಿ ಗಮನ ಹರಿಸಿದ್ದರು.

news_1781778748_0_722.webp

ಆದಾಗ್ಯೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಅಥವಾ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಯಾವುದೇ ಅಧಿಕೃತ ಮಾಹಿತಿ ಇನ್ನೂ ಪ್ರಕಟವಾಗಿಲ್ಲ. ತನಿಖೆ ಪೂರ್ಣಗೊಂಡ ಬಳಿಕವೇ ಪ್ರಕರಣದ ಸಂಪೂರ್ಣ ವಿವರ ಹೊರಬರುವ ನಿರೀಕ್ಷೆಯಿದೆ.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!ಸಿಂಧನೂರಿನಲ್ಲಿ ಬಾಲ ಭಿಕ್ಷಾಟನೆ ವಿರುದ್ಧ ಕಾರ್ಯಾಚರಣೆ: ಇಬ್ಬರು ಬಾಲಕಿಯರ ರಕ್ಷಣೆಷೇರು ಮಾರುಕಟ್ಟೆ ಸಂಶೋಧನೆಗೆ ಕಲೀಲ್‌ಗೆ ಡಾಕ್ಟರೇಟ್ಹೊಟ್ಟೆಗೆ ಅನ್ನ ನೀಡುವ ರೈತನಿಗಾಗಿ ನಾವು ಧ್ವನಿ ಎತ್ತದಿದ್ದರೆ ಇನ್ನಾರಿಗಾಗಿ?ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್‌ಗೆ ಜಯಸಿಂಧನೂರು ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ ಸಿಂಧನೂರಿನಲ್ಲಿ ಅಪರೂಪದ ವೈದ್ಯಕೀಯ ಪ್ರಕರಣ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣದಂತಿರುವ ರಚನೆ ಪತ್ತೆ!ಅಚ್ಚರಿಯ ಘಟನೆ: ಕಪ್ಪು ಎಮ್ಮೆಗೆ ಬಿಳಿ ಬಣ್ಣದ ಹೋರಿ ಕರು ಜನನ!ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಮಾರ್ಫಿಂಗ್ ಆರೋಪ: ಸಿಂಧನೂರಿನಲ್ಲಿ ವ್ಯಕ್ತಿ ಬಂಧನಕೊಪ್ಪಳದಿಂದ ಸಿಂಧನೂರಿಗೆ ಜೀವ ಉಳಿಸಿದ 60 ನಿಮಿಷಗಳು!ಚಿಕ್ಕಮಗಳೂರು ಜಿಲ್ಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯನಾರಾಯಣ ಶೆಟ್ಟಿ ಭೇಟಿರಾಯಚೂರು, ಜೇವರ್ಗಿ ಕುಡಿಯುವ ನೀರಿಗೆ ಆದ್ಯತೆ ನೀಡಿ: ಸಚಿವ ಡಾ. ಅಜಯ್ ಧರ್ಮಸಿಂಗ್