ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

“ಬಡವರ ಅಕ್ಕಿ ಅಕ್ರಮ ಸಂಗ್ರಹ ಪ್ರಕರಣ – ಉಪನಿರ್ದೇಶಕ ನಜೀರ್ ಅಹ್ಮದ್ ಯಾರನ್ನು ರಕ್ಷಿಸುತ್ತಿದ್ದಾರೆ?”

Advertisement

“ಬಡವರ ಅಕ್ಕಿ ಅಕ್ರಮ ಸಂಗ್ರಹ ಪ್ರಕರಣ – ಉಪನಿರ್ದೇಶಕ ನಜೀರ್ ಅಹ್ಮದ್ ಯಾರನ್ನು ರಕ್ಷಿಸುತ್ತಿದ್ದಾರೆ?

ಸಿಂಧನೂರು:
ತಾಲೂಕಿನ ಗುಂಜಳ್ಳಿ ಕ್ಯಾಂಪ್‌ನ ನ್ಯಾಯಬೆಲೆ ಅಂಗಡಿ ಸಂಖ್ಯೆ–99ರಲ್ಲಿ ಬಡವರಿಗೆ ಸರ್ಕಾರದಿಂದ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಅಂಗಡಿ ಮಾಲೀಕರೇ ತಪ್ಪು ಒಪ್ಪಿಕೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳಿಂದ ಇನ್ನೂ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.



ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಆಹಾರ ಇಲಾಖೆಯ ಶಿರಸ್ತೆದಾರ ಆನಂದಮೋಹನ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿಯಲ್ಲಿ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಅಂಗಡಿಯಲ್ಲಿ ಒಟ್ಟು 127.50 ಕ್ವಿಂಟಾಲ್ ಪಡಿತರ ಅಕ್ಕಿ ದಾಸ್ತಾನು ಇರುವುದಾಗಿ ಪತ್ತೆಯಾಯಿತು. ಆದರೆ ಆನ್‌ಲೈನ್ ದಾಖಲಾತಿಯಲ್ಲಿ ಕೇವಲ 81.990 ಕ್ವಿಂಟಾಲ್ ಮಾತ್ರ ದಾಖಲಾಗಿದ್ದು, 45.51 ಕ್ವಿಂಟಾಲ್ ಅಕ್ಕಿ ಹೆಚ್ಚುವರಿ ಸಂಗ್ರಹಣೆ ಮಾಡಿರುವುದು ಪತ್ತೆಯಾಗಿದೆ.

ಪರಿಶೀಲನೆ ವೇಳೆ ನ್ಯಾಯಬೆಲೆ ಅಂಗಡಿ ಸಂಚಾಲಕ ರಾಜಶೇಖರ ತುರ್ವಿಹಾಳ ಸ್ವತಃ “ನಾವು ಅಕ್ರಮವಾಗಿ ಅಕ್ಕಿ ಶೇಖರಣೆ ಮಾಡಿರುವುದು ತಪ್ಪಾಗಿದೆ” ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಅಗತ್ಯವಸ್ತುಗಳ ಕಾಯ್ದೆ ಉಲ್ಲಂಘನೆ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆಹಾರ ಇಲಾಖೆಯ ಶಿರಸ್ತೆದಾರರು ತಮ್ಮ ಪರಿಶೀಲನಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಪರಿಶೀಲನಾ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ತಹಸೀಲ್ದಾರರು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಯ ರಾಯಚೂರು ಉಪನಿರ್ದೇಶಕರಿಗೆ ವರದಿ ಸಲ್ಲಿಸಿರುವುದಾಗಿ ಆಹಾರ ಇಲಾಖೆಯ ಶಿರಸ್ತೆದಾರರು ತಿಳಿಸಿದ್ದಾರೆ.

Advertisement

 



 

ಕ್ರಮ ಯಾಕೆ ಆಗಿಲ್ಲ?

ಆದರೆ ಘಟನೆ ನಡೆದಿದ್ದು 2–3 ದಿನಗಳು ಕಳೆದರೂ ರಾಯಚೂರು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ನಜೀರ್ ಅಹ್ಮದ್ ಅವರಿಂದ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ಕುರಿತು ಮಾಹಿತಿ ಪಡೆಯಲು ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. ಮೆಸೇಜ್ ಕಳುಹಿಸಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ. ಇದರಿಂದಾಗಿ ಸಾರ್ವಜನಿಕರು ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

“ಬಡವರಿಗಾಗಿ ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಪ್ರಕರಣದಲ್ಲೂ ಕ್ರಮ ಕೈಗೊಳ್ಳದಿರುವುದು ಯಾಕೆ? ಉಪನಿರ್ದೇಶಕ ನಜೀರ್ ಅಹ್ಮದ್ ಯಾರನ್ನು ರಕ್ಷಿಸುತ್ತಿದ್ದಾರೆ?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.

ಸಣ್ಣ ತಪ್ಪಿಗೆ ಅಮಾನತು – ಇಲ್ಲಿ ಮೌನ?

ಸಾಮಾನ್ಯವಾಗಿ ಸಣ್ಣಪುಟ್ಟ ತಪ್ಪುಗಳಿಗೂ ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡುವ ಆಹಾರ ಇಲಾಖೆ, 45 ಕ್ವಿಂಟಾಲ್‌ಗೂ ಅಧಿಕ ಅಕ್ರಮ ಅಕ್ಕಿ ಪತ್ತೆಯಾದ ಪ್ರಕರಣದಲ್ಲೂ ಮೌನ ವಹಿಸಿರುವುದು ಜನರಲ್ಲಿ ಅಸಮಾಧಾನ ಮೂಡಿಸಿದೆ.

“ಇತರೆ ನ್ಯಾಯಬೆಲೆ ಅಂಗಡಿಗಳ ಮಾಲೀಕರು ಸಣ್ಣ ತಪ್ಪು ಮಾಡಿದರೂ ತಕ್ಷಣ ಕ್ರಮ ಕೈಗೊಳ್ಳುವ ಅಧಿಕಾರಿಗಳು, ಈ ಅಂಗಡಿಯ ಮೇಲೆ ಮಾತ್ರ ಯಾಕೆ ಮೌನ ವಹಿಸಿದ್ದಾರೆ?” ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಇದೇನು ಮೊದಲ ಘಟನೆ ಅಲ್ಲ

ತಾಲೂಕಿನಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ ಮತ್ತು ಅಕ್ರಮ ಸಂಗ್ರಹಣೆ ಪ್ರಕರಣಗಳು ಪದೇಪದೇ ಬೆಳಕಿಗೆ ಬರುತ್ತಿವೆ. ವಾರಕ್ಕೆ ಒಂದು–ಎರಡು ದೂರುಗಳು ಬರುತ್ತಲೇ ಇರುತ್ತವೆ. ಹಲವು ಬಾರಿ ಈ ಕುರಿತು ಸುದ್ದಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತವೆ. ಆದರೂ ಅಕ್ರಮ ನಡೆಸುವವರ ಮೇಲೆ ಹಾಗೂ ಇದರಲ್ಲಿ ಭಾಗಿಯಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿರುವುದರಿಂದ ಪಿಡಿಎಸ್ ವ್ಯವಸ್ಥೆಯ ಮೇಲೆಯೇ ಜನರಲ್ಲಿ ನಂಬಿಕೆ ಕುಸಿಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಸಾರ್ವಜನಿಕರ ಆಗ್ರಹ

  1. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೆಳಗಿನ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ:

 

  1. ನ್ಯಾಯಬೆಲೆ ಅಂಗಡಿ ಸಂಚಾಲಕ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಬೇಕು

 

  1. ಅಂಗಡಿಯನ್ನು ಅಮಾನತು ಮಾಡಿ ಸಂಪೂರ್ಣ ತನಿಖೆ ನಡೆಸಬೇಕು

 

  1. ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು



“ಬಡವರ ಹಕ್ಕಿನ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಇಲಾಖೆ ಸ್ವತಃ ಈ ಅಕ್ರಮಕ್ಕೆ ಕೈಜೋಡಿಸಿದೆ ಎನ್ನುವ ಅನುಮಾನ ತಪ್ಪದು” ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್