ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜೋಳ ಖರೀದಿ ಕೇಂದ್ರಗಳಲ್ಲಿ ಅಕ್ರಮಗಳ ಆರ್ಭಟ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

Advertisement

 ಜೋಳ ಖರೀದಿ ಕೇಂದ್ರಗಳಲ್ಲಿ ಅಕ್ರಮಗಳ ಆರ್ಭಟ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

Advertisement

 

📍ಸಿಂಧನೂರು | ಮಾರ್ಚ್ 31

2025-26ನೇ ಸಾಲಿನ ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರಾಗಿ, ಭತ್ತ ಹಾಗೂ ಬಿಳಿ ಜೋಳ ಖರೀದಿ ಕೇಂದ್ರಗಳು ಆರಂಭಗೊಂಡಿದ್ದರೂ, ಜಿಲ್ಲೆಯ ಜೋಳ ಖರೀದಿ ಕೇಂದ್ರಗಳಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ರೈತರಿಂದ ಅಧಿಕೃತ ದರಕ್ಕಿಂತ ಹೆಚ್ಚುವರಿ ಹಣವನ್ನು “ಅಮಾಲಿ ವೆಚ್ಚ” ಎಂಬ ಹೆಸರಿನಲ್ಲಿ ವಸೂಲಿ ಮಾಡಲಾಗುತ್ತಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಹಲವು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದು, ರೈತರು ಹಾಗೂ ವಿವಿಧ ಸಂಘಟನೆಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದಿದ್ದಾರೆ. ಆದರೂ ಕೂಡ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿವೆ ಎಂಬ ಟೀಕೆ ವ್ಯಕ್ತವಾಗುತ್ತಿದೆ.

 

🟡 ಅರ್ಹತೆ ಇಲ್ಲದ ಗುಣಮಟ್ಟ ಪರಿವೀಕ್ಷಕರು!

ಜಿಲ್ಲೆಯ ಎಲ್ಲಾ ಖರೀದಿ ಕೇಂದ್ರಗಳಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಗುಣಮಟ್ಟ ಪರಿವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಕೆಲವೆಡೆ ಅರ್ಹತೆ ಇಲ್ಲದ ಹಾಗೂ ಪರಿಶೀಲನೆ ಮಾಡಲು ತಿಳಿಯದವರನ್ನೇ ಕೆಲಸಕ್ಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಭೇಟಿ ನೀಡಿದಾಗ ಈ ಆರೋಪಗಳು ಸತ್ಯವೆಂದು ಬೆಳಕಿಗೆ ಬಂದಿದೆ.

ಸಾರ್ವಜನಿಕರು ಪ್ರಶ್ನಿಸಿದಾಗ ಕೆಲವರು “ನಮಗೆ ಪೂರ್ಣ ತಿಳುವಳಿಕೆ ಇಲ್ಲ, ನಾವು ಹೇಳಿದಂತೆ ಮಾಡುತ್ತಿದ್ದೇವೆ. ದಯವಿಟ್ಟು ವಿಷಯವನ್ನು ದೊಡ್ಡದಾಗಿಸಬೇಡಿ” ಎಂದು ಹೇಳಿಕೊಂಡಿರುವುದು ಅಕ್ರಮಗಳ ತೀವ್ರತೆಯನ್ನು ತೋರಿಸುತ್ತದೆ.

 

🟡 ಯುವಕರನ್ನು ಬಳಸಿಕೊಂಡು ದಂಧೆ?

ಅಕ್ರಮವಾಗಿ ದಂಧೆ ನಡೆಸುವವರು ಅನುಭವವಿಲ್ಲದ ಯುವಕರನ್ನು ಗುಣಮಟ್ಟ ಪರಿಶೀಲನೆಗಾಗಿ ಬಳಸಿಕೊಂಡು, ಕೇವಲ OTP ನೀಡುವ ಮೂಲಕ ದಾಖಲೆ ಪಾಸ್ ಮಾಡಿಸುವ ವ್ಯವಸ್ಥೆ ನಡೆಯುತ್ತಿದೆ ಎಂಬ ಆತಂಕಕಾರಿ ಮಾಹಿತಿ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

 

ಸಿಬ್ಬಂದಿ ವರ್ತನೆಗೆ ಅನುಮಾನಗಳ ನೆರಳು!

ಈ ಸಂಬಂಧ ಗುಣಮಟ್ಟ ಪರಿವೀಕ್ಷಕರ ಸಂಯೋಜಕರನ್ನು ಸಂಪರ್ಕಿಸಿದಾಗ, ಆರಂಭದಲ್ಲಿ “ನಮ್ಮ ಗಮನಕ್ಕೆ ಬಂದಿಲ್ಲ, ಪರಿಶೀಲನೆ ನಡೆಸುತ್ತೇವೆ” ಎಂದು ಪ್ರತಿಕ್ರಿಯೆ ನೀಡಿದರೂ, ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಕರೆ ಮಾಡಿ “ಸುದ್ದಿ ಮಾಡಬೇಡಿ” ಎಂದು ಮನವಿ ಮಾಡಿದ ಘಟನೆ ಸಂಶಯಕ್ಕೆ ಕಾರಣವಾಗಿದೆ.

ಇನ್ನೊಂದೆಡೆ, ಖಾಸಗಿ ಏಜೆನ್ಸಿಯ ದಾಖಲೆ ಪರಿಶೀಲನಾ ಸಿಬ್ಬಂದಿ ಮಾಧ್ಯಮದವರೊಂದಿಗೆ ಅಹಂಕಾರದಿಂದ ಮಾತನಾಡಿ, “ನೀವು ಏನು ಮಾಡುತ್ತೀರೋ ಮಾಡಿಕೊಳ್ಳಿ” ಎಂದು ಪ್ರತಿಕ್ರಿಯೆ ನೀಡಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಈ ರೀತಿಯ ವಿರೋಧಾಭಾಸದ ಹೇಳಿಕೆಗಳು ಮತ್ತು ಅಸಹಕಾರದ ಧೋರಣೆ ಕಂಡುಬಂದ ಹಿನ್ನೆಲೆಯಲ್ಲಿ, ಖರೀದಿ ಕೇಂದ್ರಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಕೆಲವು ಸಿಬ್ಬಂದಿ ಪರೋಕ್ಷವಾಗಿ ಸಹಕಾರ ನೀಡುತ್ತಿರುವ ಸಾಧ್ಯತೆ ಇದೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ

 

🟥 ತಕ್ಷಣ ಕ್ರಮಕ್ಕೆ ಒತ್ತಾಯ

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರೈತರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾ-ತಾಲೂಕು ಟಾಸ್ಕ್ ಫೋರ್ಸ್ ಸಮಿತಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್