ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಸತಿ ನಿಲಯದ ಮಕ್ಕಳಿಗೆ ರುಚಿಕರ, ಪೌಷ್ಟಿಕ ಆಹಾರ ನೀಡಿ: ಜಿ.ಪಂ. ಸಿಇಒ ಈಶ್ವರ ಕುಮಾರ್

ಆಹಾರ ತಯಾರಿಕೆ ಮತ್ತು ಸ್ವಚ್ಛತೆ ಕಾಪಾಡುವ ಸಿಬ್ಬಂದಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರ

Advertisement

ರಾಯಚೂರು:ವಸತಿ ನಿಲಯಗಳಲ್ಲಿ ಅಡುಗೆ ಕೋಣೆ ಹಾಗೂ ಆಹಾರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ, ಪೌಷ್ಟಿಕಾಂಶಯುಕ್ತ ಹಾಗೂ ರುಚಿಕರವಾದ ಆಹಾರ ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಹೇಳಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಸತಿ ನಿಲಯ ಮತ್ತು ವಸತಿ ಶಾಲೆಗಳ ಖಾಯಂ ಹಾಗೂ ಹೊರಗುತ್ತಿಗೆ ಡಿ-ಗ್ರೂಪ್ ಸಿಬ್ಬಂದಿಗೆ ಆಯೋಜಿಸಿದ್ದ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

Advertisement

https://youtube.com/shorts/qUCDbxZ0AKw?si=bTmocExDvsBcLwiI

ಸರ್ಕಾರ ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ದಿನಸಿ, ಸೋಪು, ಟೂತ್‌ಪೇಸ್ಟ್, ಅಡುಗೆ ಅನಿಲ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಸಿಬ್ಬಂದಿ ಶುಚಿ ಮತ್ತು ರುಚಿಯಾದ ಆಹಾರ ತಯಾರಿಸುವುದರ ಜೊತೆಗೆ ಮಕ್ಕಳೊಂದಿಗೆ ಪೋಷಕರಂತೆ ಪ್ರೀತಿ, ಕಾಳಜಿ ಹಾಗೂ ಆತ್ಮೀಯತೆಯಿಂದ ನಡೆದುಕೊಳ್ಳಬೇಕು. ಅವರ ಕಷ್ಟ-ಸುಖಗಳಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಶಿಕ್ಷಣದ ಜೊತೆಗೆ ಮಕ್ಕಳ ಆರೋಗ್ಯದ ಮೇಲೂ ವಿಶೇಷ ಗಮನ ಹರಿಸಲಾಗುತ್ತಿದೆ. ಸರ್ಕಾರಿ ಶಾಲೆಗಳು, ಅಂಗನವಾಡಿಗಳು ಹಾಗೂ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಆರೋಗ್ಯ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಬಿಸಿಯೂಟ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

news_1792131579_3_808.webp

ಜಿಲ್ಲೆಯ ಕೆಲವು ವಸತಿ ಶಾಲೆ ಮತ್ತು ಹಾಸ್ಟೆಲ್‌ಗಳಲ್ಲಿ ಆಹಾರ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ದೂರುಗಳು ಬಂದಿರುವುದು ಗಮನಕ್ಕೆ ಬಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು, ಶಾಲಾ ಮುಖ್ಯಸ್ಥರು ಮತ್ತು ವಾರ್ಡನ್‌ಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಸುರಕ್ಷಿತ ಆಹಾರ ಮತ್ತು ಸ್ವಚ್ಛ ಪರಿಸರ ಒದಗಿಸುವಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಮಕ್ಕಳ ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಮಾತನಾಡಿ, ಅಡುಗೆ ಸಿಬ್ಬಂದಿ ಮಕ್ಕಳಿಗೆ ಪ್ರೀತಿಯಿಂದ ಊಟ ಬಡಿಸುವುದರ ಜೊತೆಗೆ ಅವರೊಂದಿಗೆ ಆತ್ಮೀಯವಾಗಿ ಬೆರೆತು ಮಾತನಾಡಬೇಕು. ಮನೆಯಿಂದ ದೂರವಿರುವ ಮಕ್ಕಳು ಕೆಲವೊಮ್ಮೆ ಮಾನಸಿಕ ಒತ್ತಡಕ್ಕೆ ಒಳಗಾಗಬಹುದು. ಸಿಬ್ಬಂದಿ ಅವರೊಂದಿಗೆ ಸಮಯ ಕಳೆದು, ಭಾವನೆಗಳಿಗೆ ಸ್ಪಂದಿಸುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಮಾನಸಿಕ ಒತ್ತಡ ಕಡಿಮೆ ಮಾಡಲು ನೆರವಾಗುತ್ತದೆ ಎಂದರು.

news_1792131577_0_725.webp

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರ ಮಾತನಾಡಿ, ವಸತಿ ನಿಲಯಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳು ಹಾಗೂ ಪೌಷ್ಟಿಕ ಆಹಾರ ಒದಗಿಸುವುದು ಎಲ್ಲರ ಪ್ರಾಥಮಿಕ ಜವಾಬ್ದಾರಿಯಾಗಿದೆ. ವಾರ್ಡನ್‌ಗಳು, ಮುಖ್ಯ ಅಡುಗೆಯವರು, ಅಡುಗೆಯವರು, ಸಹಾಯಕರು ಮತ್ತು ಸ್ವಚ್ಛತಾ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ನಿಲಯಗಳ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ವಸತಿ ನಿಲಯಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಎಲ್ಲ ಮಕ್ಕಳಿಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಹಿಂದಿನ ಕಾಲದಲ್ಲಿ ಸೌಲಭ್ಯಗಳ ಕೊರತೆಯಿದ್ದರೂ ತಾಯಂದಿರು ಮಕ್ಕಳಿಗೆ ಪ್ರೀತಿ ಮತ್ತು ಕಾಳಜಿಯಿಂದ ಅಡುಗೆ ಮಾಡಿ ಉಣಿಸುತ್ತಿದ್ದರು. ಅದೇ ರೀತಿಯ ಕಾಳಜಿಯನ್ನು ಇಂದಿನ ಸಿಬ್ಬಂದಿಯೂ ಮಕ್ಕಳ ಮೇಲೆ ತೋರಬೇಕು. ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಯಾವುದೇ ಲೋಪಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು.

news_1792131578_1_813.webp

ಕಾರ್ಯಕ್ರಮದ ಆರಂಭದಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು. ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರವಿ, ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರು, ನಿಲಯ ಪಾಲಕರು, ಅಡುಗೆ ಸಿಬ್ಬಂದಿ ಹಾಗೂ ಸಹಾಯಕರು ಉಪಸ್ಥಿತರಿದ್ದರು.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ವಸತಿ ನಿಲಯದ ಮಕ್ಕಳಿಗೆ ರುಚಿಕರ, ಪೌಷ್ಟಿಕ ಆಹಾರ ನೀಡಿ: ಜಿ.ಪಂ. ಸಿಇಒ ಈಶ್ವರ ಕುಮಾರ್ಚರಂಡಿಯಲ್ಲಿ ಅವಧಿ ಮೀರಿದ ಔಷಧ ಪತ್ತೆ: ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ಗೆ ಡಿಹೆಚ್‌ಒ ಸೂಚನೆ100 ಬೀದಿ ಹಸುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ವಕೀಲರುಸಿಂಧನೂರು ದಸರಾ ಉತ್ಸವ–2026ಕ್ಕೆ ಸಕಲ ಸಿದ್ಧತೆ: 11 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮಮಸ್ಕಿ ರಾಜಕೀಯ ವಲಯದಲ್ಲಿ ಯುವ ನಾಯಕ ಬಸವರಾಜ್ ಗಲಗಿನ ಹೆಸರು ಚರ್ಚೆಯಲ್ಲಿ!ರಾಯಚೂರು ಜಿಲ್ಲಾ ಪಂಚಾಯಿತಿಗೆ 39 ಸ್ಥಾನಗಳು; ಮಹಿಳೆಯರಿಗೆ 20 ಸ್ಥಾನ ಮೀಸಲುಬದುಕು ಎಂದರೆ… ಒಂದು ಕ್ಷಣದ ಅತಿಥಿಅಕ್ಟೋಬರ್ 04ರಂದು ರಾಯಚೂರಿಗೆ ಕೇಂದ್ರ ಬರ ಅಧ್ಯಯನ ತಂಡನೀರಾವರಿ ಸಮಸ್ಯೆ ಪರಿಹಾರಕ್ಕೆ ಅ.7ರಂದು ಸಭೆಅರಗಿನಮರ ಕ್ಯಾಂಪ್‌ನಲ್ಲಿ ಮೂಲಸೌಕರ್ಯ ಕೊರತೆಖಾಸಗಿ ಕಾಲೇಜುಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಪರಶುರಾಮ ಮಲ್ಲಾಪುರ ಆಯ್ಕೆಹಾಸ್ಟೆಲ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಗೌರವಪೂರ್ವಕ ಆಹ್ವಾನಅಕ್ಟೋಬರ್ 4ರಂದು ರಾಯಚೂರಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ಸಾಧ್ಯತೆ!“ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿ!”