ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಕಡಿವಾಣ ಹಾಕಿ: ಎಸ್‌ಎಫ್‌ಐ ಆಗ್ರಹ

ಮೇ 7ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ – ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬೃಹತ್ ಹೋರಾಟ

Advertisement

BB NEWS KANNADA 

Advertisement

ಕೊಪ್ಪಳ: ಖಾಸಗಿ, ಅನುದಾನ ರಹಿತ ಹಾಗೂ ಅನುದಾನಿತ ಶಾಲೆಗಳಲ್ಲಿ ನಡೆಯುತ್ತಿರುವ ಅಕ್ರಮ ಡೊನೇಷನ್ ವಸೂಲಿ ಮತ್ತು ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸಮಿತಿ ಮೇ 7ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಅದರ ಭಾಗವಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್‌ಎಫ್‌ಐ ಕೊಪ್ಪಳ ಜಿಲ್ಲಾ ಸಮಿತಿ ತಿಳಿಸಿದೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, 2025-26ನೇ ಶೈಕ್ಷಣಿಕ ವರ್ಷ ಮುಕ್ತಾಯಗೊಂಡು 2026-27ನೇ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಸಂದರ್ಭದಲ್ಲಿ ಶಾಲಾ ದಾಖಲಾತಿ ಪ್ರಕ್ರಿಯೆಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ ಅನೇಕ ಖಾಸಗಿ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆ-2009ರ ನಿಯಮಗಳನ್ನು ಉಲ್ಲಂಘಿಸಿ ಪೋಷಕರಿಂದ ಲಕ್ಷಾಂತರ ರೂಪಾಯಿ ಡೊನೇಷನ್ ಹಾಗೂ ಅನಧಿಕೃತ ಶುಲ್ಕಗಳನ್ನು ವಸೂಲಿ ಮಾಡುತ್ತಿವೆ ಎಂದು ಆರೋಪಿಸಿದರು.

ಶಿಕ್ಷಣ ಹಕ್ಕು ಕಾಯ್ದೆ-2009ರ ಸೆಕ್ಷನ್ 2(b) ಅನ್ವಯ ಖಾಸಗಿ ಶಾಲೆಗಳು ತಮ್ಮ ಶುಲ್ಕ ವಿವರಗಳನ್ನು ಶಾಲೆಯ ಸೂಚನಾ ಫಲಕ, ಶಾಲಾ ಜಾಲತಾಣ ಹಾಗೂ ಇಲಾಖೆಯ SATS ಪೋರ್ಟಲ್‌ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ಜೊತೆಗೆ ಸೆಕ್ಷನ್ 13 ಹಾಗೂ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012 ಪ್ರಕಾರ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಾತಿ ನಡೆಸಬೇಕು. ಆದರೆ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಈ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಎಸ್‌ಎಫ್‌ಐ ದೂರಿದೆ.

ತಾಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಖಾಸಗಿ ಶಾಲೆಗಳ ದಾಖಲಾತಿ ಪ್ರಕ್ರಿಯೆ ಹಾಗೂ ಶುಲ್ಕ ವಸೂಲಾತಿ ಬಗ್ಗೆ ಪರಿಶೀಲನೆ ನಡೆಸಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸಿ, ನಿಯಮ ಉಲ್ಲಂಘನೆ ಮಾಡುವ ಹಾಗೂ ಡೊನೇಷನ್ ಪಡೆಯುವ ಶಾಲೆಗಳ ಮಾನ್ಯತೆ ರದ್ದುಪಡಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ರಾಜ್ಯ ಸಮಿತಿಯ ಕರೆಯಂತೆ ಮೇ 7ರಂದು ನಡೆಯುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಈಚನಾಳ, ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ಉಪಾಧ್ಯಕ್ಷರಾದ ನಾಗರಾಜ್ ಯು., ಶರೀಫ್, ಹನುಮೇಶ್ ಮ್ಯಾಗೇಡೆ, ಜಂಟಿ ಕಾರ್ಯದರ್ಶಿಗಳಾದ ಬಸಯ್ಯ ಹೆಚ್., ದರ್ಶನ್ ಹೊಸ್ಕೆರ, ಕನಕಾಚಲ ಹಾಗೂ ಸದಸ್ಯರಾದ ಶರಣಬಸು ಬಾದ್ನಟ್ಟಿ, ಮೌನೇಶ್, ರಮೇಶ್, ಲಕ್ಷ್ಮಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್