ಸಿಂಧನೂರು, ಜುಲೈ 2: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಪಿಯುಸಿ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಬಾಡಿಗೆ ಕಟ್ಟಡದ ಅಗತ್ಯವಿದ್ದು, ಸೂಕ್ತ ಕಟ್ಟಡ ಹೊಂದಿರುವ ಆಸಕ್ತ ಮಾಲೀಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಂಧನೂರು ಪಟ್ಟಣದಲ್ಲಿರುವ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ಉದ್ದೇಶದಿಂದ ಹೊಸ ಕಟ್ಟಡವನ್ನು ಬಾಡಿಗೆ ಆಧಾರದ ಮೇಲೆ ಪಡೆಯಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.
ಸುಮಾರು 100 ರಿಂದ 200 ವಿದ್ಯಾರ್ಥಿಗಳು ವಾಸಿಸಲು ಅನುಕೂಲವಾಗುವಂತೆ ವಿಶಾಲ, ಸುರಕ್ಷಿತ ಹಾಗೂ ಮೂಲಸೌಕರ್ಯಗಳನ್ನು ಹೊಂದಿರುವ ಕಟ್ಟಡ ಬೇಕಾಗಿದ್ದು, ಸಂಬಂಧಿತ ನಿಯಮಗಳು ಮತ್ತು ಇಲಾಖೆಯ ಮಾನದಂಡಗಳಿಗೆ ಅನುಗುಣವಾಗಿರುವ ಕಟ್ಟಡಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬಾಡಿಗೆಗೆ ಕಟ್ಟಡ ನೀಡಲು ಆಸಕ್ತಿ ಹೊಂದಿರುವ ಕಟ್ಟಡ ಮಾಲೀಕರು ತಮ್ಮ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸಿಂಧನೂರು ಕಚೇರಿಯನ್ನು ಸಂಪರ್ಕಿಸಬಹುದು.
ಸಂಪರ್ಕ ವಿವರಗಳು:
ಕಚೇರಿ ದೂರವಾಣಿ: 08535-295527. ಮೊಬೈಲ್: 9480843185 ಇ-ಮೇಲ್: [email protected] ಹೆಚ್ಚಿನ ಮಾಹಿತಿಗಾಗಿ ಆಸಕ್ತ ಕಟ್ಟಡ ಮಾಲೀಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಇಲಾಖೆಯು ಮನವಿ ಮಾಡಿದೆ.













