ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿ

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಗೆ ಮನವಿ

Advertisement

📍ಸಿಂಧನೂರು : ತಾಲೂಕಿನ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಗೋ ಸಾಗಾಟ ಮತ್ತು ಗೋಹತ್ಯೆ ನಡೆಯುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಿಂಧನೂರು ಘಟಕದ ಪದಾಧಿಕಾರಿಗಳು ಗ್ರಾಮೀಣ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು.

Advertisement

news_1779725225_0_325.webp

ಈ ಕುರಿತು ಮನವಿ ಸಲ್ಲಿಸಿರುವ ಸಂಘಟನೆಗಳ ಪದಾಧಿಕಾರಿಗಳು, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಅಧಿನಿಯಮ 2020ರ ಅಡಿಯಲ್ಲಿ ಗೋ ಹತ್ಯೆ ನಿಷೇಧಿಸಲಾಗಿದ್ದರೂ ಕೆಲವರು ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಂಧನೂರಿನ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋಹತ್ಯೆ ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

news_1778905892_0_440.webp

news_1778142080_0_556.webp

ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವ ವಾಹನಗಳನ್ನು ತಡೆದು ಪರಿಶೀಲನೆ ನಡೆಸಬೇಕು. ಗೋ ಹತ್ಯೆಗೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ರಾತ್ರಿ ವೇಳೆ ವಿಶೇಷ ತಪಾಸಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ. ಅದೇ ರೀತಿ ಗೋ ರಕ್ಷಣೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಿ, ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

news_1777986246_0_709.webp

ಮನವಿಯ ಪ್ರತಿಯಲ್ಲಿ ಸಿಂಧನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಾತ್ರಿ ಸಮಯದಲ್ಲಿ ಅನುಮಾನಾಸ್ಪದ ವಾಹನಗಳ ಸಂಚಾರ ಹೆಚ್ಚಾಗಿದೆ ಎಂಬ ಆರೋಪವೂ ಮಾಡಲಾಗಿದೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಪ್ರಮುಖರಾದ ದೇವರಾಜ ಪಾಟೀಲ್, ನಾಗರಾಜ ಪವಾರ್, ತಿಮ್ಮಪ್ಪ ಕೆಂಗೋಡಮಾರ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ