ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಡೊನೇಷನ್ ಹಾವಳಿ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ

ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಇಒಗೆ ಮನವಿ

Advertisement

news_1778048979_0_441.webp

Advertisement

ಮೇ 07. ಕೊಪ್ಪಳ BB NEWS KANNADA 

ಗಂಗಾವತಿ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಡೊನೇಷನ್ ಹಾವಳಿ ತಡೆಗಟ್ಟಲು ಹಾಗೂ ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ’ ರಚಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಗಂಗಾವತಿ ತಾಲೂಕು ಸಮಿತಿಯವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

news_1778142080_0_556.webp

ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಮಾತನಾಡಿ, ರಾಜ್ಯದ ಅನೇಕ ಖಾಸಗಿ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆ-1983 ಮತ್ತು 2009ರ ಆರ್‌ಟಿಇ ಕಾಯ್ದೆಯನ್ನು ಉಲ್ಲಂಘಿಸಿ ದಾಖಲಾತಿ ಹೆಸರಿನಲ್ಲಿ ಡೊನೇಷನ್ ವಸೂಲಿ ಮಾಡುತ್ತಿವೆ ಎಂದು ಆರೋಪಿಸಿದರು. ಬಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದು ಕಷ್ಟಕರವಾಗುತ್ತಿದೆ ಎಂದು ಹೇಳಿದರು.

news_1778154664_0_896.webp

ಖಾಸಗಿ ಶಾಲೆಗಳು ಅನಧಿಕೃತವಾಗಿ ಪ್ರವೇಶ ಪರೀಕ್ಷೆ ನಡೆಸುವುದು, JEE, NEET, CET ತರಬೇತಿ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದು, ಶಾಲಾ ಸಾಮಗ್ರಿಗಳನ್ನು ಕಡ್ಡಾಯವಾಗಿ ಖರೀದಿಸಲು ಒತ್ತಾಯಿಸುವ ಮೂಲಕ ಪಾಲಕರ ಮೇಲೆ ಆರ್ಥಿಕ ಭಾರ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

news_1777986246_0_709.webp

 

news_1777986272.webp

ತಾಲೂಕ ಅಧ್ಯಕ್ಷ ನಾಗರಾಜ್ ಯು ಮಾತನಾಡಿ, ಸರ್ಕಾರ ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ ಆವರಣದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ನಿಯಮ ಮೀರಿ ಡೊನೇಷನ್ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅನಧಿಕೃತ ಟ್ಯೂಷನ್ ಸೆಂಟರ್‌ಗಳನ್ನು ತಕ್ಷಣ ಮುಚ್ಚಬೇಕು ಎಂದು ಒತ್ತಾಯಿಸಿದರು.

news_1777804015_0_413.webp

 

ಪ್ರಮುಖ ಹಕ್ಕೊತ್ತಾಯಗಳು:

ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರವನ್ನು ತಕ್ಷಣ ರಚಿಸಬೇಕು.

ಡೊನೇಷನ್ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.

ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರ ನೇತೃತ್ವದಲ್ಲಿ ಪಾಲಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಸಭೆ ಕರೆಯಬೇಕು.

ಸರ್ಕಾರ ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲೆಗಳ ಮುಂದೆ ಕಡ್ಡಾಯವಾಗಿ ಪ್ರದರ್ಶಿಸಬೇಕು.

ನಿಯಮ ಮೀರಿ ಪ್ರವೇಶ ಪರೀಕ್ಷೆ ನಡೆಸುವ ಹಾಗೂ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ದಂಡ ವಿಧಿಸಬೇಕು.

ಅನಧಿಕೃತ ಟ್ಯೂಷನ್ ಸೆಂಟರ್ ಹಾಗೂ ಖಾಸಗಿ ಶಾಲೆಗಳನ್ನು ನಿಯಂತ್ರಿಸಬೇಕು.

ಮನವಿಗೆ ಸ್ಪಂದಿಸಿದ ಬಿಇಒ ಅಧಿಕಾರಿ ನಟೇಶ್ ಅವರು, ಡೊನೇಷನ್ ವಸೂಲಿ ಹಾಗೂ ಫೀ ವಿವರಗಳ ಫ್ಲೆಕ್ಸ್ ಪ್ರದರ್ಶಿಸದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

news_1777542755_0_368.webp

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ತಾಲೂಕ ಅಧ್ಯಕ್ಷ ನಾಗರಾಜ್ ಯು, ಬಾಳಪ್ಪ ಹುಲಿಹೈದರ್, ಬಸಯ್ಯ, ಶರಣಬಸವ ಬಾದ್ನಟ್ಟಿ, ದೊಡ್ಡಬಸವ, ಯಂಕಣ್ಣ, ಅಲ್ತಾಫ್, ಕಾರ್ತಿಕ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿ