ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

“ಸಿದ್ದರಾಮಯ್ಯ ವ್ಯಕ್ತಿ ಅಲ್ಲ… ಒಂದು ಶಕ್ತಿ”

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಡಾ. ಹೆಚ್.ಸಿ. ಮಹದೇವಪ್ಪ ಮನದಾಳದ ಮಾತು

Advertisement

 

Advertisement

ಬೆಂಗಳೂರು : “ಸಿದ್ದರಾಮಯ್ಯ ಅವರು ಕೇವಲ ವ್ಯಕ್ತಿಯಲ್ಲ, ಒಂದು ಶಕ್ತಿ. ಜನಸಾಮಾನ್ಯರ ಆಶಯ, ಹೋರಾಟ ಮತ್ತು ಸಾಮಾಜಿಕ ನ್ಯಾಯದ ಪ್ರತೀಕ” ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ.

news_1780027666_0_213.webp

ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿರುವ ಅವರು, ಗಣಿ ಧೂಳಿ ಮತ್ತು ರಾಜಕೀಯ ಅರಾಜಕತೆಯಿಂದ ಅಕ್ಷರಶಃ ನಲುಗಿ ಹೋಗಿದ್ದ ಬಳ್ಳಾರಿಯ ನೆಲದಲ್ಲಿ ಪಾದಯಾತ್ರೆ ನಡೆಸಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿಗೆ ಮುನ್ನುಡಿ ಬರೆದದ್ದು ಸಿದ್ದರಾಮಯ್ಯ ಅವರ ರಾಜಕೀಯ ಜೀವನದ ಮಹತ್ವದ ಘಟ್ಟ ಎಂದು ಉಲ್ಲೇಖಿಸಿದ್ದಾರೆ. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರು ನೀಡಿದ ಆಡಳಿತ ರಾಜ್ಯದ ಇತಿಹಾಸದಲ್ಲಿ ವಿಶೇಷ ಅಧ್ಯಾಯವಾಗಿದ್ದು, ಜನಪರ ಯೋಜನೆಗಳು ಮತ್ತು ಸಾಮಾಜಿಕ ನ್ಯಾಯದ ಪರವಾದ ಆಡಳಿತದಿಂದ ಅವರು ರಾಜ್ಯದ ಜನಮನ ಗೆದ್ದಿದ್ದರು ಎಂದು ಅವರು ಹೇಳಿದ್ದಾರೆ.

news_1780037113_0_501.webp

news_1778905892_0_440.webp

ಮೈಸೂರಿನ ಒಂದು ಸಣ್ಣ ಹಳ್ಳಿಯಿಂದ ಹೊರಟು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ಏರಿದ ಸಿದ್ದರಾಮಯ್ಯ ಅವರು, ತಮ್ಮ ರಾಜಕೀಯ ಜೀವನವನ್ನೇ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ಜನರ ಹಕ್ಕುಗಳಿಗಾಗಿ ಸಮರ್ಪಿಸಿಕೊಂಡಿದ್ದರು. ಸಾಮಾಜಿಕ ನ್ಯಾಯದ ಕನಸನ್ನು ಸಾಕಾರಗೊಳಿಸಲು ಅವರು ತೋರಿದ ಬದ್ಧತೆ ಮತ್ತು ಹೋರಾಟ ಕನ್ನಡನಾಡಿನ ರಾಜಕೀಯ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿರಲಿದೆ ಎಂದು ಮಹದೇವಪ್ಪ ತಿಳಿಸಿದ್ದಾರೆ.

news_1778142080_0_556.webp

“ಸುಮಾರು ನಾಲ್ಕು ದಶಕಗಳ ಕಾಲ ಅವರೊಂದಿಗೆ ಒಡನಾಟ ಹೊಂದಿರುವ ನಾನು, ಅನೇಕ ಏಳುಬೀಳುಗಳನ್ನು ಹತ್ತಿರದಿಂದ ಕಂಡಿದ್ದೇನೆ. ಆದರೆ ಯಾವುದೇ ಸಂಕಷ್ಟ ಬಂದರೂ ಜನರ ಪ್ರೀತಿ ಮತ್ತು ಬೆಂಬಲದ ಶಕ್ತಿಯಿಂದ ಅವರು ಎಲ್ಲ ಮತೀಯ ಹಾಗೂ ಫ್ಯೂಡಲ್ ಶಕ್ತಿಗಳ ವಿರುದ್ಧ ದಿಟ್ಟವಾಗಿ ನಿಂತು ಜಯ ಸಾಧಿಸಿದರು. ಅವರ ಎದೆಗಾರಿಕೆ ಸಾರ್ವಜನಿಕ ಜೀವನಕ್ಕೆ ಬರುವ ಪ್ರತಿಯೊಬ್ಬರಿಗೂ ಮಾದರಿ” ಎಂದು ಅವರು ಹೇಳಿದ್ದಾರೆ. ಸಾಮಾನ್ಯ ಜನರ ಭಾವನೆಗಳನ್ನು ಅರ್ಥಮಾಡಿಕೊಂಡು ರಾಜಕೀಯದಲ್ಲಿ ಬೆಳೆದ ಸಿದ್ದರಾಮಯ್ಯ ಅವರು, ತಮ್ಮ aggressive nature ಅನ್ನು ಕಾಲಕ್ರಮೇಣ ಸಮಚಿತ್ತ ಮನೋಭಾವಕ್ಕೆ ಪರಿವರ್ತಿಸಿಕೊಂಡರು. ಕಳೆದ ಒಂದು ದಶಕದಲ್ಲಿ ಅವರು ರೂಢಿಸಿಕೊಂಡ ರಾಜಕೀಯ ಪ್ರೌಢಿಮೆ, ತಾಳ್ಮೆ ಮತ್ತು ನಿರ್ಧಾರ ಸಾಮರ್ಥ್ಯವೇ ಅವರ ಯಶಸ್ಸಿಗೆ ಪ್ರಮುಖ ಕಾರಣ ಎಂದು ಅವರು ವಿಶ್ಲೇಷಿಸಿದ್ದಾರೆ.

news_1777986246_0_709.webp

“ಇಂತಹ ಧೀಮಂತ ನಾಯಕ, ಆಧುನಿಕ ಕರ್ನಾಟಕ ರಾಜಕೀಯದ ಅರಸನೆಂದೇ ಕರೆಯಬಹುದಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ರಾಜೀನಾಮೆ ಸಲ್ಲಿಸಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ” ಎಂದು ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೊನೆಯಲ್ಲಿ, “ಜಾತಿ-ಧರ್ಮದ ಭೇದವಿಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ ಸಿದ್ದರಾಮಯ್ಯ ಅವರಿಗೆ ಮುಂದಿನ ದಿನಗಳಲ್ಲಿಯೂ ಒಳಿತು, ಯಶಸ್ಸು ಮತ್ತು ಜನಾಶೀರ್ವಾದ ದೊರೆಯಲಿ ಎಂದು ಮನದುಂಬಿ ಹಾರೈಸುತ್ತೇನೆ” ಎಂದು ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್