ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹಾಸ್ಟೆಲ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

180ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ; ಅಧಿಕಾರಿಗಳ ವಿರುದ್ಧ ಆಕ್ರೋಶ

Advertisement

https://youtube.com/shorts/jWd7QT_K3pY

Advertisement

ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಹಾಸ್ಟೆಲ್‌ನ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಹಾಸ್ಟೆಲ್‌ನಿಂದ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು. ಹಾಸ್ಟೆಲ್‌ನಲ್ಲಿ 180ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಾಗಿದ್ದು, ಹಲವು ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.

https://www.instagram.com/reel/Dd3fTkBJjX1/?utm_source=ig_web_copy_link&stkn=MzRlODBiNWFlZA==

 

ಹಾಸ್ಟೆಲ್‌ನಲ್ಲಿ ಊಟದ ಕೊರತೆ, ಸ್ವಚ್ಛತೆಯ ಕೊರತೆ, ಶೌಚಾಲಯಗಳ ಅವ್ಯವಸ್ಥೆ, ಬಿಸಿ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಅಲ್ಲದೆ, ಕಿಟಕಿ, ಫ್ಯಾನ್ ಹಾಗೂ ಬಾಗಿಲುಗಳು ದುರಸ್ತಿ ಅಗತ್ಯವಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. ಹಾಸ್ಟೆಲ್‌ನಲ್ಲಿ ವಾಚ್‌ಮನ್ ಕೊರತೆ, ಲೈಬ್ರರಿ ಪುಸ್ತಕಗಳ ಕೊರತೆ ಹಾಗೂ ಸಿಸಿ ಕ್ಯಾಮೆರಾಗಳ ಕೊರತೆ ಕೂಡ ಇದೆ. ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂಬ ಆರೋಪವೂ ವಿದ್ಯಾರ್ಥಿಗಳಿಂದ ಕೇಳಿಬಂದಿದೆ. ಮುಖ್ಯವಾಗಿ, ಹಾಸ್ಟೆಲ್‌ಗೆ ವಾರ್ಡನ್ ಇಲ್ಲದಿರುವುದು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸಿದೆ. ಕೂಡಲೇ ವಾರ್ಡನ್ ನೇಮಕ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

news_1790676395_0_601.webp

ಸಮಸ್ಯೆಗಳನ್ನು ಪರಿಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ತಾಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಸಾಥ್ ನೀಡಿದರು. ಪ್ರತಿಭಟನೆ ವೇಳೆ ಕೆಲವು ವಿದ್ಯಾರ್ಥಿನಿಯರು ಅಸ್ವಸ್ಥರಾದರು. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಸಂಬಂಧಪಟ್ಟ ಡಿಡಿ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಅಗತ್ಯ ಸಿಬ್ಬಂದಿ ನೇಮಕ, ವಾರ್ಡನ್ ವ್ಯವಸ್ಥೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಖಾಸಗಿ ಕಾಲೇಜುಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಪರಶುರಾಮ ಮಲ್ಲಾಪುರ ಆಯ್ಕೆಹಾಸ್ಟೆಲ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಗೌರವಪೂರ್ವಕ ಆಹ್ವಾನಅಕ್ಟೋಬರ್ 4ರಂದು ರಾಯಚೂರಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ಸಾಧ್ಯತೆ!“ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿ!”ಸಿಂಧನೂರಿನಲ್ಲಿ ಸೆ.23ರಿಂದ ಉದ್ಯಮಶೀಲತಾ ತರಬೇತಿಮನೋರೋಗ ತಜ್ಞರು, ಸಾಮಾಜಿಕ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರ