ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರ

'ತಮಿಳುನಾಡಿನ ಮಾದರಿಯ ಜನಸ್ನೇಹಿ ಆಡಳಿತ ಕರ್ನಾಟಕದಲ್ಲೂ ಬರಲಿ' – ಸಾಮಾಜಿಕ ಹೋರಾಟಗಾರ ಪರಶುರಾಮ್ ಮಲ್ಲಾಪುರ ಆಗ್ರಹ

Advertisement

ಸಿಂಧನೂರು: ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯದಿರುವುದು, ವೈದ್ಯರನ್ನು ಹುಡುಕುತ್ತಲೇ ರೋಗಿಗಳು ಹಾಗೂ ಅವರ ಕುಟುಂಬಸ್ಥರು ಪರದಾಡುವ ಪರಿಸ್ಥಿತಿ ಕುರಿತು ಬಡವರ ಬರ್ಕೋಲು ಪ್ರಕಟಿಸಿದ್ದ "ಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ? ವೈದ್ಯರ ಹುಡುಕಾಟವೇ ದೊಡ್ಡ ಚಿಕಿತ್ಸೆ" ಎಂಬ ವರದಿಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

Advertisement

news_1783566594.webp

ಈ ವರದಿಯ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ ಪರಶುರಾಮ್ ಮಲ್ಲಾಪುರ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಆರೋಗ್ಯ ವ್ಯವಸ್ಥೆಯಲ್ಲಿನ ಸಮಸ್ಯೆಗಳ ಜೊತೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜನಸ್ನೇಹಿ ಕಾರ್ಯವೈಖರಿ ಕುರಿತು ಪ್ರಶ್ನೆ ಎತ್ತಿದ್ದಾರೆ. ಅವರು ಮಾತನಾಡಿ, "ತಮಿಳುನಾಡಿನ ಮುಖ್ಯಮಂತ್ರಿ ಅವರ ಕಾರ್ಯವೈಖರಿಯನ್ನು ನೋಡಿದಾಗ ನಮ್ಮ ದೇಶದ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ಇತ್ತೀಚೆಗೆ ಒಬ್ಬ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ತನ್ನ ಸಮಸ್ಯೆಯನ್ನು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಸ್ವತಃ ಭೇಟಿ ನೀಡಿ ಸಮಸ್ಯೆ ಆಲಿಸಿ, ಅಧಿಕಾರಿಗಳಿಗೆ ತಕ್ಷಣವೇ ಪರಿಹಾರಕ್ಕೆ ಸೂಚನೆ ನೀಡಿದ ಘಟನೆ ಜನಸ್ನೇಹಿ ಆಡಳಿತಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ" ಎಂದು ಹೇಳಿದರು.

news_1781778738_0_399.webp

ಜನರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಆಡಳಿತವೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ, ತಕ್ಷಣ ಪರಿಹಾರ ಕಲ್ಪಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲೂ ಇಂತಹ ಸ್ಪಂದನಶೀಲ ಆಡಳಿತದ ಅಗತ್ಯವಿದೆ ಎಂದು ಹೇಳಿದ ಅವರು, "ಆಸ್ಪತ್ರೆಯಲ್ಲಿ ವೈದ್ಯರು ಲಭ್ಯವಿಲ್ಲ, ರೋಗಿಗಳು ಗಂಟೆಗಟ್ಟಲೆ ಕಾಯಬೇಕಾಗಿದೆ, ಕೆಲವೊಮ್ಮೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲೇ ಇಂತಹ ಪರಿಸ್ಥಿತಿ ಇದ್ದರೆ ಬಡವರು ಎಲ್ಲಿಗೆ ಹೋಗಬೇಕು?" ಯಾರನ್ನ ಕೇಳಬೇಕು ಇದಕ್ಕೆ ಯಾರು ಹೊಣೆಗಾರರು ಎಂದು ಪ್ರಶ್ನಿಸಿದರು 

news_1779340187_0_802.webp

ಸರ್ಕಾರಿ ಆಸ್ಪತ್ರೆಗಳು ಬಡವರ ಪಾಲಿನ ಆಶಾಕಿರಣವಾಗಬೇಕು. ಆದರೆ ಅನೇಕ ಕಡೆ ವೈದ್ಯರ ಕೊರತೆ, ಸಿಬ್ಬಂದಿ ಅಭಾವ, ಸೂಕ್ತ ಮೇಲ್ವಿಚಾರಣೆಯ ಕೊರತೆಯಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ತಾತ್ಕಾಲಿಕವಲ್ಲ, ಶಾಶ್ವತ ಪರಿಹಾರ ಕಂಡುಹಿಡಿಯುವ ಜವಾಬ್ದಾರಿ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಮೇಲಿದೆ ಎಂದು ಅವರು ಹೇಳಿದರು. ಇದೇ ವೇಳೆ, ಜನರು ಸಾಮಾಜಿಕ ಜಾಲತಾಣಗಳಲ್ಲಿ ಸಮಸ್ಯೆಗಳನ್ನು ಹಂಚಿಕೊಂಡಾಗ ಅವುಗಳನ್ನು ಟೀಕೆಯಾಗಿ ಪರಿಗಣಿಸದೆ, ಜನರ ಧ್ವನಿಯಾಗಿ ಸ್ವೀಕರಿಸಿ ಅಧಿಕಾರಿಗಳು ತಕ್ಷಣ ಸ್ಪಂದಿಸುವ ವ್ಯವಸ್ಥೆ ಕರ್ನಾಟಕದಲ್ಲೂ ಜಾರಿಗೆ ಬರಬೇಕು ಎಂದು ಅವರು ಒತ್ತಾಯಿಸಿದರು.

news_1783488946_0_647.webp

"ತಮಿಳುನಾಡಿನ ಮಾದರಿಯ ತ್ವರಿತ ಸ್ಪಂದನೆ, ಜನರ ಕಷ್ಟಗಳಿಗೆ ಆದ್ಯತೆ, ಹೊಣೆಗಾರಿಕೆಯ ಆಡಳಿತ ಮತ್ತು ಜನರೊಂದಿಗೆ ನೇರ ಸಂಪರ್ಕ ಹೊಂದಿರುವ ವ್ಯವಸ್ಥೆ ನಮ್ಮ ಕರ್ನಾಟಕದಲ್ಲಿಯೂ ಯಾವಾಗ ಕಾಣಲು ಸಾಧ್ಯವಾಗುತ್ತದೆ?" ಎಂಬ ಪ್ರಶ್ನೆಯನ್ನು ಪರಶುರಾಮ್ ಮಲ್ಲಾಪುರ ಸರ್ಕಾರದ ಮುಂದಿಟ್ಟಿದ್ದಾರೆ. ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಬಗ್ಗೆ ಈಗಾಗಲೇ ಹಲವು ಬಾರಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಧ್ವನಿ ಎತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಂಭೀರವಾಗಿ ಗಮನಹರಿಸಿ, ವೈದ್ಯರ ಕೊರತೆ ಸೇರಿದಂತೆ ಆರೋಗ್ಯ ಸೇವೆಯಲ್ಲಿನ ಲೋಪಗಳನ್ನು ಶೀಘ್ರದಲ್ಲೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪರುಶುರಾಮ ಮಲ್ಲಾಪುರ
ಪರುಶುರಾಮ ಮಲ್ಲಾಪುರ

— ವರದಿ: ಬಡವರ ಬಾರಕೋಲು ನ್ಯೂಸ್ ಕನ್ನಡ 

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ