ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!

ಭ್ರಷ್ಟ ಪೊಲೀಸರ ಕಾನೂನುಬಾಹಿರ ಕೃತ್ಯಗಳಿಂದ ನಿಷ್ಠಾವಂತ ಅಧಿಕಾರಿಗಳಿಗೂ ಕೆಟ್ಟ ಹೆಸರು – ಜನರ ವಿಶ್ವಾಸ ಉಳಿಸಿಕೊಳ್ಳುವುದು ಇಲಾಖೆಗೆ ಸವಾಲು

Advertisement

ರಾಯಚೂರು, ಜೂನ್ 20: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದರಿಂದ ಜನಸ್ನೇಹಿ ಹಾಗೂ ನಿಷ್ಠಾವಂತ ಪೊಲೀಸ್ ಅಧಿಕಾರಿಗಳಿಗೂ ಕೆಟ್ಟ ಹೆಸರು ಬರುವಂತಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿ ಸಾವಿರಾರು ನಿಷ್ಠಾವಂತ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಹಗಲಿರುಳು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಕೆಲ ಕಪ್ಪು ಕುರಿಗಳ ವರ್ತನೆಯಿಂದ ಇಡೀ ಇಲಾಖೆಯ ಗೌರವ ಮತ್ತು ವಿಶ್ವಾಸಕ್ಕೆ ಧಕ್ಕೆಯಾಗುತ್ತಿದೆ. ಲಂಚ ಸ್ವೀಕಾರ, ದರೋಡೆ, ಕಿರುಕುಳ, ಅಧಿಕಾರ ದುರುಪಯೋಗ, ಅಸಭ್ಯ ವರ್ತನೆ ಹಾಗೂ ಲೋಕಾಯುಕ್ತ ದಾಳಿಗೆ ಒಳಗಾಗುವಂತಹ ಪ್ರಕರಣಗಳಲ್ಲಿ ಕೆಲ ಪೊಲೀಸ್ ಸಿಬ್ಬಂದಿ ಭಾಗಿಯಾಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

Advertisement

 

ಇತ್ತೀಚೆಗೆ ಬೆಂಗಳೂರಿನಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ವಿರುದ್ಧ ₹20 ಲಕ್ಷ ಸುಲಿಗೆ ಆರೋಪ ಕೇಳಿಬಂದು ಬಂಧನವಾಗಿರುವ ಘಟನೆ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೂ ಮುನ್ನ ವಿವಿಧ ಜಿಲ್ಲೆಗಳಲ್ಲಿ ಲಂಚ ಸ್ವೀಕಾರ, ಅಕ್ರಮ ಹಣ ವಸೂಲಿ ಹಾಗೂ ಅಧಿಕಾರ ದುರುಪಯೋಗದ ಆರೋಪಗಳಲ್ಲಿ ಕೆಲ ಪೊಲೀಸ್ ಸಿಬ್ಬಂದಿ ಸಿಕ್ಕಿಬಿದ್ದಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಇಂತಹ ಘಟನೆಗಳು ನಡೆದಾಗ ಸಾರ್ವಜನಿಕರು ಕೆಲ ವ್ಯಕ್ತಿಗಳ ತಪ್ಪನ್ನು ಇಡೀ ಪೊಲೀಸ್ ಇಲಾಖೆಗೆ ಹೋಲಿಕೆ ಮಾಡುತ್ತಾರೆ. ಪರಿಣಾಮವಾಗಿ ಜನಸ್ನೇಹಿ, ಪ್ರಾಮಾಣಿಕ ಹಾಗೂ ಕರ್ತವ್ಯನಿಷ್ಠ ಅಧಿಕಾರಿಗಳ ಮೇಲೂ ಅನುಮಾನ ಮೂಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಜನರ ವಿಶ್ವಾಸ ಗಳಿಸಲು ವರ್ಷಗಳ ಕಾಲ ಶ್ರಮಿಸುವ ನಿಷ್ಠಾವಂತ ಅಧಿಕಾರಿಗಳ ಗೌರವಕ್ಕೆ ಕೆಲವರ ಕಾನೂನುಬಾಹಿರ ಚಟುವಟಿಕೆಗಳು ಮಸಿ ಬಳಿಯುವಂತಾಗುತ್ತಿದೆ.

news_1780037113_0_501.webp

news_1779340187_0_802.webp

ಪೊಲೀಸರು ಸಮಾಜದಲ್ಲಿ ಕಾನೂನು ಪಾಲನೆಗೆ ಮಾದರಿಯಾಗಬೇಕಾದವರು. ಆದರೆ ಕೆಲವರು ಕಾನೂನು ಉಲ್ಲಂಘಿಸುವ ಕೃತ್ಯಗಳಲ್ಲಿ ತೊಡಗಿದಾಗ ಜನರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಭಯ, ಗೌರವ ಹಾಗೂ ವಿಶ್ವಾಸ ಕುಸಿಯುತ್ತದೆ. ಇದು ಕೇವಲ ವ್ಯಕ್ತಿಗತ ತಪ್ಪಲ್ಲ, ಇಲಾಖೆಯ ಪ್ರತಿಷ್ಠೆಯ ಮೇಲೂ ನೇರ ಪರಿಣಾಮ ಬೀರುತ್ತದೆ. ಆದ್ದರಿಂದ ಪೊಲೀಸ್ ಇಲಾಖೆ ಹಾಗೂ ಗೃಹ ಇಲಾಖೆ ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ನಿರ್ದಾಕ್ಷಿಣ್ಯ ಶಿಕ್ಷೆ ವಿಧಿಸುವ ಮೂಲಕ ಇಲಾಖೆಯ ಘನತೆ ಮತ್ತು ಜನರ ವಿಶ್ವಾಸವನ್ನು ಉಳಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

"ಒಬ್ಬ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಸಮಾಜದ ಹೆಮ್ಮೆ; ಆದರೆ ಒಬ್ಬ ಭ್ರಷ್ಟ ಪೊಲೀಸ್ ಅಧಿಕಾರಿ ಇಡೀ ಇಲಾಖೆಗೆ ಕಪ್ಪು ಚುಕ್ಕೆ."

news_1778905892_0_440.webp

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ