ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಟ್ರಾಕ್ಟರ್ ಪಲ್ಟಿಯಾಗಿ ಕೆರೆಗೆ ಬಿದ್ದು ಇಬ್ಬರ ದುರ್ಮರಣ

ತಿಪ್ಪೆಗೊಬ್ಬರ ಸಾಗಣೆ ವೇಳೆ ದುರಂತ – ಸಿಂಧನೂರು ತಾಲೂಕಿನಲ್ಲಿ ಶೋಕ

Advertisement

ಸಿಂಧನೂರು | ಮಾರ್ಚ್ 28

Advertisement

ತಿಪ್ಪೆಗೊಬ್ಬರ (ಜಾನುವಾರುಗಳ ಸಗಣಿ) ತುಂಬಿಕೊಂಡು ಜಮೀನಿಗೆ ತೆರಳುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲೂಕಿನ 4 ಮೈಲ್ ಕ್ಯಾಂಪ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು 4 ಮೈಲ್ ಕ್ಯಾಂಪ್ ನಿವಾಸಿ ವಿರುಪನಗೌಡ ಅಯ್ಯನಗೌಡ (50) ಹಾಗೂ ವಿರುಪಾಪೂರು ಗ್ರಾಮದ ನಿವಾಸಿ ಸುಖಮುನಿಯಪ್ಪ ಸಂತೇರ್ (30) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ತಿಪ್ಪೆಗೊಬ್ಬರವನ್ನು ಟ್ರಾಕ್ಟರ್‌ನಲ್ಲಿ ತುಂಬಿಕೊಂಡು ಹೊಲಕ್ಕೆ ಸಾಗಿಸುತ್ತಿದ್ದ ವೇಳೆ ಟ್ರಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಮಾರ್ಗ ಮಧ್ಯೆ ಇರುವ ಕೆರೆಗೆ ಮುಗುಚಿ ಬಿದ್ದಿದ್ದು, ಟ್ರಾಕ್ಟರ್‌ನಲ್ಲಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ, ಆಗಾಗಲೇ ಇಬ್ಬರೂ ಮೃತಪಟ್ಟಿರುವುದು ತಿಳಿದುಬಂದಿದೆ. ದುರಂತ ಕ್ಷಣಾರ್ಧದಲ್ಲಿ ಸಂಭವಿಸಿರುವುದರಿಂದ ರಕ್ಷಣೆ ಕಾರ್ಯ ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ದುರ್ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಗಳಿಗೆ ಆಘಾತ ಉಂಟಾಗಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ